ನವದೆಹಲಿ,ನ.15- ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ ಸರ್ಕಾರದಿಂದ ಮೂರನೇ ಹಂತದ ಕ್ರಮ ಜಾರಿಯಾಗಿದೆ. ಪ್ರಾಥಮಿಕ ಶಾಲಾ ಮಕ್ಕಳಿಗೆ ಆನ್‍ಲೈನ್ ಮೂಲಕ ತರಗತಿ ನಡೆಸಲು ಸರ್ಕಾರ ಸೂಚಿಸಿದೆ.
ಬಿಎಸ್ 3 ಪೆಟ್ರೋಲ್, ಡೀಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗಿದೆ. ಸಿಎನ್‍ಜಿ, ಇವಿ ಸೇರಿದಂತೆ ಅಂತರರಾಜ್ಯಗಳ ಬಿಎಸ್4 ಡಿಸೇಲ್ ಬಸ್‍ಗಳಿಗೆ ಮಾತ್ರ ದೆಹಲಿ ಪ್ರವೇಶ ಕಲ್ಪಿಸಿದೆ. ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದೆ. ಸರ್ಕಾರ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ.
ಏನೇನು ಕ್ರಮ ?:
ಜಿಆರ್‍ಎಪಿ-3 ಜಾರಿಯಲ್ಲಿರುವವರೆಗೆ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲೆಯಿಂದ ವಿನಾಯಿತಿ ನೀಡಲಾಗುತ್ತಿದ್ದು, ಆನ್‍ಲೈನ್ ಮೂಲಕ ತರಗತಿ ನಡೆಸಲು ಸೂಚನೆ ನೀಡಲಾಗಿದೆ.ಬಿಎಸ್-3 ಪೆಟ್ರೋಲ್ ಡಿಸೇಲ್ ವಾಹನಗಳ ಸಂಚಾರಕ್ಕೆ ತಡೆ ನೀಡಲಾಗುತ್ತದೆ. ಸಿಎನ್‍ಜಿ, ಇವಿ ಸೇರಿದಂತೆ ಅಂತರರಾಜ್ಯಗಳ ಬಿಎಸ್4 ಡಿಸೇಲ್ ಬಸ್‍ಗಳಿಗೆ ಮಾತ್ರ ದೆಹಲಿ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ.
ತುರ್ತು ಅಲ್ಲದ ನಿರ್ಮಾಣ ಮತ್ತು ಕಟ್ಟಡ ತೆರವು ಕಾರ್ಯಕ್ಕೆ ತಡೆ ನೀಡಲಾಗಿದ್ದು, ಸರ್ಕಾರಿ ಕಾಮಗಾರಿ, ಆರೋಗ್ಯ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂ„ಸಿದ ಕಟ್ಟಡಗಳ ಕಾಮಗಾರಿಗೆ ಮಾತ್ರ ಅನುಮತಿ ನೀಡಲಾಗಿದೆ. ಜೊತೆಗೆ ರಸ್ತೆಗಳಲ್ಲಿ ನೀರು ಚಿಮುಕಿಸುವುದನ್ನು ಹೆಚ್ಚಿಸುವಂತೆ ಸೂಚನೆ ನೀಡಲಾಗಿದೆ.
ದೆಹಲಿ ಎನ್‍ಸಿಎಆರ್‍ನಲ್ಲಿ 5ನೇ ತರಗತಿವರೆಗಿನ ಶಾಲೆಗಳನ್ನು ಮುಚ್ಚಲು ಆದೇಶ ನೀಡಲಾಗಿದೆ. ಮುಖ್ಯವಾಗಿ ದೆಹಲಿ ನಿವಾಸಿಗಳು ಸಾಧ್ಯವಾದಷ್ಟು ಸಾರ್ವಜನಿಕ ಸಾರಿಗೆ ಬಳಕೆಗೆ ಆದ್ಯತೆ ನೀಡಬೇಕು ಎಂದು ಸರ್ಕಾರ ಕಟ್ಟುನಿಟ್ಟಾಗಿ ಹೇಳಿದೆ.
ಅಪಾಯ ಮಟ್ಟ ಮೀರಿದ ಮಾಲಿನ್ಯ:
ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (ಸಿಪಿಸಿಬಿ) ಪ್ರಕಾರ, ರಾಜಧಾನಿ ಭಾಗದ ಹಲವು ಪ್ರದೇಶಗಳಲ್ಲಿ ಎಕ್ಯೂಐ ಪ್ರಮಾಣ 450 ದಾಟಿದೆ. ಆನಂದ ವಿಹಾರ್, ಅಶೋಕ್ ವಿಹಾರ್, ಬವಾನಾ, ದ್ವಾರಕಾ, ಜಹಾಂಗೀರ್‍ಪುರಿ, ಮುಂಡ್ಕ, ನಜಾಮ್ ಗಡ, ಲಾಜ್‍ಪತ್ ನಗರ್, ಪತ್ಪರ್‍ಗಂಜ್, ಪಂಜಾಬಿ ಬಾಗ್, ಆರ್‍ಕೆ ಪುರಂ, ರೋಹಿಣಿ, ವಿವೇಕ್ ವಿಹಾರ್ ಮತ್ತು ವಾಜಿರ್‍ಪುರ ಪ್ರದೇಶಗಳನ್ನು ಎಕ್ಯೂಐ ಸರಾಸರಿ ತೀವ್ರ ಸ್ವರೂಪದ ವರ್ಗದಲ್ಲಿ ಗುರುತಿಸಲಾಗಿದ್ದು, ಬೆಳಿಗ್ಗೆ 6 ಗಂಟೆ ಸುಮಾರಿಗೆ 450ಕ್ಕಿಂತ ಅಧಿಕವಿತ್ತು.
ಕೇಂದ್ರೀಯ ಮಾಲಿನ್ಯ ನಿಯಂತ್ರಣ ಮಂಡಳಿ (ಅPಅಃ) ಪ್ರಕಾರ, ಎಕ್ಯೂಐ ಮಟ್ಟವು ಶೂನ್ಯದಿಂದ 50 ರಷ್ಟಿದ್ದರೆ ಉಸಿರಾಟಕ್ಕೆ ಯೋಗ್ಯ ಗಾಳಿ, 51 ರಿಂದ 100 ರಷ್ಟಿದ್ದರೆ ಸಮಾಧಾನಕರ, 101 ರಿಂದ 200 ರಷ್ಟಿದ್ದರೆ ಸಾಧಾರಣ, 201ರಿಂದ 300ರಷ್ಟಿದ್ದರೆ ಕಳಪೆ ಹಾಗೂ 301 ರಿಂದ 400 ರಷ್ಟಿದ್ದರೆ ಅತ್ಯಂತ ಕಳಪೆ, 401 ರಿಂದ 450ರಷ್ಟು ಕಂಡು ಬಂದರೆ ತೀವ್ರ ಕಳಪೆ ಹಾಗೂ 450ಕ್ಕಿಂತ ಹೆಚ್ಚಾದರೆ ಅತ್ಯಂತ ಅಪಾಯಕಾರಿ ಎಂದು ವರ್ಗೀಕರಿಸಲಾಗಿದೆ.
300ಕ್ಕೂ ಅಧಿಕ ವಿಮಾನ ಹಾರಾಟದಲ್ಲಿ ವ್ಯತ್ಯಯ:
ನಿನ್ನೆ ಬೆಳಿಗ್ಗೆ ದಟ್ಟನೆಯ ಮಂಜು ಆವರಿಸಿದ್ದನ್ನು ಕಂಡು ದೆಹಲಿಯ ಜನ ಕಂಗಾಲಾಗಿದ್ದಾರೆ. ವಾಯು ಗುಣಮಟ್ಟ ಸೂಚ್ಯಂಕದಲ್ಲಿ (ಎಐಕ್ಯೂ) ಮಟ್ಟ ಅಪಾಯಕಾರಿ ಹಂತದತ್ತ ತಲುಪುತ್ತಿದೆ. ಮುಂಜಾನೆ ಎಐಕ್ಯೂ 452ರ ಗಡಿ ದಾಟಿದೆ. ಇದರಿಂದ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಗೋಚರತೆ ಕಡಿಮೆಯಾಗಿದ್ದು, 300 ಅಧಿಕ ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ ಎಂದು -ಫ್ಲೈಟ್ ರಾಡಾರ್ ತಿಳಿಸಿದೆ.