Wednesday, October 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ (23-10-2024)

Today's Horoscope

ನಿತ್ಯ ನೀತಿ : ಕಷ್ಟ ನಿಜಕ್ಕೂ ಕೆಟ್ಟದ್ದಲ್ಲ. ಅದು ನಮ ಮುಂದಿನ ನಡೆ ಹೇಗಿರಬೇಕು ಎಂಬುದನ್ನು ತಿಳಿಸುವ ಶಿಕ್ಷಕನಿದ್ದಂತೆ.

ಪಂಚಾಂಗ : ಬುಧವಾರ – 23-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ /ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಸಪ್ತಮಿ / ನಕ್ಷತ್ರ: ಪುನರ್ವಸು /ಯೋಗ: ಶಿವ / ಕರಣ: ವಿಷ್ಠಿ /

ಸೂರ್ಯೋದಯ ; ಬೆ.06.11
ಸೂರ್ಯಾಸ್ತ : 05.57
ರಾಹುಕಾಲ : 12.00-1.30
ಯಮಗಂಡ ಕಾಲ : 7.30-9.00
ಗುಳಿಕ ಕಾಲ : 10.30-12.00

ಮೇಷ: ಅಗತ್ಯವಿರುವ ವಸ್ತುಗಳನ್ನು ಖರೀದಿಸು ವುದು ಒಳಿತು. ಸಿಕ್ಕಾಪಟ್ಟೆ ಖರ್ಚು ಮಾಡದಿರಿ.
ವೃಷಭ: ಪೊಲೀಸ್ ಅಧಿಕಾರಿಗಳ ಜವಾಬ್ದಾರಿ ಕಡಿಮೆಯಾಗಲಿದೆ. ಅನೇಕ ಅಡೆತಡೆಗಳು ದೂರವಾಗಲಿವೆ.
ಮಿಥುನ: ಹಿಂದೆ ನೀವು ಮಾಡಿದ್ದ ಕೆಲವು ಪ್ರಯತ್ನಗಳು ಫಲ ಸಿಗುವ ಸಾಧ್ಯತೆಗಳಿವೆ.


ಕಟಕ: ಕಲಾವಿದರಿಗೆ ಒಳ್ಳೆಯ ಅವಕಾಶಗಳು ದೊರೆಯಲಿವೆೆ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸದಿರಿ.
ಸಿಂಹ: ಉನ್ನತ ಅಧಿ ಕಾರಿ ಭೇಟಿಗಾಗಿ ದಿನವಿಡೀ ಓಡಾಡಬೇಕಾದ ಪರಿಸ್ಥಿತಿ ಎದುರಾಗಲಿದೆ.
ಕನ್ಯಾ: ಬ್ಯಾಂಕ್ ನೌಕರರಿಗೆ ಕೆಲಸದ ಒತ್ತಡ ಹೆಚ್ಚಾಗಿರುವುದು.


ತುಲಾ: ಯಾರದ್ದೋ ಮಾತು ಕೇಳಿ ನಿಮ್ಮ ಅಮೂಲ್ಯ ಸಮಯ ಹಾಳುಮಾಡಿಕೊಳ್ಳದಿರಿ.
ವೃಶ್ಚಿಕ: ಮಕ್ಕಳಿಂದ ಸಂತೋಷ ಉಂಟಾಗುವುದು. ಆರೋಗ್ಯದ ಕಡೆ ಗಮನ ಹರಿಸಿ.
ಧನುಸ್ಸು: ನಕಾರಾತ್ಮಕವಾಗಿ ಮಾತನಾಡುವ ಜನರಿಂದ ದೂರವಿರುವುದು ಬಹಳ ಒಳ್ಳೆಯದು.


ಮಕರ: ನಿಮ್ಮ ವರ್ಚಸ್ಸಿನ ಪ್ರಭಾವದಿಂದ ವಿನೂತನ ಅವಕಾಶಗಳು ದೊರೆಯಲಿವೆ.
ಕುಂಭ: ಶತ್ರುಗಳನ್ನು ಜಯಿಸುವಿರಿ. ನಿಮ್ಮ ಪ್ರತಿಭೆಗೆ ಸೂಕ್ತ ಮನ್ನಣೆ ಸಿಗಲಿದೆ.
ಮೀನ: ಆಹಾರ ವ್ಯತ್ಯಾಸದಿಂದ ಪಿತ್ತ ಸಂಬಂಧಿ ಅನಾರೋಗ್ಯ ಕಾಡಬಹುದು.

RELATED ARTICLES

Latest News