ಭುವನೇಶ್ವರ್, ಅ. 29-ಕಳೆದ 2022-23 ರ ಆರ್ಥಿಕ ವರ್ಷದಲ್ಲಿ ದೇಶದ ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಶೇಕಡಾ 37 ಕ್ಕೆ ಏರಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಹೇಳಿದ್ದಾರೆ. ಇಲ್ಲಿ ನಡೆದ ರೋಜ್‍ಗಾರ್ ಮೇಳ ದಲ್ಲಿ ಮಾತನಾಡಿದ ಅವರು ಕಳೆದ 2017-18ರಲ್ಲಿ ಈ ಪ್ರಮಾಣ ಶೇ.23ರಷ್ಟಿತ್ತು 5 ವರ್ಷದಲ್ಲಿ ಶೇ.10 ಕಿಂತ ಹೆಚ್ಚು ಏರಿಕೆಯಾಗಿದೆ ಇದರ ನಡುವೆ 2017-18ರಲ್ಲಿ ಶೇ.6ರಷ್ಟಿದ್ದ ನಿರುದ್ಯೋಗ ದರವು 2022-23ರಲ್ಲಿ ಶೇ.3.7ಕ್ಕೆ ಇಳಿದಿದೆ ಎಂದರು.
ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆ ಹೆಚ್ಚುತ್ತಿದೆ ಇದರ ಜೊತೆಗೆ ಮಹಿಳೆಯರು ಹೆಚ್ಚು ಕಷ್ಟಪಟ್ಟು ಕೆಲಸ ಮಾಡುತ್ತಾರೆ,ಸಮಾಜದಲ್ಲಿ ಸಮತೋಲಿತ ಬೆಳವಣಿಗೆ ಕಂಡುಬಂದಿದೆ, ಎಂದು ಅವರು ಹೇಳಿದರು,
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಮಹಿಳಾ ಕೇಂದ್ರಿತ ಯೋಜನೆಗಳು ಉದ್ಯೋಗಿಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಸಹಾಯ ಮಾಡಿದೆ ಎಂದು ತಿಳಿಸಿದ್ದಾರೆ.
SC-ST ಸಮುದಾಯದ ಅಭಿವೃದ್ಧಿಗಾಗಿ ಪರಿಶಿಷ್ಟ ವರ್ಗಗಳಿಗೆ ಪ್ರತ್ಯೇಕ ಸಚಿವಾಲಯ
ಕೇಂದ್ರವು ನೀತಿ ನಿರೂಪಣೆ ಮತ್ತು ನಾಯಕತ್ವದ ಪಾತ್ರಗಳಲ್ಲಿ ಮಹಿಳೆಯರಿಗೆ ಆದ್ಯತೆ ನೀಡುತ್ತಿದೆ, ಬದಲಾಗುತ್ತಿರುವ ತಂತ್ರಜ್ಞಾನಗಳಿಗೆ ಹೊಂದಿಕೊಳ್ಳಲು ಕೆಲಸ ಮಾಡುವ ಮಹಿಳೆಯರಿಗೆ ಕೌಶಲ್ಯವನ್ನು ಹೆಚ್ಚಿಸಲು ಪ್ರಾಮುಖ್ಯತೆಯನ್ನು ನೀಡಲಾಗಿತ್ತಿದೆ ಎಂದು ಸಚಿವರು ಒತ್ತಿ ಹೇಳಿದರು. ಎಂದು ಅವರು ಹೇಳಿದರು.ಕಾರ್ಯಕ್ರಮದಲ್ಲಿ ಸಚಿವರು 172 ಮಂದಿಗೆ ವಿವಿಧ ಕೇಂದ್ರೀಯ ಸಂಸ್ಥೆಗಳ ನೇಮಕಾತಿ ಪತ್ರಗಳನ್ನು ವಿತರಿಸಿದರು.