ನಿತ್ಯ ನೀತಿ : ಬದುಕೆಂದರೆ, ಬಿರುಗಾಳಿಯಲ್ಲೂ ದೀಪವೊಂದನ್ನು ಬೆಳಗಲು ನಿರಂತರ ಪ್ರಯತ್ನಿಸುವುದು.
ಪಂಚಾಂಗ : ಭಾನುವಾರ , 01-12-2024
ಕ್ರೋಧಿನಾಮ ಸಂವತ್ಸರ / ದಕ್ಷಿಣಾಯಣ / ಶರದ್ ಋತು / ಕಾರ್ತಿಕ ಮಾಸ / ಕೃಷ್ಣ ಪಕ್ಷ / ತಿಥಿ: ಅಮಾವಾಸ್ಯೆ / ನಕ್ಷತ್ರ: ಅನುರಾಧಾ / ಯೋಗ: ಸುಕರ್ಮಾ / ಕರಣ: ಕಿಂಸ್ತುಘ್ನ
ಸೂರ್ಯೋದಯ – ಬೆ.06.26
ಸೂರ್ಯಾಸ್ತ – 05.51
ರಾಹುಕಾಲ – 4.30-6.00
ಯಮಗಂಡ ಕಾಲ – 12.00-1.30
ಗುಳಿಕ ಕಾಲ – 3.00-4.30
ರಾಶಿಭವಿಷ್ಯ :
ಮೇಷ: ಸಂತೋಷವನ್ನು ಇತರರೊಂದಿಗೆ ಹಂಚಿ ಕೊಳ್ಳಲು ಉತ್ತಮ ಅವಕಾಶಗಳು ಸಿಗುವುದಿಲ್ಲ.
ವೃಷಭ: ದೈನಂದಿನ ಚಟುವಟಿಕೆ ಹೊರತುಪಡಿಸಿ ವಿಭಿನ್ನ ಕಾರ್ಯಗಳಲ್ಲಿ ಆಸಕ್ತಿ ಹೊಂದುವಿರಿ.
ಮಿಥುನ: ವೃತ್ತಿ ಜೀವನದಲ್ಲಿ ಉತ್ತಮ ಪ್ರಗತಿ ಸಾಧಿಸುವಿರಿ. ಆರೋಗ್ಯದ ಕಡೆ ಗಮನ ಹರಿಸಿ.
ಕಟಕ: ಕುಟುಂಬ ಸದಸ್ಯರು ಮತ್ತು ನೆರೆಹೊರೆಯವರಿಂದ ಆರ್ಥಿಕ ಸಹಾಯ ಸಿಗಲಿದೆ.
ಸಿಂಹ: ಅದೃಷ್ಟ ನಿಮ್ಮೆಡೆಗಿದ್ದರೂ ಎಲ್ಲ ಕಾರ್ಯಗಳನ್ನೂ ಎಚ್ಚರಿಕೆಯಿಂದ ನಿರ್ವಹಿಸಿ.
ಕನ್ಯಾ: ವ್ಯಾಪಾರಿಗಳಿಗೆ ಅನುಕೂಲಕರ ದಿನ. ಗೃಹ ನಿರ್ಮಾಣ ಮಾಡಲು ಯೋಚಿಸುವಿರಿ.
ತುಲಾ: ಆರೋಗ್ಯ ಸಮಸ್ಯೆ ಕಾಣಿಸಿಕೊಳ್ಳಲಿದ್ದು, ಅದಕ್ಕೆ ಕಾರಣ ತಿಳಿಯುವುದು ಕಷ್ಟ.
ವೃಶ್ಚಿಕ: ಸಹೋದ್ಯೋಗಿಗಳೊಂದಿಗೆ ಹಲವಾರು ಭಿನ್ನಾಭಿಪ್ರಾಯಗಳು ಉಂಟಾಗಬಹುದು.
ಧನುಸ್ಸು: ವಿದ್ಯಾರ್ಥಿಗಳು ಪರೀಕ್ಷೆಗಳಲ್ಲಿ ಯಶಸ್ಸು ಪಡೆಯಲು ಹೆಚ್ಚು ಶ್ರಮ ವಹಿಸಬೇಕಾಗುತ್ತದೆ.
ಮಕರ: ಆಧ್ಯಾತ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳು ವಿರಿ. ಮಕ್ಕಳಿಂದ ಅನುಕೂಲವಾಗಲಿದೆ.
ಕುಂಭ: ಸ್ನೇಹಿತನಿಗೆ ಸಹಾಯ ಮಾಡುವಿರಿ.
ಸಂಗಾತಿಯೊಂದಿಗೆ ಜಗಳವಾಡುವ ಸಾಧ್ಯತೆಯಿದೆ.
ಮೀನ: ಆರೋಗ್ಯದ ವಿಷಯದಲ್ಲಿ ಜಾಗರೂಕ ರಾಗಿರುವುದು ಬಹಳ ಒಳ್ಳೆಯದು.