Friday, November 15, 2024
Homeರಾಜ್ಯಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

ಪುನೀತ್ ಕೆರೆಹಳ್ಳಿಗೆ 14 ದಿನ ನ್ಯಾಯಾಂಗ ಬಂಧನ

14 days judicial custody for Puneeth Kerehalli

ಬೆಂಗಳೂರು,ನ.14– ಸಚಿವ ಜಮೀರ್ ಅಹದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಿ ಕಿಮ್ಸೌ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿದ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು.ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್ ಅಹದ್ ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್ಬುಕ್ ಲೈವ್ನಲ್ಲಿ ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದ.

ಎಚ್.ಡಿ.ಕುಮಾರಸ್ವಾಮಿ ಅವರಿಗೆ ಮತ್ತೊಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ ಎಂದು ಸಚಿವ ಜಮೀರ್ ಅವರಿಗೆ ಜೀವ ಬೆದರಿಕೆವೊಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯಕ ಬಿ.ಎಸ್.ಅಶೋಕ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು.

RELATED ARTICLES

Latest News