ನವದೆಹಲಿ,ನ.28- ಬಾಂಗ್ಲಾದೇಶದಲ್ಲಿ ಹಿಂದೂಗಳ ವಿರುದ್ಧ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ತಾರತಮ್ಯವನ್ನು ಪರಿಹರಿಸುವಂತೆ 68 ನಿವೃತ್ತ ನ್ಯಾಯಮೂರ್ತಿಗಳು, ಅಧಿಕಾರಿಗಳು ಮತ್ತು ಹಾಲಿ ಸಂಸದರ ಗುಂಪು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದೆ. ಮಾತ್ರವಲ್ಲ, ಇಸ್ಕಾನ್ನ ಚಿನಯ್ ಕಷ್ಣ ದಾಸ್ ಬ್ರಹಚಾರಿ ಬಂಧನಕ್ಕೆ ಸಂಬಂಧಿಸಿದಂತೆ ಮೋದಿ ಮಧ್ಯಸ್ಥಿಕೆವಹಿಸಬೇಕೆಂದು ಗುಂಪು ಮನವಿ ಮಾಡಿಕೊಂಡಿದೆ.
ಜಮು ಮತ್ತು ಕಾಶೀರದ ಮಾಜಿ ಡಿಜಿಪಿ ಶೇಶ್ ಪಾಲ್ ವೈದ್ಯ, 68 ನಿವತ್ತ ಹೈಕೋರ್ಟ್ ನ್ಯಾಯಮೂರ್ತಿಗಳು, ಐಎಎಸ್, ಐಪಿಎಸ್, ಐಆರ್ಎಸ್, ಐಐಎಸ್ ಮತ್ತಿತರ ಅಧಿಕಾರಿಗಳ ಗುಂಪು ಇಸ್ಕಾನ್ನ ಚಿನಯ್ ಕಷ್ಣ ಅವರ ಅನ್ಯಾಯದ ಬಂಧನ ಸೇರಿದಂತೆ ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪತ್ರ ಬರೆದಿದ್ದಾರೆ.
ಮೋದಿ ನೇತತ್ವದ ಕೇಂದ್ರ ಸರ್ಕಾರವು ಬಾಂಗ್ಲಾದೇಶದಲ್ಲಿ ಹಿಂದೂಗಳ ಸುರಕ್ಷತೆಯನ್ನು ಖಾತ್ರಿಪಡಿಸಿಕೊಳ್ಳಲು ಮತ್ತು ಯಾವುದೇ ತಪ್ಪಿಲ್ಲದೆ ಬಂಧನಕ್ಕೊಳಗಾಗಿರುವ ಚಿನಯ್ ಕಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆಗೆ ಒತ್ತಾಯಿಸಿ ತ್ವರಿತ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದೆ.
ಅನ್ಯಾಯವಾಗಿ ಬಂಧಿಸಲ್ಪಟ್ಟಿರುವ ಚಿನಯ್ ಕಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರನ್ನು ತಕ್ಷಣವೇ ಬಿಡುಗಡೆ ಮಾಡುವುದು ಅತ್ಯಗತ್ಯ. ಅವರ ಮೇಲಿನ ಎಲ್ಲಾ ಆರೋಪಗಳನ್ನು ಕೈಬಿಡಬೇಕು ಮತ್ತು ಶಾಂತಿಯುತವಾಗಿ ಪ್ರತಿಭಟಿಸುವ ಮತ್ತು ಅವರ ಕಳವಳಗಳನ್ನು ವ್ಯಕ್ತಪಡಿಸುವ ಅವರ ಹಕ್ಕುಗಳನ್ನು ಎತ್ತಿಹಿಡಿಯಬೇಕು ಎಂದು ಪತ್ರದಲ್ಲಿ ತಿಳಿಸಲಾಗಿದೆ.
ಬಾಂಗ್ಲಾದೇಶದಲ್ಲಿರುವ ಹಿಂದೂಗಳಿಗೆ ತಕ್ಷಣದ ರಕ್ಷಣೆ ಕೊಡಬೇಕು, ಚಿನಯ್ ಕಷ್ಣ ದಾಸ್ ಮತ್ತು ಇತರ ಧಾರ್ಮಿಕ ಮುಖಂಡರ ಬಿಡುಗಡೆ, ಹಿಂದೂ ಮಹಿಳೆಯರಿಗೆ ನ್ಯಾಯ, ಉದ್ಯೋಗ ಮತ್ತು ಆಸ್ತಿ ಹಕ್ಕುಗಳ ರಕ್ಷಣೆ ಮತ್ತು ಬಾಂಗ್ಲಾದೇಶದ ಮೇಲೆ ಅಂತರರಾಷ್ಟ್ರೀಯ ನಿರ್ಬಂಧಗಳ ಬಗ್ಗೆ ಭಾರತ ಸರ್ಕಾರವು ಕ್ರಮ ಕೈಗೊಳ್ಳಬೇಕೆಂದು ಪತ್ರದಲ್ಲಿ ಒತ್ತಾಯಿಸಲಾಗಿದೆ.