ಬೆಂಗಳೂರು,ನ.12- ಇ-ಖಾತಾ ಸಮಸ್ಯೆಗೆ ಮುಕ್ತಿ ಹಾಡಲು ಮುಂದಾಗಿರುವ ಬಿಬಿಎಂಪಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ಇ-ಖಾತಾ ಪಡೆದುಕೊಳ್ಳಲು ವ್ಯವಸ್ಥೆ ಮಾಡಿದೆ.ಬಿಬಿಎಂಪಿ ವ್ಯಾಪ್ತಿಯಲ್ಲಿ ಅಂತಿಮ ಇ-ಖಾತಾ ವನ್ನು ಪಡೆಯಲು ಬೆಂಗಳೂರು ಒನ್ ಕೇಂದ್ರದ ಮೂಲಕ ಸಹಾಯವನ್ನು ಪಡೆಯಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮನವಿ ಮಾಡಿಕೊಂಡಿದ್ದಾರೆ.
ಬೆಂಗಳೂರು ಒನ್ ಕೇಂದ್ರದಲ್ಲಿ 45 ರೂ. ಶುಲ್ಕ ಮತ್ತು ಪ್ರತಿ ದಾಖಲೆಯ ಪುಟ ಸ್ಕ್ಯಾನ್ ಮಾಡಲು 5 ರೂ. ಪಾವತಿಸಬೇಕು ಹಾಗೂ ಬಿಬಿಎಂಪಿಗೆ 125 ರೂ.(ಅಂತಿಮ ಇ-ಖಾತಾ ಮುದ್ರಣಕ್ಕೆ ಸಿದ್ಧವಾದಾಗ ಮಾತ್ರ) ಪಾವತಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಕೆಳಗಿನ ದಾಖಲೆಗಳ ಪ್ರತಿಯೊಂದಿಗೆ ನೀವು ಬೆಂಗಳೂರು ಒನ್ ಕೇಂದ್ರವನ್ನು ಸಂಪರ್ಕಿಸಬೇಕು ಅವುಗಳಲ್ಲಿ ಕೆಲವನ್ನು ತೋರಿಸಲು ಮತ್ತು ಸ್ಕ್ಯಾನ್ ಮಾಡಲು ಮಾತ್ರ ತೋರಿಸಬೇಕು ಆದರೆ ಅವುಗಳನ್ನು ಅಲ್ಲಿ ಸಲ್ಲಿಸುವ ಅಗತ್ಯವಿಲ್ಲ ಎಂದಿದ್ದಾರೆ.
(1) ನಿಮ ಆಸ್ತಿ ತೆರಿಗೆ ರಶೀದಿ
(2) ನಿಮ ಮಾರಾಟ ಅಥವಾ ನೋಂದಾಯಿತ ಪತ್ರ
(3) ಎಲ್ಲಾ ಮಾಲೀಕರ ಆಧಾರ್
(4) ಬೆಸ್ಕಾಂ ಬಿಲ್
(5) ಜಲಮಂಡಳಿ ಬಿಲ್ (ನೀವು ಕಾವೇರಿ ಸಂಪರ್ಕವನ್ನು ಹೊಂದಿದ್ದರೆ)
(6) ಬಿಡಿಎ ಅಥವಾ ಯೋಜನಾ ಪ್ರಾಧಿಕಾರದಿಂದ ಲೇಔಟ್ ಅಥವಾ ಸೈಟ್ ಅನುಮೋದನೆ (ಇದರ ದಾಖಲೆ ಹೊಂದಿದ್ದರೆ)
(7) ಬಿಬಿಎಂಪಿಯಿಂದ ಕಟ್ಟಡ ಯೋಜನೆ ಅನುಮೋದನೆ(ಇದರ ದಾಖಲೆ ಹೊಂದಿದ್ದರೆ)
(8) ಡಿಸಿ ಪರಿವರ್ತನೆ (ಇದರ ದಾಖಲೆ ಹೊಂದಿದ್ದರೆ)
(9) ಬೆಂಗಳೂರು ಅಭಿವದ್ಧಿ ಪ್ರಾಧಿಕಾರ(ಬಿಡಿಎ) ಅಥವಾ ಕರ್ನಾಟಕ ಹೌಸಿಂಗ್ ಬೋರ್ಡ್ (ಕೆಎಚ್ಬಿ) ಅಥವಾ ಯಾವುದೇ ಸರ್ಕಾರಿ ಪ್ರಾಧಿಕಾರದಿಂದ ಹಂಚಿಕೆ ಪತ್ರ (ಇದು ನಿಮ ಪ್ರಕರಣಕ್ಕೆ ಅನ್ವಯಿಸಿದರೆ ಮತ್ತು ನೀವು ಇದರ ದಾಖಲೆ ಹೊಂದಿದ್ದರೆ)
ಈ ದಾಖಲೆಗಳನ್ನು ಬೆಂಗಳೂರು ಒನ್ ಕೇಂದ್ರಕ್ಕೆ ಸಲ್ಲಿಸುವ ಅಗತ್ಯವಿಲ್ಲ. ಆದರೆ ಆನ್ಲೈನ್ ವಿವರಗಳನ್ನು ಸಲ್ಲಿಸಲು ಅವರಿಗೆ ತೋರಿಸಿ ಮತ್ತು ನಂತರ ಅವುಗಳನ್ನು ಹಿಂದಕ್ಕೆ ಪಡೆದುಕೊಳ್ಳಿ ಎಂದು ಅವರು ವಿವರಿಸಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಇ-ಖಾತಾ ಪಡೆಯುವ ಸಲುವಾಗಿ ಕನ್ನಡ ಹಾಗೂ ಇಂಗ್ಲೀಷ್ ಭಾಷೆಯ ತರಬೇತಿ ವೀಡಿಯೋವನ್ನು ಯೂಟ್ಯೂಬ್ ನಲ್ಲಿ ಅಪ್ರೋಡ್ ಮಾಡಲಾಗಿದ್ದು, ಅದನ್ನು ನೋಡಿಕೊಂಡು ಸ್ವತಃ ಸಾರ್ವಜನಿಕರೇ ಇ-ಖಾತಾಗೆ ಅರ್ಜಿ ಸಲ್ಲಿಸಬಹುದಾಗಿದೆ.