ಬೆಂಗಳೂರು,ನ.15- ರಾಜ್ಯ ಸೇವೆಯಲ್ಲಿದ್ದ ಐಎಎಸ್ ಅಧಿಕಾರಿ ಶಿಖಾ ಅವರನ್ನು ಕೇಂದ್ರ ಸರ್ಕಾರದ ಸೇವೆಗೆ ನಿಯೋಜಿಸಲಾಗಿದೆ. ಭಾರತ ಸರ್ಕಾರದ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ಕಾರ್ಯದರ್ಶಿ ಹುದ್ದೆಗೆ ಶಿಖಾ ಅವರನ್ನು ನೇಮಕ ಮಾಡಲಾಗಿದೆ.
ರಾಜ್ಯ ಸರ್ಕಾರದ ಸೇವೆಯಿಂದ ಶಿಖಾ ಅವರನ್ನು ಬಿಡುಗಡೆಗೊಳಿಸಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸೇವೆಗೆ ಶಿಖಾ ಅವರು ನಿಯೋಜನೆಗೊಂಡ ಹಿನ್ನಲೆಯಲ್ಲಿ ತೆರವಾಗಿರುವ ವಾಣಿಜ್ಯ ತೆರಿಗೆಗಳ ಆಯುಕ್ತರ ಹುದ್ದೆಯ ಜವಾಬ್ದಾರಿಯನ್ನು ವಾಣಿಜ್ಯ ತೆರಿಗೆಗಳ ಹೆಚ್ಚುವರಿ ಆಯುಕ್ತರಾದ(ಜಾರಿ) ಚಂದ್ರಶೇಖರ್ ನಾಯಕ್.ಎಲ್ ಅವರಿಗೆ ವಹಿಸಿ ಆದೇಶಿಸಲಾಗಿದೆ.
ಸದಾಶಿವಪ್ರಭು.ಬಿ ಅವರನ್ನು ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಇಲಾಖೆಯ ( ವಿಜ್ಞಾನ ಮತ್ತು ತಂತ್ರಜ್ಞಾನ) ನಿರ್ದೇಶಕ ಹುದ್ದೆಗೆ ವರ್ಗಾಯಿಸಲಾಗಿದೆ. ಜೊತೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ನಿರ್ದೇಶಕರ( ಮಧ್ಯಾಹ್ನದ ಉಪಹಾರ) ಹುದ್ದೆಯ ಹೊಣೆಗಾರಿಕೆಯನ್ನು ವಹಿಸಲಾಗಿದೆ.