Friday, April 17, 2026
Homeಜಿಲ್ಲಾ ಸುದ್ದಿಗಳುಕನಕಪುರ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

ಕನಕಪುರ : ವಾಹನ ಡಿಕ್ಕಿ ಹೊಡೆದು ಚಿರತೆ ಸಾವು

Kanakapura: Leopard dies after being hit by vehicle

ಕನಕಪುರ,ಜ.19-ವಾಹನವೊಂದು ಡಿಕ್ಕಿ ಹೊಡೆದ ಪರಿಣಾಮ ಚಿರತೆ ಮೃತಪಟ್ಟಿರುವ ಘಟನೆ ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ 209ರ ಮಹಾರಾಜರಕಟ್ಟೆ ರಸ್ತೆ ಬಳಿ ನಡೆದಿದೆ. ಸಂಚಾರಿ ಆರಕ್ಷಕ ಉಪ ನಿರೀಕ್ಷಕ ನಾಗರಾಜು ಮತ್ತು ಸಿಬ್ಬಂದಿ ಗಸ್ತಿನಲ್ಲಿರುವಾಗ ಘಟನೆಯ ಬಗ್ಗೆ ಸಾರ್ವಜನಿಕರು ಮಾಹಿತಿ ನೀಡಿದ್ದಾ.

ಮಾಹಿತಿ ತಿಳಿದ ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಾದ ಉಪ ವಲಯ ಅರಣ್ಯಾಧಿಕಾರಿ ರವಿ, ಅರಣ್ಯಾಧಿಕಾರಿ ಶಿವಕುಮಾರ್‌ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ, ವನ್ಯಜೀವಿ ಸಂರಕ್ಷಣೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಚಿರತೆ ಸಾವಿಗೆ ಕಾರಣವಾದ ವಾಹನ ಚಾಲಕರ ವಿರುದ್ಧ ಕ್ರಮ ವಹಿಸಲಾಗುವುದು ಎಂದು ಉಪ ವಲಯ ಅರಣ್ಯಾಧಿಕಾರಿ ರವಿ ತಿಳಿಸಿದ್ದಾರೆ.

RELATED ARTICLES

Latest News