Thursday, October 24, 2024
Homeರಾಜ್ಯಗೋವಾ ಮಾದರಿಯಲ್ಲಿ ಕರ್ನಾಟಕದ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

ಗೋವಾ ಮಾದರಿಯಲ್ಲಿ ಕರ್ನಾಟಕದ ಬೀಚ್‌ಗಳಲ್ಲಿ ಮದ್ಯ ಮಾರಾಟ ಕುರಿತು ಪ್ರವಾಸೋದ್ಯಮ ಇಲಾಖೆ ಚಿಂತನೆ

Karnataka Launches Revolutionary Plan To Introduce Beach Shacks And Boost Coastal Tourism

ಬೆಂಗಳೂರು,ಅ.24- ರಾಜ್ಯದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ಗೋವಾದ ಮಾದರಿಯಲ್ಲಿ ರಾಜ್ಯದ ಬೀಚ್‌ಗಳಲ್ಲಿ ಟೆಂಟ್‌ ಹಾಕುವುದು ಮತ್ತು ಮದ್ಯ ಮಾರಾಟ, ಮದ್ಯಪಾನಕ್ಕೆ ಅನುಮತಿ ನೀಡುವ ಪ್ರಸ್ತಾವನೆಯನ್ನು ಪರಿಶೀಲಿಸಲು ಪ್ರವಾಸೋದ್ಯಮ ಇಲಾಖೆ ಮುಂದಾಗಿದೆ.

ಗೋವಾ ಮಾದರಿಯಲ್ಲಿ ಪ್ರವಾಸಿಗರನ್ನು ಆಕರ್ಷಿಸಲು ನಾವು ಬೀಚ್‌ಗಳಲ್ಲಿ ಕೆಲವು ಬದಲಾವಣೆಗಳನ್ನು ಮಾಡಬೇಕಾಗಿದೆ , ಬೀಚ್‌ ಗಳಲ್ಲಿ ಮದ್ಯ ಬಳಕೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಿಸುವ ಅಗತ್ಯವಿದೆ.

ಬೀಚ್‌ಗಳಲ್ಲಿ ಸುರಕ್ಷತೆಯನ್ನು ಹೆಚ್ಚಿಸಲು, ಜನರು ರಾತ್ರಿಯಲ್ಲಿ ಹೆಚ್ಚು ಸಮಯ ಕಳೆಯುವಂತೆ ಮಾಡಲು ಕಡಲತೀರಗಳಲ್ಲಿ ಹೆಚ್ಚಿನ ಲೈಟ್‌ ಗಳನ್ನು ಅಳವಡಿಸಲು ಇಲಾಖೆ ಚಿಂತನೆ ನಡೆಸಿದೆ. ರಾಜ್ಯದಲ್ಲಿ ಟೆಂಟ್‌ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಡಲತೀರಗಳ ಬಳಿ ಸರ್ಕಾರಿ ಮತ್ತು ಖಾಸಗಿ ಜಮೀನುಗಳನ್ನು ಹುಡುಕುವಂತೆ ಜಿಲ್ಲಾ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ತಡರಾತ್ರಿಯವರೆಗೂ ಬೀಚ್‌ಗಳಿಗೆ ಭೇಟಿ ನೀಡಲು ಪ್ರವಾಸಿಗರಿಗೆ ಅವಕಾಶ ನೀಡುವಂತೆ ಮನವಿ ಮಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌, ಮಂಗಳೂರು ನಗರದಲ್ಲಿರುವ ರೆಸ್ಟೋರೆಂಟ್‌ಗಳು ಮತ್ತು ಇತರ ಪರವಾನಗಿ ಪಡೆದ ವ್ಯಾಪಾರ ಸಂಸ್ಥೆಗಳ ವ್ಯವಹಾರದ ಸಮಯವನ್ನು ರಾತ್ರಿ 1 ಗಂಟೆಯ ವರೆಗೆ ವಿಸ್ತರಿಸಲಾಗಿದೆ. ಹೀಗಾಗಿ ನಗರ ವ್ಯಾಪ್ತಿಯ ಬೀಚ್‌ಗಳಲ್ಲಿ ತಡರಾತ್ರಿವರೆಗೆ ಇರಲು ಅವಕಾಶ ಒದಗಿಸಬೇಕಾಗಿದೆ.

ಪ್ರವಾಸೋದ್ಯಮ ಯೋಜನೆಗಳಿಗೆ ಸಿಆರ್ಝಡ್‌ ಮತ್ತು ಇತರ ಅನುಮತಿಗಳನ್ನು ಶೀಘ್ರವಾಗಿ ಮಾಡಲ ಪ್ರವಾಸೋದ್ಯಮ ಇಲಾಖೆ ಶೀಘ್ರದಲ್ಲೇ ಸೌಲಭ್ಯ ಕೇಂದ್ರವನ್ನು ತೆರೆಯಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಹೊಸ ಪ್ರವಾಸೋದ್ಯಮ ನೀತಿಯು ಕರಾವಳಿ ಪ್ರವಾಸೋದ್ಯಮಕ್ಕೆ ಪ್ರತ್ಯೇಕ ಮಾರ್ಗಸೂಚಿಯನ್ನು ಹೊಂದಿರಲಿದೆ.

RELATED ARTICLES

Latest News