Thursday, December 5, 2024
Homeರಾಜಕೀಯ | Politicsರಾಜ್ಯದಲ್ಲಿ ಜೆಡಿಎಸ್‌‍ ಬಲವರ್ಧನೆ ಹೊಣೆ ನಿಖಿಲ್‌ಗೆ : ಕುಮಾರಸ್ವಾಮಿ

ರಾಜ್ಯದಲ್ಲಿ ಜೆಡಿಎಸ್‌‍ ಬಲವರ್ಧನೆ ಹೊಣೆ ನಿಖಿಲ್‌ಗೆ : ಕುಮಾರಸ್ವಾಮಿ

HDK asks JD(S) leaders to resume membership drive

ರಾಮನಗರ, ಡಿ.2- ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಬಲವರ್ಧನೆ ಜವಾಬ್ದಾರಿಯನ್ನು ಜೆಡಿಎಸ್‌‍ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಅವರಿಗೆ ನೀಡಿರುವುದಾಗಿ ಕೇಂದ್ರ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಬಿಡದಿ ಬಳಿಯ ತಮ ತೋಟದ ನಿವಾಸದಲ್ಲಿ ನಿನ್ನೆ ಜೆಡಿಎಸ್‌‍ ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಮಾಜಿ ಸಚಿವರು ಮತ್ತು ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರುಗಳೊಂದಿಗೆ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ನಿಖಿಲ್‌ ನನ್ನ ಮಗನಾಗಿರುವುದರಿಂದ ನಾನು ಮಾತನಾಡುತ್ತಿಲ್ಲ. ಅವರಿಗಿರುವ ಗುಣದ ಬಗ್ಗೆ ಮಾತಾಡುತ್ತೇನೆ. ನಾನು ಅವರನ್ನು ಪಕ್ಷಕ್ಕೆ ಒಪ್ಪಿಸುತ್ತಿದ್ದೇನೆ. ಅವರಿಗೆ ಮಾರ್ಗದರ್ಶನ ಮಾಡುವ ಜವಾಬ್ದಾರಿ ನಿಮ ಮೇಲಿದೆ ಎಂದು ಹೇಳಿದ್ದಾರೆ.

ಪಕ್ಷ ಬಲವರ್ಧನೆ ಮತ್ತು ಸಂಘಟನೆಯ ದೃಷ್ಟಿಯಿಂದ ರಾಜ್ಯಾದ್ಯಂತ ಮತ್ತೆ ಸದಸ್ಯತ್ವ ನೋಂದಣಿ ಪುನಾರಂಭವಾಗಬೇಕು ಎಂದು ಪಕ್ಷದ ಮುಖಂಡರುಗಳಿಗೆ ಸೂಚನೆ ನೀಡಿದ ಅವರು, ಪ್ರತಿ ಬೂತ್‌ಗಳಲ್ಲಿ ಸದಸ್ಯತ್ವ ನೋಂದಣಿ ಚಾಲನೆ ಆಗಬೇಕು. ಕೆಲವು ಜಿಲ್ಲೆಗಳಲ್ಲಿ ಸದಸ್ಯತ್ವ ಚಾಲನೆ ನಿಂತಿದೆ ಅದನ್ನು ಮತ್ತೆ ಆರಂಭಿಸಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆ.

ಚನ್ನಪಟ್ಟಣ ಉಪಚುನಾವಣೆಯಲ್ಲಿ ತ್ಯಾಗಮಯವಾಗಿ ಶ್ರಮಿಸಿದ ಎಲ್ಲಾ ಕಾರ್ಯಕರ್ತರನ್ನು ಶ್ಲಾಘಿಸಿದ ಅವರು, ನೀವು ಪಟ್ಟ ಶ್ರಮದಿಂದ ಕ್ಷೇತ್ರದಲ್ಲಿ ಜೆಡಿಎಸ್‌‍ ಪಕ್ಷಕ್ಕೆ ಮತ್ತಷ್ಟು ಬಲ ಬಂದಿದೆ. ಇದು ಮುಂದಿನ ಸವಾಲುಗಳಿಗೆ ತಯಾರಾಗಲು ಸೂಚನೆಯಾಗಿದೆ. ಉಪಚುನಾವಣೆ ಫಲಿತಾಂಶಗಳು ಪಕ್ಷದ ಭವಿಷ್ಯವನ್ನು ತೀರ್ಮಾನಿಸುವುದಿಲ್ಲ ಎಂದು ಹೇಳಿದ್ದಾರೆ.

2018ರಲ್ಲಿ 2013ರಿಂದ ಅಧಿಕಾರದಲ್ಲಿದ್ದ ಕಾಂಗ್ರೆಸ್‌‍ ಸರ್ಕಾರ 75 ಸ್ಥಾನಗಳಿಗೆ ಕುಸಿಯಿತು. ಸಾಮಾನ್ಯ ಚುನಾವಣೆಯ ಚಿತ್ರವೇ ಬೇರೆ, ಸ್ವತಃ ಅವರ ಪಕ್ಷದ ಶಾಸಕರೇ ಅಭಿವೃದ್ಧಿಗೆ ಹಣವಿಲ್ಲ ಎಂದು ಸ್ಪಷ್ಟವಾಗಿ ಹೇಳುತ್ತಿದ್ದಾರೆ. ಈ ಸರ್ಕಾರವನ್ನು ಕೆಡವಲು ನಾವು ಬಿಜೆಪಿಯೊಂದಿಗೆ ಸಹಕಾರ ಮಾಡಬೇಕಾಗಿದೆ ಎಂದಿದ್ದಾರೆ.

ಸಭೆಯಲ್ಲಿ ಬಂಡೆಪ್ಪ ಖಾಶೆಂಪುರ್, ಹೆಚ್‌.ಕೆ ಕುಮಾರಸ್ವಾಮಿ, ಸಾ. ರಾ ಮಹೇಶ್‌‍, ಸುರೇಶ ಬಾಬು, ಸಿಎಸ್‌‍ ಪುಟ್ಟರಾಜು, ಸಮೃದ್ಧಿ ಮಂಜುನಾಥ, ನಿಖಿಲ್‌ ಕುಮಾರಸ್ವಾಮಿ, ಬಾಲಕೃಷ್ಣ,,ಶಾರದಾ ಪೂರ್ಯ ನಾಯಕ್‌‍, ಲೀಲಾ ದೇವಿ ಪ್ರಸಾದ್‌‍, ಎಂಟಿ ಕೃಷ್ಣಪ್ಪ, ಜಿ.ಟಿ ಹರೀಶ್‌ ಗೌಡ, ಮಂಜೇಗೌಡ, ರಮೇಶ್‌ ಗೌಡ, ತಿಪ್ಪೇಸ್ವಾಮಿ ಮತ್ತು ನಾಗರಾಜಯ್ಯ ಸೇರಿದಂತೆ ಹಲವು ಪ್ರಮುಖ ನಾಯಕರು ಉಪಸ್ಥಿತರಿದ್ದರು.

RELATED ARTICLES

Latest News