ಬೆಂಗಳೂರು,ಡಿ.1- ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ವಕೀಲರಿಗೆ ಒಟ್ಟು ಶೇ.24 ರಷ್ಟು ಮೀಸಲಾತಿಯನ್ನು ಕಲ್ಪಿಸಿ ರಾಜ್ಯಸರ್ಕಾರ ಆದೇಶಿಸಿದೆ.
ಅನುಸೂಚಿತ ಜಾತಿಗಳ ವಕೀಲರಿಗೆ ಶೇ.17, ಪರಿಶಿಷ್ಟ ಪಂಗಡಗಳ ವಕೀಲರಿಗೆ ಶೇ.7 ರಷ್ಟು ಮೀಸಲಾತಿ ಕಲ್ಪಿಸಿ ಸಮಾಜ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ಸರ್ಕಾರಿ ವಕೀಲರನ್ನು ನೇಮಿಸುವ ಸಂದರ್ಭದಲ್ಲಿ ಎಸ್‌ಸಿ/ಎಸ್‌ಟಿ ವಕೀಲರಿಗೆ ಒಟ್ಟು ಶೇ.24 ರಷ್ಟು ಮೀಸಲಾತಿ ಕಲ್ಪಿಸುವಂತೆ ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರು ಸಲ್ಲಿಸಿದ್ದ ಪ್ರಸ್ತಾವನೆ ಹಿನ್ನೆಲೆಯಲ್ಲಿ ಈ ಆದೇಶ ಹೊರಡಿಸಲಾಗಿದೆ.