ವಾಷಿಂಗ್ಟನ್, ಜ.16- ವೆನೆಜು ವೆಲಾದ ವಿರೋಧ ಪಕ್ಷದ ನಾಯಕಿ ಮಾರಿಯಾ ಕೊರಿನಾ ಮಚಡೋ ಅವರು ತಮ ಪಾಲಿನ ನೊಬೆಲ್ ಪ್ರಶಸ್ತಿಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದಾನ ಮಾಡಿದ್ದಾರೆ.ಹೀಗಾಗಿ ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಕೊನೆಗೂ ನೊಬೆಲ್ ಶಾಂತಿ ಪ್ರಶಸ್ತಿ ಸಿಕ್ಕಂತಾಗಿದೆ.
2025ನೇ ಸಾಲಿನ ನೊಬೆಲ್ ಶಾಂತಿ ಪ್ರಶಸ್ತಿ ವಿಜೇತೆ ವೆನೆಜುವೆಲಾದ ವಿರೋಧ ಪಕ್ಷದ ಮಾರಿಯಾ ಕೊರಿನಾ ಮಚಡೋ ಅವರು ತನಗೆ ಸಿಕ್ಕಿದ್ದ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ನೀಡಿದ್ದಾರೆ.ಶ್ವೇತಭವನದಲ್ಲಿ ನಡೆದ ಕಾರ್ಯಕ್ರದಲ್ಲಿ ಮಾರಿಯಾ ಕೊರಿನಾ ಅವರು ತಮ್ಮ ನೊಬೆಲ್ ಶಾಂತಿ ಪ್ರಶಸ್ತಿಯನ್ನು ಟ್ರಂಪ್ ಅವರಿಗೆ ಹಸ್ತಾಂತರ ಮಾಡಿದರು.
ನೊಬೆಲ್ ಚಿನ್ನದ ಪದಕವು ಈಗ ಟ್ರಂಪ್ ಅವರ ಬಳಿಯೇ ಉಳಿದಿದೆ ಎಂದು ಶ್ವೇತಭವನದ ಅಧಿಕಾರಿಯೊಬ್ಬರು ದೃಢಪಡಿಸಿದ್ದಾರೆ. ಕಾರ್ಯಕ್ರಮದ ಬಳಿಕ ಮಚಡೊ ಅವರು ಚಿನ್ನದ ಪದಕವನ್ನು ಬಿಟ್ಟು ಹೋಗಿರುವುದಾಗಿ ವರದಿಗಾರರಿಗೆ ತಿಳಿಸಿದ್ದಾರೆ.ನಮ್ಮ ದೇಶದ ಸ್ವಾತಂತ್ರ್ಯಕ್ಕೆ ಅವರ ವಿಶಿಷ್ಟ ಬದ್ಧತೆಗೆ ಮನ್ನಣೆಯಾಗಿ ಅಮೆರಿಕದ ಅಧ್ಯಕ್ಷರಿಗೆ ನೊಬೆಲ್ ಶಾಂತಿ ಪ್ರಶಸ್ತಿಯ ಪದಕವನ್ನು ಪ್ರದಾನ ಮಾಡಿದ್ದೇನೆ ಎಂದು ಅವರು ತಿಳಿಸಿದ್ದಾರೆ
