Friday, November 15, 2024
Homeರಾಜ್ಯಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ 119 ಕ್ರಿಟಿಕಲ್ ಮತಗಟ್ಟೆ, ಭದ್ರತೆಗೆ 8 ಅರೆಸೇನಾ ಪಡೆ ನಿಯೋಜನೆ

ಹೈವೋಲ್ಟೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ 119 ಕ್ರಿಟಿಕಲ್ ಮತಗಟ್ಟೆ, ಭದ್ರತೆಗೆ 8 ಅರೆಸೇನಾ ಪಡೆ ನಿಯೋಜನೆ

Chennapatna By Election Security

ಬೆಂಗಳೂರು, ನ.12-ತೀವ್ರ ಕುತೂಹಲ ಕೆರಳಿಸಿರುವ ಹಾಗೂ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿಸಲಾಗಿರುವ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ 119 ಕ್ರಿಟಿಕಲ್ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಭದ್ರತೆಗಾಗಿ ಈಗಾಗಲೇ 8 ಅರೆಸೇನಾ ಪಡೆಯ ತಂಡಗಳನ್ನು ನಿಯೋಜಿಸಲಾಗಿದೆ.

ಚನ್ನಪಟ್ಟಣ ಕ್ಷೇತ್ರದಲ್ಲಿ 7 ಅರೆಸೇನಾ ಪಡೆಯನ್ನು 197 ಮತಗಟ್ಟೆಗಳ ಬಂದೋಬಸ್ತ್ಗೆ ನಿಯೋಜಿಸಲಾಗಿದೆ. 119 ಕ್ರಿಟಿಕಲ್ ಮತಗಟ್ಟೆಗಳಲ್ಲಿ ಒಬ್ಬರು ಪೊಲೀಸ್ ಹಾಗೂ ಒಬ್ಬರು ಗೃಹ ರಕ್ಷಕರನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರ್ತಿಕ್ ರೆಡ್ಡಿ ತಿಳಿಸಿದ್ದಾರೆ.

ಸಾಮಾನ್ಯ ಮತಗಟ್ಟೆಗಳಿಗೆ ಪೊಲೀಸ್ ಸಿಬ್ಬಂದಿ ಹಾಗೂ 54 ಕ್ಲಸ್ಟರ್ ಮತಗಟ್ಟೆಗಳಿಗೆ ಎಎಸ್ಐ ರ್ಯಾಂಕ್ ಅಧಿಕಾರಿಗಳನ್ನು ಭದ್ರತೆಗಾಗಿ ನಿಯೋಜಿಸಲಾಗಿದೆ. ಇಂದು ಸಂಜೆ 6 ಗಂಟೆಯಿದ ನ.14ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆಯನ್ನು ಜಾರಿಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ನಿನ್ನೆ ಸಂಜೆ 6 ಗಂಟೆಯಿದ ನ.14ರ ಗುರುವಾರ ಬೆಳಿಗ್ಗೆ 6 ಗಂಟೆಯವರೆಗೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಾದ್ಯಂತ ಎಲ್ಲಾ ರೀತಿಯ ಮದ್ಯದ ಸನ್ನದುಗಳನ್ನು ಮುಚ್ಚಲು ಮತ್ತು ಮದ್ಯ ಮಾರಾಟ, ಹಂಚಿಕೆ, ಸಾಗಾಣಿಕೆಯನ್ನು ನಿಷೇಧಿಸಿ ಶುಷ್ಕ ದಿನ ಎಂದು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಚುನಾವಣಾ ಕಾರ್ಯಕ್ಕಾಗಿ ಪಿಆರ್ಒ, ಎಪಿಆರ್ಓ ಹಾಗೂ ಪಿಒಎಸ್ ಸೇರಿದಂತೆ 1,252 ಮತಗಟ್ಟೆ ಸಿಬ್ಬಂದಿ ಮತ್ತು 119 ಮೈಕ್ರೋ ವೀಕ್ಷಕರನ್ನು ನಿಯೋಜಿಸಲಾಗಿದೆ.

ಶಾಂತಿಯುತ ಮತದಾನಕ್ಕಾಗಿ ಒಟ್ಟಾರೆ ಒಂದು ಸಾವಿರ ಪೊಲೀಸರನ್ನು ನಿಯೋಜಿಸಲಾಗಿದೆ. ಒಬ್ಬರು ಎಸ್ಪಿ, ಇಬ್ಬರು ಹೆಚ್ಚುವರಿ ಎಸ್ಪಿಗಳು, ರಾಮನಗರ ಜಿಲ್ಲೆಯ ಇನ್‌್ಸಪೆಕ್ಟರ್ಗಳು ಮತ್ತು ಸಬ್ ಇನ್ಸ್ ಪೆಕ್ಟರ್ಗಳು ನಾಳೆ ಚುನಾವಣಾ ಬಂದೋಬಸ್ತ್ನಲ್ಲಿ ಕರ್ತವ್ಯ ನಿರ್ವಹಿಸಲಿದ್ದಾರೆ.

RELATED ARTICLES

Latest News