Saturday, November 23, 2024
Homeಜ್ಯೋತಿಷ್ಯ-ರಾಶಿಭವಿಷ್ಯಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-10-2024)

ಇಂದಿನ ಪಂಚಾಂಗ ಮತ್ತು ರಾಶಿಭವಿಷ್ಯ(31-10-2024)

Today's Horoscope

ನಿತ್ಯ ನೀತಿ : ಅವರಿವರ ಚಿಂತೆ ಬಿಡು. ನಿನ್ನ ಕಾಯಕ ನೀನು ಮಾಡುತ್ತಾ ಹೋಗು. ದೇವರು ನಿನ್ನ ಹಿಂದೆ ಬರುತ್ತಾನೆ… ಸಂದೇಹಬೇಡ.

ಪಂಚಾಂಗ : ಗುರುವಾರ , 31-10-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಆಶ್ವಯುಜ ಮಾಸ / ಕೃಷ್ಣ ಪಕ್ಷ / ತಿಥಿ: ಚತುರ್ದಶಿ / ನಕ್ಷತ್ರ: ಚಿತ್ತಾ / ಯೋಗ: ವಿಷ್ಕಂಭ / ಕರಣ: ಚತುಷ್ಪಾದ

ಸೂರ್ಯೋದಯ – ಬೆ.06.13
ಸೂರ್ಯಾಸ್ತ – 05.53
ರಾಹುಕಾಲ – 1.30-3.00
ಯಮಗಂಡ ಕಾಲ – 6.00-7.30
ಗುಳಿಕ ಕಾಲ – 9.00-10.30

ರಾಶಿಭವಿಷ್ಯ :
ಮೇಷ
: ವಿದ್ಯಾರ್ಥಿಗಳು ಏಕಾಗ್ರತೆ ಕಾಯ್ದುಕೊಳ್ಳಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ವೃಷಭ: ವ್ಯವಹಾರದಲ್ಲಿ ಸ್ವಂತ ನಿರ್ಧಾರ ತೆಗೆದುಕೊಳ್ಳುವ ಸಾಮರ್ಥ್ಯವನ್ನು ಹೊಂದುತ್ತೀರಿ.
ಮಿಥುನ: ಶತ್ರುಗಳ ಬಲೆಗೆ ಬೀಳದಂತೆ ಎಚ್ಚರ ವಹಿಸಬೇಕು. ದೂರ ಸಂಚಾರ ಮಾಡದಿರಿ.

ಕಟಕ: ನೀವು ಮಾಡುವ ಒಳ್ಳೆಯ ಕಾರ್ಯಗಳು ನಿಮ್ಮ ಕುಟುಂಬದ ಹಿರಿಮೆಯನ್ನು ಹೆಚ್ಚಿಸುತ್ತದೆ.
ಸಿಂಹ: ಪೋಷಕರಿಂದ ಆಶೀರ್ವಾದ ಪಡೆದ ನಂತರ ಮನೆಯಿಂದ ಹೊರಬನ್ನಿ.
ಕನ್ಯಾ: ವ್ಯವಹಾರದಲ್ಲಿ ತ್ವರಿತ ನಿರ್ಧಾರ ತೆಗೆದುಕೊಳ್ಳುವಲ್ಲಿ ವಿಫಲವಾದರೆ ತೊಂದರೆ ಅನುಭವಿಸಬೇಕಾಗುತ್ತದೆ.

ತುಲಾ: ಜೀವನ ಸಂಗಾತಿ ಯಿಂದ ಆರ್ಥಿಕ ಲಾಭ ಮತ್ತು ಗೌರವ ಪಡೆಯುವಿರಿ.
ವೃಶ್ಚಿಕ: ಮಸಾಲೆಯುಕ್ತ ಆಹಾರವನ್ನು ಹೆಚ್ಚಾಗಿ ಸೇವಿಸದಿರುವುದು ಒಳಿತು.
ಧನುಸ್ಸು: ಹಣಕಾಸು ವ್ಯವಹಾರದಲ್ಲಿ ನಷ್ಟ ತಪ್ಪಿಸುವ ಉದ್ದೇಶದಿಂದ ಜಾಗರೂಕತೆಯಿಂದ ಇರಿ.

ಮಕರ: ನಿಮ್ಮ ಬೇಜವಾಬ್ದಾರಿತನದಿಂದಾಗಿ ಸಂಕಷ್ಟಕ್ಕೆ ಸಿಲುಕುವಿರಿ. ವ್ಯಾಸಂಗದಲ್ಲಿ ತೊಂದರೆ.
ಕುಂಭ: ಹಿರಿಯರ ಸಕಾಲಿಕ ನೆರವಿನಿಂದ ಎದುರಾಗಬಹುದಾದ ವಿಪತ್ತುಗಳು ದೂರವಾಗಲಿವೆ.
ಮೀನ: ಕಲಾವಿದರುಗಳಿಗೆ, ಪತ್ರಕರ್ತರಿಗೆ ಪ್ರಶಂಸೆಯ ಮಾತುಗಳು ಕೇಳಿಬರುವುವು.

RELATED ARTICLES

Latest News