Saturday, November 23, 2024
Homeರಾಜ್ಯಬಿಪಿಎಲ್ ರದ್ದು ಕಾಂಗ್ರೆಸ್ ಸರ್ಕಾರದ ಎಡಬಿಡಂಗಿತನ : ಆರ್.ಅಶೋಕ್

ಬಿಪಿಎಲ್ ರದ್ದು ಕಾಂಗ್ರೆಸ್ ಸರ್ಕಾರದ ಎಡಬಿಡಂಗಿತನ : ಆರ್.ಅಶೋಕ್

R Ashok on cancelling BPL Cards By Congress government

ಬೆಂಗಳೂರು,ನ.22- ಪ್ರತಿಪಕ್ಷಗಳ ಹೋರಾಟ ಮತ್ತು ಜನಾಕ್ರೋಶಕ್ಕೆ ಮಣಿದು ಬಿಪಿಎಲ್ ಕಾರ್ಡುಗಳನ್ನು ಏಕಾಏಕಿ ರದ್ದು ಮಾಡುವ ಪ್ರಕ್ರಿಯೆಗೆ ತಡೆ ನೀಡಿದೆ ಎಡಬಿಡಂಗಿ ಕಾಂಗ್ರೆಸ್ ಸರ್ಕಾರ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಟೀಕಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಸಿಎಂ ಸಿದ್ಧರಾಮಯ್ಯನವರೇ, ರದ್ದಾದ ಬಿಪಿಎಲ್ ಕಾರ್ಡುಗಳನ್ನು ವಾಪಸ್ಸು ಕೊಟ್ಟರೆ ಸಾಲದು. ಬಡವರಿಗೆ ವಂಚಿತವಾಗಿರುವ ರೇಷನ್ ಕೊಡಲೇ ವಿತರಣೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಬಿಪಿಎಲ್ ಕಾರ್ಡುದಾರರಿಗೆ ಲಭ್ಯವಿರುವ ಆರೋಗ್ಯ ಸೇವೆ, ಗೃಹಲಕ್ಷ್ಮೀ ಹಣ ಸೇರಿದಂತೆ ಎಲ್ಲ ಸೌಲಭ್ಯಗಳನ್ನೂ ಮರುಸ್ಥಾಪಿಸಿ ಮಾಡಿ ಹಿಂದಿನ ಬಾಕಿ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಈ ಕುರಿತಂತೆ ಸಂಬಂಧಪಟ್ಟ ಇಲಾಖೆಗಳಿಗೆ, ನ್ಯಾಯಬೆಲೆ ಅಂಗಡಿಗಳಿಗೆ ಯಾವುದೇ ಗೊಂದಲವಾಗದಂತೆ ಸ್ಪಷ್ಟವಾದ ಅಽಕೃತ ಸುತ್ತೋಲೆ ಹೊರಡಿಸಿ ಅಽಕಾರಿಗಳಿಗೆ ಕಟ್ಟುನಿಟ್ಟಾದ ಸೂಚನೆ ನೀಡಬೇಕು. ಯಾವುದೇ ಬಿಪಿಎಲ್ ಕಾರ್ಡುದರರು ಅವರ ಸೌಲಭ್ಯಗಳಿಂದ ವಂಚಿತರಾಗದಂತೆ ಖಾತ್ರಿ ಪಡಿಸಿಕೊಳ್ಳಬೇಕು ಎಂದು ಸಲಹೆ ಮಾಡಿದ್ದಾರೆ.

RELATED ARTICLES

Latest News