Monday, November 25, 2024
Homeರಾಜ್ಯಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಶಾಂತಿ-ಸಾಮರಸ್ಯ ಸಾರಿದ ಧರ್ಮ ಸಂರಕ್ಷಣಾ ಮೆರವಣಿಗೆ

ಬೆಳ್ತಂಗಡಿ,ಅ.30- ಧರ್ಮಸ್ಥಳದಲ್ಲಿ ಬಸದಿಯಲ್ಲಿರುವ ಮೂಲ ಸ್ವಾಮಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಮತ್ತು ದೇವಸ್ಥಾನದಲ್ಲಿ ಮುಖ್ಯ ಆರಾಧ್ಯ ದೇವರಾದ ಶ್ರೀ ಮಂಜುನಾಥ ಸ್ವಾಮಿ ಶಾಂತಿ, ತಾಳ್ಮೆಯ ಸಾಕಾರ ಮೂರ್ತಿಗಳಾಗಿದ್ದು, ಇಲ್ಲಿ ಯಾವಾಗಲೂ ಶಾಂತಿ, ನೆಮ್ಮದಿ, ಸಾಮರಸ್ಯ ನೆಲೆಸಿರುತ್ತದೆ. ಸದಾ ಸತ್ಯ, ಧರ್ಮ, ನ್ಯಾಯ, ನೀತಿ ನೆಲೆನಿಂತ ಪವಿತ್ರ ಪುಣ್ಯಕ್ಷೇತ್ರ ಧರ್ಮಸ್ಥಳ. ತಾನು ಮತ್ತು ಕುಟುಂಬದವರು ಎಲ್ಲರೂ ಶಾಂತಚಿತ್ತರಾಗಿದ್ದೇವೆ. ಇಲ್ಲಿ ಶ್ರದ್ಧಾ-ಭಕ್ತಿಯಿಂದ ಬರುವ ಎಲ್ಲಾ ಭಕ್ತರಿಗೂ ಶಾಂತಿ, ನೆಮ್ಮದಿ, ತಾಳ್ಮೆ ಇರುತ್ತದೆ ಎಂದು ಧರ್ಮಸ್ಥಳದ ಧರ್ಮಾಕಾರಿ ಡಿ. ವೀರೇಂದ್ರ ಹೆಗ್ಗಡೆ ಹೇಳಿದರು.

ಧರ್ಮಸ್ಥಳಕ್ಕೆ ಉಭಯ ಧರ್ಮಸಂರಕ್ಷಣಾ ರಥಗಳು ಭವ್ಯ ಮೆರವಣಿಗೆಯಲ್ಲಿ ಬಂದಾಗ ಹಾಗೂ ಉಜಿರೆಯಿಂದ 50 ಸಾವಿರಕ್ಕೂ ಮಿಕ್ಕಿ ಭಕ್ತರು, ಅಭಿಮಾನಿಗಳು ಪಾದಯಾತ್ರೆಯಲ್ಲಿ ಬಂದ ಸಂದರ್ಭದಲ್ಲಿ ಅವರು ಮಾತನಾಡಿದರು.

ಶ್ರೀ ಮಂಜುನಾಥ ಸ್ವಾಮಿ ವಿಷಕಂಠನಾಗಿದ್ದು, ವಿಷವನ್ನು ಕಂಠದಲ್ಲಿಟ್ಟುಕೊಂಡು ಲೋಕಕಲ್ಯಾಣ ಮಾಡುವ ದೇವರು ದುಶ್ಟಶಕ್ತಿಗಳನ್ನು ನಾಶಮಾಡಿ ಶಿಷ್ಟರ ರಕ್ಷಣೆ ಮಾಡುತ್ತಾರೆ. ಧರ್ಮಸ್ಥಳದ ಅಭಿಮಾನಿ ಭಕ್ತರೆ ಸ್ವಯಂ-ಪ್ರೇರಣೆಯಿಂದ ಕ್ಷೇತ್ರದ ರಕ್ಷಣೆಗಾಗಿ ಯಾವುದೇ ಪ್ರತಿಫಲಾಪೇಕ್ಷೆ ಬಯಸದೆ ಮಾಡಿರುವ ಸೇವೆ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯಗೆ ಛೀಮಾರಿ ಹಾಕಿದ ಕೇಂದ್ರ ಸಚಿವ ಶೇಖಾವತ್

ಒಂದು ದೇಶ ಹಾಳು ಮಾಡಬೇಕಾದರೆ ಅಲ್ಲಿನ ಧರ್ಮ, ಸಂಸ್ಕøತಿಗೆ ಹಾನಿ ಮಾಡಬೇಕಂತೆ. ಹಾಗೆ ಧರ್ಮಸ್ಥಳದ ಬಗ್ಗೆ ಸುಳ್ಳು ವದಂತಿಯೊಂದಿಗೆ ಅಪಪ್ರಚಾರ ಮಾಡಲಾಗಿದೆ. ಕಾನೂನಿನ ಚೌಕಟ್ಟಿನೊಳಗೆ ಯಾವುದೇ ತನಿಖೆಗೂ ತಾನು ಸಿದ್ಧ. ತಮ್ಮ ಮನ, ವಚನ, ಕಾಯ ಪವಿತ್ರವಾಗಿದೆ. ನಮ್ಮಲ್ಲಿ ಯಾವುದೇ ಸಂಶಯ, ಗೊಂದಲವಿಲ್ಲ. ಮಂಜುನಾಥ ಸ್ವಾಮಿ, ಅಣ್ಣಪ್ಪ ಸ್ವಾಮಿ ಹಾಗೂ ಧರ್ಮದೇವತೆ ಸನ್ನಿಯಲ್ಲಿ ಪ್ರತಿ ತಿಂಗಳು ಸಂಕ್ರಾಂತಿಯಂದು ತಾನು ವರದಿ ಒಪ್ಪಿಸಬೇಕು. ಅವರ ಅಭಯ, ಅನುಗ್ರಹ ತಾನು ಮಾಡುವ ಎಲ್ಲಾ ಸೇವಾಕಾರ್ಯಗಳಿಗೆ ಇದೆ ಎಂದು ಹೇಳಿದರು.

ಪ್ರಬಲ ಇಚ್ಛಾಶಕ್ತಿ, ನೈತಿಕ ಬಲ, ದೃಢ ಸಂಕಲ್ಪ ಹಾಗೂ ಭಕ್ತರು ಮತ್ತು ಅಭಿಮಾನಿಗಳ ಬೆಂಬಲದಿಂದ ನಮ್ಮ ಸೇವಾಕಾರ್ಯಗಳು ಮುಂದೆ ಇನ್ನಷ್ಟು ದುಪ್ಪಟ್ಟಾಗಲಿವೆ. ಭಕ್ತರ ಹಾಗೂ ಅಭಿಮಾನಿಗಳ ಪ್ರೀತಿ-ವಿಶ್ವಾಸ ಮತ್ತು ಗೌರವ ತನಗೆ ವಜ್ರಕವಚವಾಗಿ ರಕ್ಷಣೆ ನೀಡುತ್ತದೆ ಎಂದು ಹೆಗ್ಗಡೆ ಅವರು ವಿಶ್ವಾಸ ವ್ಯಕ್ತಪಡಿಸಿದರು.


ಸಭೆಯ ಆರಂಭದಲ್ಲಿ ಹೆಗ್ಗಡೆಯವರು ವೇದಿಕೆಯ ಮಧ್ಯದಲ್ಲಿರುವ ಧರ್ಮಪೀಠದಲ್ಲಿ ಆಸೀನರಾದರು. ಎಲ್ಲಾ ಸ್ವಾಮೀಜಿಯವರು ಹಣ್ಣು-ಹಂಪಲು, ತಾಂಬೂಲ, ಕಾಯಿ, ವೀಳ್ಯದೆಲೆ ಇರುವ ಹರಿವಾಣಕ್ಕೆ ಅಭಿಮಂತ್ರಿಸಿದ ಮಂತ್ರಾಕ್ಷತೆ ಹಾಕಿ ಶುಭ ಹಾರೈಸಿದರು. ಬಳಿಕ ಸಂಕಲ್ಪ ಪೀಠದಲ್ಲಿದ್ದ ಹರಿವಾಣವನ್ನು ಹೆಗ್ಗಡೆಯವರಿಗೆ ಹಸ್ತಾಂತರಿಸಲಾಯಿತು. ಸಭಾಸದರೆಲ್ಲರೂ ನಾವು ಸದಾ ಧರ್ಮದ ರಕ್ಷಣೆಗಾಗಿ ಧರ್ಮಸ್ಥಳದ ರಕ್ಷಣೆಗೆ ನಿಮ್ಮೊಂದಿಗಿದ್ದೇವೆ ಎಂದು ದೃಢಸಂಕಲ್ಪ ಮಾಡಿದರು.

ಸುಬ್ರಹ್ಮಣ್ಯ ಮಠದ ಶ್ರೀ ವಿದ್ಯಾಪ್ರಸನ್ನ ಸ್ವಾಮೀಜಿ, ಉಡುಪಿ ಕಾಣಿಯೂರು ಮಠದ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ, ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಕರಿಂಜೆಯ ಶ್ರೀ ಮುಕ್ತಾನಂದ ಸ್ವಾಮೀಜಿ, ಫಲಿಮಾರು ಮಠದ ಶ್ರೀ ವಿದ್ಯಾೀಶ ಸ್ವಾಮೀಜಿ ಸೇರಿದಂತೆ 15 ಮಂದಿ ಮಠಾೀಶರು ಉಪಸ್ಥಿತರಿದ್ದರು. ಸಂಸದ ನಳಿನ್‍ಕುಮಾರ್ ಕಟೀಲ್ ಮತ್ತು ಶಾಸಕ ಹರೀಶ್ ಪೂಂಜ ಇದ್ದರು.

RELATED ARTICLES

Latest News