ಬೆಂಗಳೂರು. ಅ.29- ಸಿಲಿಕಾನ್ ಸಿಟಿಯಲ್ಲಿ ದಿನದಿಂದ ದಿನಕ್ಕೆ ರಸ್ತೆ ಅಪಘಾತಗಳ ಸಂಖ್ಯೆ ಹೆಚ್ಚಳವಾಗುತ್ತಿದ್ದು ಅದರಲ್ಲೂ ಕಿಲ್ಲರ್ ಬಿಎಂಟಿಸಿ ಬಸ್‍ಗೆ ಬಲಿಯಾಗುತ್ತಿರುವವರ ಸಂಖ್ಯೆ ಅಧಿಕ ವಾಗುತ್ತಿದೆ. ವಿಜಯನಗರ ಸಂಚಾರಿ ಫೋಲಿಸ್ ಠಾಣೆ ಹಾಗೂ ಹುಳಿಮಾವು ಠಾಣಾ ವ್ಯಾಪ್ತಿಗಳಲ್ಲಿ ನಡೆದ ಎರಡು ಪ್ರತ್ಯೇಕ ಅಪಘಾತದಲ್ಲಿ ಬಿಎಂಟಿಸಿ ಬಸ್‍ಗೆ ಸಿಲುಕಿ ಇಬ್ಬರು ಸಾವನ್ನಪ್ಪಿದ್ದಾರೆ.
ಗೋವಿಂದರಾಜನಗರ ಮುಖ್ಯರಸ್ತೆಯ ಬೈಟು ಕಾಫಿ ಮಳಿಗೆ ಮುಂಭಾಗ ದ್ವಿಚಕ್ರ ವಾಹನಕ್ಕೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಸುಂಕದಕಟ್ಟೆಯ ನಿವಾಸಿ ಕುಮಾರ್(45) ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ವಿಜಯನಗರ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.
ಹಿಂದುಳಿದ ವರ್ಗ ಆಯೋಗದ ವರದಿ ಸ್ವೀಕರಿಸುತ್ತೇವೆ : ಸಿದ್ದರಾಮಯ್ಯ
ಯುವತಿ ಬಲಿ:
ಹುಳಿಮಾವು ಸಂಚಾರಿ ಠಾಣಾ ವ್ಯಾಪ್ತಿಯ ಅರಕೆರೆ ಸಮೀಪದ ಸಾಯಿ ಗಾರ್ಮೆಂಟ್ಸ್ ಬಳಿ ರಸ್ತೆ ದಾಟುತ್ತಿದ್ದ ಗಾರ್ಮೆಂಟ್ಸ್ ಮಹಿಳಾ ಉದ್ಯೋಗಿಗೆ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸೊರಬ ಮೂಲದ ವೀಣಾ(20) ಅಪಘಾತ ದಲ್ಲಿ ಮೃತಪಟ್ಟ ಗಾರ್ಮೆಂಟ್ಸ್ ಉದ್ಯೋಗಿ. ಇವರು ಹುಳಿಮಾವಿನಲ್ಲಿ ಪಾಸವಾಗಿದ್ದರು. ಅರಕೆರೆ ಬಳಿಯ ಗಾರ್ಮೆಂಟ್ಸ್ ಒಂದರಲ್ಲಿ ಕೆಲಸ ಮಾಡುತ್ತಿದ್ದ ವೀಣಾ ನಿನ್ನೆ ಬೆಳಗ್ಗೆ ಕೆಲಸಕ್ಕೆ ತೆರಳುತ್ತಿದ್ದಾಗ ಬಿಎಂಟಿಸಿ ಬಸ್ ಡಿಕ್ಕಿ ಹೊಡೆದಿದ್ದು ಗಂಭೀರವಾದ ಪೆಟ್ಟು ಬಿದ್ದು ಸಾವನ್ನಪ್ಪಿ ದ್ದಾರೆ.
ಈ ಸಂಬಂಧ ಹುಳಿಮಾವು ಸಂಚಾರಿ ಠಾಣೆ ಫೋಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈ ಗೊಂಡಿದ್ದಾರೆ.