ಭರೂಚ್, ಅ. 21– ಗುಜರಾತ್‌ನ ಭರೂಚ್ ಜಿಲ್ಲೆಯ ಅಂಕಲೇಶ್ವರ ಕೈಗಾರಿಕಾ ಪ್ರದೇಶದ ಕಾರ್ಖಾನೆಯಿಂದ ಮಾದಕ ವಸ್ತುಗಳನ್ನು ವಶಪಡಿಸಿಕೊಂಡು ಪೊಲೀಸರು ಒಬ್ಬನನ್ನು ಬಂಧಿಸಿದ್ದಾರೆ.
ಅಂಕಲೇಶ್ವರ ಜಿಐಡಿಸಿ ಪ್ರದೇಶದಲ್ಲಿರುವ ಅವಸರ್ ಎಂಟರ್‌ಪ್ರೆಸೆಸ್‌ನಿಂದ ವಶಪಡಿಸಿಕೊಂಡ ಶಂಕಿತ ವಸ್ತುಗಳನ್ನು ದೃಢೀಕರಣಕ್ಕಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ (ಎಫ್ ಎಸ್‌ಎಲ್) ಕಳುಹಿಸಲಾಗಿದೆ ಎಂದು ವಿಶೇಷ ಕಾರ್ಯಾಚರಣೆ ತಂಡದ (ಎಸ್‌ಒಜಿ) ಪೊಲೀಸ್ ಇನ್ಸ್ಪೆಕ್ಟರ್ ಆನಂದ್ ಚೌಧರಿ ತಿಳಿಸಿದ್ದಾರೆ.
ಕಳೆದ ರಾತ್ರಿ ಜಿಲ್ಲೆಯ ಎಸ್‌ಒಜಿ ಮತ್ತು ಸೂರತ್ ಪೊಲೀಸರು ಜಂಟಿಯಾಗಿ ನಡೆಸಿದ ದಾಳಿಯಲ್ಲಿ ಕಾರ್ಖಾನೆಯಿಂದ 14.10 ಲಕ್ಷ ಮೌಲ್ಯದ 141 ಗ್ರಾಂ ಮೆಥಾಂ-ಫೈಟಮೈನ್ (ಎಂಡಿ) ಮಾದಕವಸ್ತುವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಈ ಸಂಬಂಧ ಇದುವರೆಗೆ ಒಬ್ಬನನ್ನು ಬಂಧಿಸಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
ಕಳೆದ ಅ. 13 ರಂದು ಗುಜರಾತ್ ಮತ್ತು ದೆಹಲಿ ಪೊಲೀಸರು ನಡೆಸಿದ ಜಂಟಿ ಕಾರ್ಯಾಚರಣೆಯಲ್ಲಿ ಅಂಕಲೇಶ್ವರದ ಅವಕಾರ್ ಡ್ರಗ್ಸ್ ಲಿಮಿಟೆಡ್ ಕಾರ್ಖಾನೆಯಿಂದ 5,000 ಕೋಟಿ ರೂಪಾಯಿ ಮೌಲ್ಯದ 500 ಕೆಜಿಗೂ ಹೆಚ್ಚು ಕೊಕೇನ್ ವಶಪಡಿಸಿಕೊಂಡಿದ್ದರು.