Monday, November 25, 2024
Homeರಾಜ್ಯSC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ

ಬೆಂಗಳೂರು, ಅ.28- ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ತಿಳಿಸಿದರು. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಂಡಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಹಾಗೂ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಅವರು, ಪರಿಶಿಷ್ಟ ಜಾತಿ, ವರ್ಗಗಳಿಗೆ ಇದುವರೆಗೂ ಪ್ರತ್ಯೇಕ ಸಚಿವಾಲಯ ಇರಲಿಲ್ಲ ಎಂದರು.

ಸಚಿವಾಲಯ ಸ್ಥಾಪಿಸಿರುವುದರಿಂದ ಆ ವರ್ಗದ ಅಭಿವೃದ್ಧಿ ಸಾಧ್ಯವಾಗಲಿದೆ. ಎಸ್‍ಇಪಿ ಟಿಎಸ್‍ಪಿ ಹಣ ಆ ಸಮುದಾಯದ ಅಭಿವೃದ್ಧಿಗೆ ಖರ್ಚು ಆಗಬೇಕು. ಆರೇಳು ಸಾವಿರ ಇದ್ದ ಅನುದಾನವು ನಾನು ಮೊದಲ ಬಾರಿ ಅಧಿಕಾರದಿಂದ ಕೆಳಗಿಳಿಯುವ ವೇಳೆ 30 ಸಾವಿರ ಕೋಟಿ ರೂ. ಆಗಿತ್ತು. ಈಗ 34 ಸಾವಿರ ಕೋಟಿ ಹಣ ಅನುದಾನ ಇದೆ ಎಂದು ಹೇಳಿದರು.

ಬೆಂಗಳೂರು ವ್ಯಾಪ್ತಿಯ ಹೋಟೆಲ್, ಬಾರ್ ಮತ್ತು ಅಂಗಡಿಗಳಲ್ಲಿ CCTV ಕಡ್ಡಾಯ

ಹೆಚ್.ಡಿ.ಕುಮಾರಸ್ವಾಮಿ, ಬಿ.ಎಸ್.ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ಅನುದಾನ ಹೆಚ್ಚು ಆಗಲಿಲ್ಲ. ಶೇ. 24.1 ರಷ್ಟು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಜನಸಂಖ್ಯೆ ಇದ್ದಾರೆ, ಜನಸಂಖ್ಯೆಗೆ ಅನುಗುಣವಾಗಿ ಹಣ ಇಡಲಾಗುತ್ತದೆ ಎಂದರು.

ಇಡೀ ದೇಶದಲ್ಲಿ ಕರ್ನಾಟಕ ರಾಜ್ಯದಲ್ಲೇ ಹೆಚ್ಚು ಹಣ ಈ ವರ್ಗಗಳಿಗೆ ನೀಡಲಾಗಿದೆ. ಯಾವುದೇ ಸರ್ಕಾರ ಬಂದರೂ ಕಾನೂನು ಬದಲಾವಣೆ ಇಲ್ಲ. ನಾವು 88 ಸಾವಿರ ಕೋಟಿ ರೂ. ಈ ವರ್ಗಗಳಿಗೆ ಖರ್ಚು ಮಾಡಿದ್ದೇವೆ. ಇದಕ್ಕೆ ನೀವು ಅರ್ಹರು ಹಾಗಾಗಿ ಖರ್ಚು ಮಾಡಿದ್ದೇವೆ ಎಂದು ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪುರಸ್ಕøತರ ಪ್ರತಿ ಸಾಧಕರಿಗೆ ರೂ. 5 ಲಕ್ಷ ನಗದು ಮತ್ತು 20 ಗ್ರಾಂ ಚಿನ್ನದ ಪದಕ ನೀಡಿ ಗೌರವಿಸಲಾಯಿತು.

ಇದೇ ವೇಳೆ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಪ್ರತ್ಯೇಕ ಸಚಿವಾಲಯಕ್ಕೆ ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪುಷ್ಪಾರ್ಚಾನೆ ಮಾಡುವ ಮೂಲಕ ಮುಖ್ಯಮಂತ್ರಿ ಚಾಲನೆ ನೀಡಿದರು. ಬಳಿಕ ರಿಮೋಟ್ ಒತ್ತುವುದರ ಮೂಲಕ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ನೂತನ ಸಚಿವಾಲಯದ ಕೊಠಡಿಯನ್ನು ಉದ್ಘಾಟಿಸಿದರು.

2 ಎಸೆತದಲ್ಲಿ 21 ಸಿಡಿಸಿ ದಾಖಲೆ ಬರೆದ ಟ್ರಾವಿಸ್ ಹೆಡ್

ಕಾರ್ಯಕ್ರಮದಲ್ಲಿ ರಾಜನಹಳ್ಳಿಯ ಮಹರ್ಷಿ ಗುರುಪೀಠದ ಶ್ರೀ ಪ್ರಸನ್ನಾನಂದ ಸ್ವಾಮೀಜಿ, ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ. ಹೆಚ್.ಸಿ.ಮಹದೇವಪ್ಪ, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ, ಪರಿಶಿಷ್ಟ ಪಂಗಡಗಳ ಕಲ್ಯಾಣ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಚಿವ ಬಿ.ನಾಗೇಂದ್ರ, ಸಹಕಾರ ಸಚಿವ ಕೆ. ಎನ್. ರಾಜಣ್ಣ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಶಾಸಕ ನರೇಂದ್ರಸ್ವಾಮಿ, ವಿಧಾನ ಪರಿಷತ್ ಸದಸ್ಯ ನಾಗರಾಜ್ ಯಾದವ್, ಮಾಜಿ ಸಚಿವ ಆಂಜನೇಯ, ಮಾಜಿ ಸಂಸದರಾದ ಚಂದ್ರಪ್ಪ, ವಿ.ಎಸ್. ಉಗ್ರಪ್ಪ, ಸಮಾಜ ಕಲ್ಯಾಣ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮೇಜರ್ ಮಣಿವಣ್ಣನ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

RELATED ARTICLES

Latest News