Monday, November 25, 2024
Homeರಾಷ್ಟ್ರೀಯ | Nationalಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಪ್ರಿಯಾಂಕಾ

ಪ್ರಧಾನಿ ಮೋದಿಯನ್ನು ಹಾಡಿ ಹೊಗಳಿದ ಪ್ರಿಯಾಂಕಾ

Priyanka Chaturvedi Praises PM Modi

ಮುಂಬೈ,ಅ.20- ಪ್ರಧಾನ ಮಂತ್ರಿ ನರೇಂದ್ರ ಮೋದಿ ಓರ್ವ ಶ್ರೇಷ್ಠ ರಾಜಕಾರಣಿ ಎಂದು ಶಿವಸೇನೆಯ ಉದ್ಧವ್ ಠಾಕ್ರೆ ಬಣದ ಸಂಸದೆ ಪ್ರಿಯಾಂಕಾ ಚತುರ್ವೇದಿ ಹೊಗಳಿಕೆಯ ಮಾತುಗಳನ್ನಾಡಿದ್ದಾರೆ.

ಪ್ರಧಾನಿ ಮೋದಿ ದೇಶದ ಮತದಾರರ ಮನ ಗೆದ್ದಿದ್ದಾರೆ. ಅದರಲ್ಲೂ ಮಹಿಳೆಯರೂ ಹಾಗೂ ಯುವಕರ ಮನಸ್ಸನ್ನು ಅವರು ಅರ್ಥ ಮಾಡಿಕೊಂಡಿದ್ದಾರೆ. ಮೋದಿ 2014ರಲ್ಲಿ ಮೊದಲ ಬಾರಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಲೋಕಸಭೆ ಚುನಾವಣೆಯಲ್ಲಿ ಮೋದಿ ಅಲೆ ಸೃಷ್ಟಿಸಿದ್ದರು ಎಂದಿರುವ ಅವರು, ಮೋದಿ ಏಕೆ ಶ್ರೇಷ್ಠ ರಾಜಕಾರಣಿ ಎಂಬುದನ್ನು ವಿವರಿಸಿದ್ದಾರೆ.

ಹತ್ತು ವರ್ಷಗಳ ನಂತರ ಬಿಜೆಪಿ ನೇತೃತ್ವದ ಎನ್ಡಿಎ ಕೇಂದ್ರದಲ್ಲಿ ಮತ್ತೆ ಅಧಿಕಾರಕ್ಕೆ ಬಂದಿದೆ. ದೇಶದ ಮೂಲೆ ಮೂಲೆಯಲ್ಲಿ ಮೋದಿ ಅಲೆಯನ್ನು ಕಾಣಬಹುದು. 2024 ರ ಚುನಾವಣೆಯಲ್ಲಿ ಬಿಜೆಪಿಯ ಸ್ಥಾನಗಳು ಸ್ವಲ್ಪ ಕಡಿಮೆಯಾಗಿದೆ. ಬಿಜೆಪಿಗೆ ಒಂದೇ ಬಹುಮತ ಬಂದಿಲ್ಲ. ಬೇರೆ ಪಕ್ಷಗಳ ಸಹಕಾರದೊಂದಿಗೆ ಸರ್ಕಾರ ರಚಿಸಿದ್ದಾರೆ. ಹಾಗೆಂದ ಮಾತ್ರಕ್ಕೆ ಮೋದಿ ಪ್ರಭಾವ ಕಡಿಮೆಯಾಗಿದೆ ಎಂದರ್ಥವಲ್ಲ ಎಂದರು. ಬಿಜೆಪಿ ಹಾಗೂ ಉದ್ಧವ್ ಠಾಕ್ರೆಯ ಶಿವಸೇನೆ ನಡುವೆ ಸಂಬಂಧ ಚೆನ್ನಾಗಿಲ್ಲ, ಸದಾ ಮೋದಿ ವಿರುದ್ಧ ಹೇಳಿಕೆ ನೀಡುತ್ತಿದ್ದ ಪ್ರಿಯಾಂಕಾ ಚತುರ್ವೇದಿ ಅವರನ್ನು ಹೊಗಳಿರುವುದು ಎಲ್ಲರಲ್ಲೂ ಆಶ್ಚರ್ಯ ಮೂಡಿಸಿದೆ.

ಒಂದು ಕಾಲದಲ್ಲಿ ಬಿಜೆಪಿ ಮತ್ತು ಶಿವಸೇನೆ ಒಂದೇ ಮೈತ್ರಿಯಲ್ಲಿತ್ತು. ಕೆಲವು ವರ್ಷಗಳ ಹಿಂದೆ ಉದ್ಧವ್ ಠಾಕ್ರೆ ಎನ್ಡಿಎಯಿಂದ ಹೊರಬಂದಿದ್ದರು. ಶಿವಸೇನೆ ಎರಡು ಬಣಗಳಾಗಿ ಒಡೆದಿತ್ತು. ಉದ್ಧವ್ ಠಾಕ್ರೆ ಅವರ ಶಿವಸೇನೆ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನೆ. 288 ಸ್ಥಾನಗಳ ಮಹಾರಾಷ್ಟ್ರ ವಿಧಾನಸಭೆಯ ಅವಧಿ ನವೆಂರ್ಬ 26 ರಂದು ಕೊನೆಗೊಳ್ಳಲಿದ್ದು, 81 ಸ್ಥಾನಗಳನ್ನು ಹೊಂದಿರುವ ಜಾರ್ಖಂಡ್ ವಿಧಾನಸಭೆಯ ಅವಧಿಯು ಜನವರಿ 5, 2025 ರಂದು ಕೊನೆಗೊಳ್ಳಲಿದೆ. ಕೇಂದ್ರ ಚುನಾವಣಾ ಆಯೋಗವು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭಾ ಚುನಾವಣಾ ದಿನಾಂಕವನ್ನು ಪ್ರಕಟಿಸಿದೆ.

ಮಹಾರಾಷ್ಟ್ರದಲ್ಲಿ ನವೆಂಬರ್ 20 ರಂದು ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ. ನವೆಂಬರ್ 23 ರಂದು ಮತ ಎಣಿಕೆ ನಡೆಯಲಿದೆ. ಮಹಾರಾಷ್ಟ್ರದಲ್ಲಿ, ಆಡಳಿತ ಸಮಿಶ್ರ ಮಹಾಯುತಿ ಬಿಜೆಪಿ, ಶಿವಸೇನೆ ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ ಮಹಾ ವಿಕಾಸ್ ಅಘಾಡಿ, ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಎನ್ಸಿಪಿ (ಎನ್ಸಿಪಿ-ಎಸ್ಪಿ) ಮತ್ತು ಉದ್ಧವ್ ಠಾಕ್ರೆ ವಿರುದ್ಧ ಸ್ಪರ್ಧಿಸಲಿದೆ.

ಬಿಜೆಪಿ ನೇತೃತ್ವದ ಎಂವೈಎ ಮಹಾರಾಷ್ಟ್ರದ 48 ಲೋಕಸಭಾ ಸ್ಥಾನಗಳಲ್ಲಿ ಕೇವಲ 17 ಸ್ಥಾನಗಳನ್ನು ಗೆದ್ದಿದೆ. ಐದು ವರ್ಷಗಳ ಹಿಂದೆ ಬಿಜೆಪಿ ಪಾಲು 23ಕ್ಕೆ ಇಳಿದಿದ್ದು, 9 ಸ್ಥಾನಗಳಿಗೆ ಕುಸಿದಿದೆ. ಏತನಧ್ಯೆ, ಕಾಂಗ್ರೆಸ್, ಶಿವಸೇನೆ (ಯುಬಿಟಿ), ಮತ್ತು ಎನ್ಸಿಪಿ (ಶರದ್ ಪವಾರ್) ಒಳಗೊಂಡಿರುವ ಮಹಾ ವಿಕಾಸ್ ಅಘಾಡಿ 30 ಸ್ಥಾನಗಳನ್ನು ಪಡೆದುಕೊಂಡಿದೆ.

RELATED ARTICLES

Latest News