Saturday, November 23, 2024
Homeರಾಜ್ಯಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ

ಬಿಜೆಪಿ-ಜೆಡಿಎಸ್ ಲೋಕಸಭಾ ಕ್ಷೇತ್ರಗಳ ಹಂಚಿಕೆ ಮತ್ತಷ್ಟು ವಿಳಂಬ

ಬೆಂಗಳೂರು, ಅ. 29- ಪಂಚ ರಾಜ್ಯಗಳ ವಿಧಾನಸಭೆ ಚುನಾವಣೆ ಮುಗಿಯುವವರೆಗೂ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ನಡುವೆ ಕ್ಷೇತ್ರಗಳ ಹಂಚಿಕೆ ಅಂತಿಮವಾಗುವುದು ಅನುಮಾನವಾಗಿದೆ. ದಸರಾ ಉತ್ಸವದ ನಂತರ ಉಭಯ ಪಕ್ಷಗಳ ನಾಯಕರು ಸಮಾಲೋಚನೆ ನಡೆಸಿ ರಾಜ್ಯದಲ್ಲಿನ ಲೋಕಸಭಾ ಕ್ಷೇತ್ರಗಳ ಹಂಚಿಕೆ ಬಗ್ಗೆ ನಿರ್ಧಾರ ಕೈಗೊಂಡು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಹೇಳಲಾಗಿತ್ತು. ಆದರೆ, ಪಂಚರಾಜ್ಯ ಚುನಾವಣಾ ಕಾರ್ಯದಲ್ಲಿ ಬಿಜೆಪಿ ನಾಯಕರು ನಿರತರಾಗಿರುವ ಹಿನ್ನೆಲೆಯಲ್ಲಿ ಮಾತುಕತೆ ಮುಂದಕ್ಕೆ ಹೋಗಿದೆ ಎಂದು ಜೆಡಿಎಸ್ ಮೂಲಗಳು ತಿಳಿಸಿವೆ.

ವಿದೇಶ ಪ್ರವಾಸದಲ್ಲಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಾಪಸ್ ಬಂದ ನಂತರ ಮಾತುಕತೆಯಾಗಬಹುದು. ಪಂಚರಾಜ್ಯ ಚುನಾವಣೆ ಪೂರ್ಣಗೊಳ್ಳುವವರೆಗೂ ಎರಡೂ ಪಕ್ಷಗಳ ನಡುವೆ ಕ್ಷೇತ್ರ ಹಂಚಿಕೆ ಅಂತಿಮಗೊಳ್ಳುವ ಸಾಧ್ಯತೆ ವಿರಳ ಎಂದು ಹೇಳಿವೆ. ನವೆಂಬರ್ ಮೊದಲ ವಾರದಲ್ಲಿ ದೆಹಲಿಗೆ ತೆರಳಲಿದ್ದು, ಆ ಸಂದರ್ಭದಲ್ಲಿ ಕ್ಷೇತ್ರ ಹಂಚಿಕೆ ಮಾತುಕತೆ ನಡೆಸುವ ಬಗ್ಗೆ ಕುಮಾರಸ್ವಾಮಿ ಇತ್ತೀಚೆಗೆ ಹೇಳಿದ್ದರು.

BREAKING : ಕೇರಳದ ಎರ್ನಾಕುಲಂನಲ್ಲಿ ಬಾಂಬ್ ಬ್ಲಾಸ್ಟ್, ಓರ್ವ ಸಾವು, 20 ಹೆಚ್ಚು ಮಂದಿಗೆ ಗಾಯ

ಬಿಜೆಪಿ ಲೋಕಸಭಾ ಚುನಾವಣಾ ಪೂರ್ವ ಹೊಂದಾಣಿಕೆ ಮಾಡಿಕೊಳ್ಳಲು ಮುಂದಾಗಿರುವ ಜೆಡಿಎಸ್ ನಾಲ್ಕು ಕ್ಷೇತ್ರಗಳಲ್ಲಿ ಮಾತ್ರ ಸ್ರ್ಪಸುವ ಆಸಕ್ತಿ ತೋರಿದೆ. ರಾಜ್ಯ 28 ವಿಧಾನಸಭಾ ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳನ್ನು ಬಿಜೆಪಿಗೆ ಬಿಟ್ಟುಕೊಡಲು ಉದ್ದೇಶಿಸಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ಹಾಸನ, ಮಂಡ್ಯ, ತುಮಕೂರು ಹಾಗೂ ಕೋಲಾರ ಕ್ಷೇತ್ರಗಳನ್ನು ಬಿಟ್ಟುಕೊಡುವಂತೆ ಬಿಜೆಪಿಯನ್ನು ಜೆಡಿಎಸ್ ಕೋರಿದೆ. ಕೋಲಾರ ಹಾಗೂ ತುಮಕೂರು ಕ್ಷೇತ್ರಗಳಲ್ಲಿ ಹಾಲಿ ಬಿಜೆಪಿ ಸಂಸದರಿದ್ದಾರೆ. ಹೀಗಾಗಿ ಈ ಎರಡು ಕ್ಷೇತ್ರಗಳ ವಿಚಾರದಲ್ಲಿ ಉಭಯ ಪಕ್ಷಗಳ ನಡುವೆ ಗಂಭೀರ ಚರ್ಚೆ ನಡೆದು ಅಂತಿಮ ನಿರ್ಧಾರ ಕೈಗೊಳ್ಳಬೇಕಿದೆ.

ಬಿಜೆಪಿ ನೇತೃತ್ವದ ಎನ್‍ಡಿಎ ಮೈತ್ರಿಕೂಟ ಸೇರಿರುವ ಜೆಡಿಎಸ್, ಜಂಟಿಯಾಗಿ ಚುನಾವಣೆ ಎದುರಿಸಲು ಸಿದ್ಧವಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ಸಾಸಿರುವ ಕಾಂಗ್ರೆಸ್‍ಗೆ ಕಡಿವಾಣ ಹಾಕಲು ಬಿಜೆಪಿ ಜತೆ ಸೇರಿದೆ. ಮೈತ್ರಿ ವಿಚಾರದಲ್ಲಿ ಎರಡೂ ಪಕ್ಷಗಳ ನಡುವೆ ಉಂಟಾಗಿರುವ ಕೆಲವು ಗೊಂದಲಗಳು ಸೀಟು ಹಂಚಿಕೆಗೆ ಹಿನ್ನಡೆಯಾಗಿದೆ ಎಂದು ಹೇಳಲಾಗುತ್ತಿದೆ.

RELATED ARTICLES

Latest News