Thursday, November 21, 2024
Homeರಾಜ್ಯಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಬಿಗಿ ಬಂದೋಬಸ್ತ್

ಅ.27ಕ್ಕೆ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಲಿಖಿತ ಪರೀಕ್ಷೆ : ಬಿಗಿ ಬಂದೋಬಸ್ತ್

Written test for Village Administrative Officer posts on 27th

ಬೆಂಗಳೂರು: ಗ್ರಾಮ ಆಡಳಿತ ಅಧಿಕಾರಿಯ ಒಂದು ಸಾವಿರ ಹುದ್ದೆಗಳ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅ.27ರಂದು ಮುಖ್ಯ ಪರೀಕ್ಷೆ ನಡೆಸುತ್ತಿದ್ದು ಸಕಲ ರೀತಿಯ ಬಿಗಿ ಕ್ರಮಗಳನ್ನು ಕೈಗೊಂಡಿದೆ.

ವಯೋಮಿತಿ ಸಡಿಲಿಕೆ ನಂತರ ಅರ್ಜಿ ಸಲ್ಲಿಸಿದ ಸುಮಾರು 63 ಸಾವಿರ ಮಂದಿಗೆ ಕನ್ನಡ ಕಡ್ಡಾಯ ಪರೀಕ್ಷೆ, ಅ.26ಕ್ಕೆ ರಾಜ್ಯದ 153 ಕೇಂದ್ರಗಳಲ್ಲಿ ನಡೆಯಲಿದೆ. ಇದರಲ್ಲಿ ಜಿಟಿಟಿಸಿ ಪರೀಕ್ಷೆ ಗೆ ಅರ್ಜಿ ಸಲ್ಲಿಸಿದ್ದ 2,300 ಮಂದಿಯೂ ಸೇರಿದ್ದಾರೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಗ್ರಾಮ ಆಡಳಿತ ಅಧಿಕಾರಿ ಹುದ್ದೆಯ ಮುಖ್ಯ ಪರೀಕ್ಷೆ ಅ.27ರಂದು ನಡೆಯಲಿದ್ದು, ಅದನ್ನು ಬರೆಯಲು 4.8 ಲಕ್ಷ ಅಭ್ಯರ್ಥಿಗಳು ಅರ್ಹರಾಗಿದ್ದಾರೆ. ಈ ಸಲುವಾಗಿ 1,173 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಅವರು ವಿವರಿಸಿದರು.

ಪರೀಕ್ಷಾ ಅಕ್ರಮಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಬಿಗಿ ಪೋಲಿಸ್ ಬಂದೋಬಸ್ತ್ ಮಾಡಲಾಗಿದೆ. ವಸ್ತ್ರ ಸಂಹಿತೆ ಕೂಡ ಇದ್ದು, ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಅವರು ಹೇಳಿದ್ದಾರೆ.

ಓಎಂಆರ್ ನೋಂದಣಿ ಎಚ್ಚರ:
ಸೆ.26ರಂದು ನಡೆದ ಕಡ್ಡಾಯ ಕನ್ನಡ ಪರೀಕ್ಷೆಯ ಓಎಂಆರ್ ಶೀಟ್ ನಲ್ಲಿ ನೋಂದಣಿ ಸಂಖ್ಯೆ‌ ಮತ್ತು ವರ್ಶನ್ ಕೋಡ್ ನಮೂದಿಸುವಾಗ ಸುಮಾರು ಒಂಬತ್ತು ಸಾವಿರ ಮಂದಿ ತಪ್ಪು ಮಾಡಿದ್ದು ಪುನಃ ಆ ರೀತಿ ಆಗಬಾರದು ಎನ್ನುವ ಕಾರಣಕ್ಕೆ ಅಭ್ಯಾಸ ಸಲುವಾಗಿ ಈ ಬಾರಿ ಮಾದರಿ ಓಎಂಆರ್ ಶೀಟ್ ನೀಡಲಾಗಿತ್ತು. ಸರಿಯಾಗಿ ಅಭ್ಯಾಸ ಮಾಡಿಕೊಂಡು ಬನ್ನಿ. ಪುನಃ ತಪ್ಪು ಗಳಾದರೆ ಅದಕ್ಕೆ ಪ್ರಾಧಿಕಾರ ಜವಾಬ್ದಾರಿಯಲ್ಲ.‌ ಮಾದರಿ ಓಎಂಆರ್ ಶೀಟ್ ಅನ್ನು ಪರೀಕ್ಷಾ ಕೇಂದ್ರಕ್ಕೆ ತರುವುದು ಬೇಡ ಎಂದೂ‌ ಅವರು ಸಲಹೆ ನೀಡಿದ್ದಾರೆ.

RELATED ARTICLES

Latest News