Thursday, October 24, 2024
Homeರಾಜಕೀಯ | Politicsವಿಧಾನ ಪರಿಷತ್‌ ಉಪಚುನಾವಣೆ ಬಿಜೆಪಿ ಭರ್ಜರಿ ಜಯಭೇರಿ

ವಿಧಾನ ಪರಿಷತ್‌ ಉಪಚುನಾವಣೆ ಬಿಜೆಪಿ ಭರ್ಜರಿ ಜಯಭೇರಿ

BJP wins Legislative Council bye-elections

ಬೆಂಗಳೂರು,ಅ.24- ಸಂಸದ ಕೋಟಾ ಶ್ರೀನಿವಾಸ್‌‍ ಪೂಜಾರಿ ಅವರ ರಾಜೀನಾಮೆಯಿಂದ ತೆರವಾಗಿದ್ದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಸ್ಥಳೀಯ ಸಂಸ್ಥೆಗಳಿಂದ ನಡೆದ ವಿಧಾನಪರಿಷತ್‌ನ ಉಪ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ.
ಈ ಮೂಲಕ ಕರಾವಳಿ ಬಿಜೆಪಿಯ ಭದ್ರಕೋಟೆ ಎಂಬುದು ಮತ್ತೊಮೆ ಸಾಬೀತಾಗಿದೆ.

ಚಲಾವಣೆಯಾದ ಒಟ್ಟು 5906 ಮತಗಳಲ್ಲಿ ಬಿಜೆಪಿ ಅಭ್ಯರ್ಥಿ ಕಿಶೋರ್‌ಕುಮಾರ್‌ ಪುತ್ತೂರ್‌ರವರು 3,654 ಮತ ಪಡೆದು ಮೊದಲ ಪ್ರಾಶಸ್ತ್ಯದಲ್ಲೇ ಗೆಲುವಿನ ನಗೆ ಬೀರಿದ್ದಾರೆ. ಅವರ ಎದುರಾಳಿ ಕಾಂಗ್ರೆಸ್‌‍ ಅಭ್ಯರ್ಥಿ ರಾಜು ಪೂಜಾರಿ 1957 ಮತ ಪಡೆದಿದ್ದಾರೆ. ಚಲಾವಣೆಯಾದ ಮತಗಳಲ್ಲಿ 87 ಮತಗಳು ತಿರಸ್ಕೃತಗೊಂಡಿದ್ದವು. ಬೆಳಗ್ಗೆ 8 ಗಂಟೆಗೆ ಮಂಗಳೂರಿನ ಸಂತ ಅಲೋಶಿಯಸ್‌‍ ಪದವಿಪೂರ್ವ ಕಾಲೇಜಿನಲ್ಲಿ ಮತ ಎಣಿಕೆ ಪ್ರಾರಂಭವಾಯಿತು. ಮೊದಲು ಚುನಾವಣಾ ಅಧಿಕಾರಿಗಳು ಮತಗಳನ್ನು ಕ್ರೂಢೀಕರಿಸಿ ನಂತರ ಎಣಿಕೆಯನ್ನು ಪ್ರಾರಂಭಿಸಿದರು. ಮಧ್ಯಾಹ್ನ 12.30ಕ್ಕೆ ಬಿಜೆಪಿ ಅಭ್ಯರ್ಥಿ ಗೆಲುವು ಸಾಧಿಸಿದರು.

ಕಳೆದ ಸೋಮವಾರ ನಡೆದ ಉಪಚುನಾವಣೆಯಲ್ಲಿ ಶೇ 97.91ರಷ್ಟು ಮತದಾನವಾಗಿತ್ತು. ಈ ಉಪಚುನಾವಣೆಯಲ್ಲಿ ಉಭಯ ಜಿಲ್ಲೆಗಳ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ, ಮಹಾನಗರ ಪಾಲಿಕೆ, ವಿಧಾನ ಸಭೆ, ವಿಧಾನ ಪರಿಷತ್‌ ಹಾಗೂ ಲೋಕಸಭಾ ಸದಸ್ಯರು ಸೇರಿ ಒಟ್ಟು 6,032 ಮತದಾರರಿದ್ದರು. ಅವರಲ್ಲಿ 5,906 ಮಂದಿ ತಮ ಹಕ್ಕನ್ನು ಚಲಾಯಿಸಿದ್ದರು.
ಕಣದಲ್ಲಿ ಎಸ್‌‍ಡಿಪಿಐನಿಂದ ಅನ್ವರ್‌ ಸಾಧತ್‌.ಎಸ್‌‍ , ಪಕ್ಷೇತರ ಅಭ್ಯರ್ಥಿ ದಿನಕರ್‌ ಉಲ್ಲಾಳ ಸ್ಪರ್ಧಿಸಿದ್ದರು. ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ ವ್ಯಾಪ್ತಿಯ ಈ ಕ್ಷೇತ್ರದಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 6,032 ಮತದಾರರು ಇದ್ದರು.

ದಕ್ಷಿಣ ಕನ್ನಡ ಜಿಲ್ಲೆಯ 223 ಗ್ರಾಮಪಂಚಾಯ್ತಿಗಳ 3363 ಸದಸ್ಯರು ಮಂಗಳೂರು ಮಹಾನಗರ ಪಾಲಿಕೆಯ 65, ಎರಡು ನಗರಸಭೆಗಳಲ್ಲಿನ 64 , ಮೂರು ಪುರಸಭೆಗಳಲ್ಲಿನ 74, ಐದು ನಗರಪಂಚಾಯ್ತಿ 86 ಮಂದಿ ಮತ ಚಲಾಯಿಸಿದ್ದರು.
ಅದೇ ರೀತಿ ಉಡುಪಿ ಜಿಲ್ಲೆಯ 153 ಗ್ರಾಮಪಂಚಾಯ್ತಿಗಳಲ್ಲಿ 2355 ಸದಸ್ಯರು, ನಗರಸಭೆಯ 36, ಮೂರು ಪುರಸಭೆಯಲ್ಲಿನ 72, ಒಂದು ನಗರಪಂಚಾಯ್ತಿಯ 17 ಮಂದಿ ಮತ ಹಾಕಿದ್ದರು.

ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿಯಾಗಿ ವಿಧಾನಪರಿಷತ್‌ನ ಪ್ರತಿಪಕ್ಷದ ನಾಯಕರಾಗಿದ್ದ ಕೋಟಾ ಶ್ರೀನಿವಾಸ್‌‍ ಪೂಜಾರಿ, ಬಿಜೆಪಿ ಅಭ್ಯರ್ಥಿಯಾಗಿ ಸ್ಫರ್ಧೆ ಮಾಡಿ ಗೆಲುವು ಸಾಧಿಸಿದ್ದರು. ಲೋಕಸಭೆಗೆ ಆಯ್ಕೆಯಾದ ಹಿನ್ನಲೆಯಲ್ಲಿ ಕೋಟಾ ಶ್ರೀನಿವಾಸ್‌‍ ಪೂಜಾರಿ ತಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಸ್ಥಾನಕ್ಕೆ ಉಪಚುನಾವಣೆ ಎದುರಾಗಿತ್ತು.

RELATED ARTICLES

Latest News