ಹನೂರು,ನ.21- ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರ ಶ್ರೀ ಮಲೈ ಮಹದೇಶ್ವರಬೆಟ್ಟ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ವತಿಯಿಂದ ದೇವಾಲಯದ ಹುಂಡಿಕೆ ಕಾರ್ಯ ನಡೆಯಿತು.
ಭಕ್ತಾಧಿಗಳು ಹರಿಕೆ ರೂಪದಲ್ಲಿ ಸಲ್ಲಿಸಿದ ಕಾಣಿಕೆ 27 ದಿನದಲ್ಲಿ ಸಂಗ್ರಹ ಆಗಿರುವ ಮಾದಪ್ಪನ ಹುಂಡಿಯಲ್ಲಿ 2,43,65,775/-ಕೋಟಿ ರೂ. ನಗದು 62 ಗ್ರಾಂ. ಚಿನ್ನ ಮತ್ತು 2.512 ಕೆ.ಜಿ ಬೆಳ್ಳಿಯ ಪದಾರ್ಥಗಳು ಸಂಗ್ರಹವಾಗಿದೆ. ಅಲ್ಲದೆ 05 ವಿದೇಶಿ ಕರೆನ್ಸಿ ಹಾಗೂ 2 ಸಾವಿರ ಮುಖಬೆಲೆ 22 ನೋಟುಗಳು ದೊರೆತಿದೆ.
ಸಾಲೂರು ಬೃಹನಠಾಧ್ಯಕ್ಷರಾದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮಿಜೀಗಳ ಉಪಸ್ಥಿತಿಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ಎ.ಇ.ರಘು ನೇತೃತ್ವದಲ್ಲಿ ಹುಂಡಿ ಎಣಿಕೆ ಕಾರ್ಯ ನಡೆದಿದೆ.
ಮ.ಬೆಟ್ಟದ ಖಾಸಗಿ ಬಸ್ ನಿಲ್ದಾಣ ವಾಣಿಜ್ಯ ಸಂಕೀರ್ಣ ಸಿಸಿ ಟಿವಿ ಕ್ಯಾಮೆರಾ ಕಣ್ಗಾವಲಿನಲ್ಲಿ ಮತ್ತು ಮ.ಬೆಟ್ಟ ಪೊಲೀಸರ ಬಂದೋಬಸ್ತ್ ನಲ್ಲಿ ಬೆಳಿಗ್ಗೆ 6:30 ಗಂಟೆಗೆ ಪ್ರಾರಂಭವಾದ ಹುಂಡಿ ಹಣ ಎಣಿಕೆ ಕಾರ್ಯವು ಸಂಜೆ 7:00 ರವರೆಗೂ ನಡೆಯಿತು.
ಹುಂಡಿ ಎಣಿಕೆ ಪ್ರಕ್ರಿಯೆಯಲ್ಲಿ ಪ್ರಾಧಿಕಾರದ ಕಾರ್ಯದರ್ಶಿ ರಘ ಉಪ ಕಾರ್ಯದರ್ಶಿ ಚಂದ್ರಶೇಖರ್ ಸರಗೂರು ಮಹದೇವಸ್ವಾಮಿ ಹಣಕಾಸು ಲೆಕ್ಕ ಪತ್ರ ಸಲಹೆಗಾರ ಜಿಲ್ಲಾಡಳಿತ ಕಛೇರಿ ಸಂಗೀತ ಹಾಗೂ ಪ್ರಾಧಿಕಾರದ ಸಿಬ್ಬಂದಿಗಳು ಪೊಲೀಸ್ ಅಧಿಕಾರಿಗಳು ಮತ್ತು ಕೊಳ್ಳೇಗಾಲ ಬ್ಯಾಂಕ್ ಅಪ್ ಬರೋಡ ವ್ಯವಸ್ಥಾಪಕರು ಮತ್ತು ಸಿಬ್ಬಂದಿಗಳು ಹಾಜರಿದ್ದರು.