ನಿತ್ಯ ನೀತಿ : ವಿಜ್ಞಾನ ಹೇಳುತ್ತದೆ ನಾಲಿಗೆ ಮೇಲಾದ ಗಾಯ ಅತೀ ಬೇಗ ಮಾಯುತ್ತದೆ ಎಂದು. ಜ್ಞಾನ ಹೇಳುತ್ತದೆ ನಾಲಿಗೆಯಿಂದ ಹೃದಯದಲ್ಲಿ ಆದ ಗಾಯ ಎಂದೂ ಮಾಯುವುದಿಲ್ಲ ಎಂದು..!
ಪಂಚಾಂಗ : ಸೋಮವಾರ, 02-12-2024
ಕ್ರೋನಾಮ ಸಂವತ್ಸರ / ದಕ್ಷಿಣಾಯಣ / ಹೇಮಂತ ಋತು / ಮಾರ್ಗಶಿರ ಮಾಸ / ಶುಕ್ಲ ಪಕ್ಷ / ತಿಥಿ: ಪ್ರತಿಪದ್ / ನಕ್ಷತ್ರ: ಜ್ಯೇಷ್ಠ / ಯೋಗ: ಧೃತಿ / ಕರಣ: ಬಾಲವ
ಸೂರ್ಯೋದಯ – ಬೆ.06.27
ಸೂರ್ಯಾಸ್ತ – 05.52
ರಾಹುಕಾಲ – 7.30-9.00
ಯಮಗಂಡ ಕಾಲ – 10.30-12.00
ಗುಳಿಕ ಕಾಲ – 1.30-3.00
ರಾಶಿಭವಿಷ್ಯ :
ಮೇಷ: ಕೌಟುಂಬಿಕ ಕಲಹಗಳು ಬೀದಿಗೆ ಬರುವ ಸಾಧ್ಯತೆಗಳಿವೆ. ಸಹೋದ್ಯೋಗಿಗಳೇ ಶತ್ರುಗಳಾಗುವರು.
ವೃಷಭ: ಕುಟುಂಬ ಸದಸ್ಯರು, ಸ್ನೇಹಿತರೊಂದಿಗೆ ಸಂತಸದಿಂದ ಕೆಲಕಾಲ ಕಳೆಯುವಿರಿ.
ಮಿಥುನ: ಸಾಂಸಾರಿಕ ಜೀವನ ತೃಪ್ತಿಕರವಾಗಿರಲಿದೆ. ನೌಕರರಿಗೆ ಹೊಸ ವಸತಿ ವ್ಯವಸ್ಥೆಯಾಗಲಿದೆ.
ಕಟಕ: ಸಮಾಧಾನದಿಂದ ಕಾರ್ಯನಿರ್ವಹಿಸಿದಲ್ಲಿ ಕೆಲಸ-ಕಾರ್ಯಗಳಲ್ಲಿ ಜಯ ಕಟ್ಟಿಟ್ಟ ಬುತ್ತಿ.
ಸಿಂಹ: ವೈದ್ಯರಿಗೆ ವಿಶೇಷ ರೀತಿಯ ಅನುಭವ ಸಿಗಲಿದೆ. ಮೇಲಕಾರಿಗಳೊಂದಿಗೆ ಮೆಚ್ಚುಗೆ ಪಡೆಯಲು ಹೆಚ್ಚಿನ ಪ್ರಯತ್ನ ನಡೆಸಿ.
ಕನ್ಯಾ: ಕೆಲಸ-ಕಾರ್ಯ ಗಳು ಮಂದಗತಿಯಲ್ಲಿ ಸಾಗಲಿವೆ. ಉದ್ಯೋಗಿಗಳು ಅಲ್ಪ ಪ್ರಗತಿ ಕಾಣುವರು.
ತುಲಾ: ಲೇವಾದೇವಿ ವ್ಯವಹಾರಗಳು ನಿರಂತರ ವಾಗಿ ಮುಂದುವರೆಯಲಿವೆ. ಸದುದ್ದೇಶದಿಂದ ಕೆಲವು ಕೆಲಸಗಳನ್ನು ಗೌಪ್ಯವಾಗಿ ನಿರ್ವಹಿಸಿ.
ವೃಶ್ಚಿಕ: ದೂರ ಪ್ರಯಾಣದಿಂದ ಮನಸ್ಸಿಗೆ ನೆಮ್ಮದಿ ಸಿಗಬಹುದು. ಮಕ್ಕಳಿಂದ ಸಂತೋಷ ಸಿಗಲಿದೆ.
ಧನುಸ್ಸು: ಉದ್ಯೋಗ ನಿಮಿತ್ತ ಪ್ರಯಾಣ ಮಾಡು ವಿರಿ. ಆರೋಗ್ಯ ಸಮಸ್ಯೆಗೆ ವೈದ್ಯರನ್ನು ಭೇಟಿ ಮಾಡಿ.
ಮಕರ: ಹೊಸದಾಗಿ ಪರಿಚಯವಾಗುವ ಉದ್ಯಮಿ ಯೊಂದಿಗೆ ವ್ಯವಹಾರ ಆರಂಭಿಸಲು ಯೋಚಿಸುವಿರಿ.
ಕುಂಭ: ಹೊಸ ಕೆಲಸ ಆರಂಭಿಸಲು ಕುಟುಂಬ ದವರೊಂದಿಗೆ ಚರ್ಚಿಸಿ ತೀರ್ಮಾನ ಕೈಗೊಳ್ಳಿ.
ಮೀನ: ದಾಯಾದಿ ಕಲಹವಾಗಬಹುದು. ದೂರ ಪ್ರಯಾಣ ಮಾಡದಿರುವುದು ಒಳಿತು.