Friday, April 17, 2026
Homeರಾಜ್ಯಚಾರ್ಮುಡಿ ಘಾಟ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ

ಚಾರ್ಮುಡಿ ಘಾಟ್‌ ಅರಣ್ಯ ಪ್ರದೇಶದಲ್ಲಿ ಬೆಂಕಿ

Fire in Charmudi Ghat forest area

ಚಿಕ್ಕಮಗಳೂರು,ಜ.19-ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಪಾರ ಪ್ರಮಾಣದ ಸಸ್ಯ ಸಂಪತ್ತು ನಾಶವಾಗಿದೆ.

ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್‌ ಸಮೀಪದ ಮಲಯ ಮಾರುತ ಗುಡ್ಡಕ್ಕೆ ಬೆಂಕಿ ಬಿದ್ದಿದ್ದು ಬೆಂಕಿ ನಂದಿಸಲು ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿ ಹರಸಾಹಸ ಪಟ್ಟಿದ್ದಾರೆ.

ಬೆಂಕಿಯ ಕೆನ್ನಾಲಿಗೆಗೆ ಸಿಲುಕಿರುವ ಪ್ರಾಣಿ-ಪಕ್ಷಿಗಳ ಮೃತಪಟ್ಟಿರುವ ಶಂಕೆ ಇದೆ. ಅರಣ್ಯಕ್ಕೆ ಬೆಂಕಿ ಬಿದ್ದಿರುವುದರಿಂದ ಭಾರಿ ಪ್ರಮಾಣದಲ್ಲಿ ಒಣಗಿ ಬಿದ್ದಿದ್ದ ಎಲೆಗಳಿಂದ ಅರಣ್ಯ ಪ್ರದೇಶ ಬೆಂಕಿಗಾಹುತಿ ಆಗಿದೆ. ಅರಣ್ಯ ಪ್ರದೇಶದಲ್ಲಿ ಬೆಂಕಿ ಹೊತ್ತಲು ನಿಖರವಾದ ಕಾರಣ ತಿಳಿದು ಬಂದಿಲ್ಲ.

RELATED ARTICLES

Latest News