Homeರಾಜ್ಯಮಹಿಳೆ ಜೊತೆ ಡಿಜಿಪಿ ಕೆ.ರಾಮಚಂದ್ರ ರಾವ್‌ ಸರಸವಾಡುತ್ತಿರುವ ವಿಡಿಯೋ ವೈರಲ್

ಮಹಿಳೆ ಜೊತೆ ಡಿಜಿಪಿ ಕೆ.ರಾಮಚಂದ್ರ ರಾವ್‌ ಸರಸವಾಡುತ್ತಿರುವ ವಿಡಿಯೋ ವೈರಲ್

Video of DGP K. Ramachandra Rao flirting with a woman goes viral

ಬೆಂಗಳೂರು,ಜ.19- ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಡಿಜಿಪಿ ಕೆ.ರಾಮಚಂದ್ರ ರಾವ್‌ ಅವರ ರಾಸಲೀಲೆ ವಿಡಿಯೋ ವೈರಲ್‌ ಆಗಿದೆ.ಕಚೇರಿಯಲ್ಲಿ ಸಮವಸ್ತ್ರದಲ್ಲಿರುವಾಗಲೇ ರಾಮಚಂದ್ರ ರಾವ್‌ ಅವರು ಮಹಿಳೆಯೊಬ್ಬರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ದೃಶ್ಯದ ತುಣುಕು ಈಗ ಹೊರಬಂದಿದೆ.

ಈ ವಿಡಿಯೋ ಐದಾರು ತಿಂಗಳಿನ ಹಿಂದಿನದು ಎಂದು ತಿಳಿದುಬಂದಿದೆ. ಸರ್ಕಾರ ಇದರ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದನ್ನು ಕಾದು ನೋಡಬೇಕಾಗಿದೆ.

ಈ ಕಾಲದಲ್ಲಿ ಏನು ಬೇಕಾದರೂ ಮಾಡುವ ಸಾಧ್ಯತೆಯಿದೆ. ಇದರ ಬಗ್ಗೆ ವಕೀಲರ ಜೊತೆ ಚರ್ಚಿಸಿ ಮಾತನಾಡುತ್ತೇನೆ ಎಂದು ಡಿಜಿಪಿ ರಾಮಚಂದ್ರರಾವ್‌ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.

ಶಿಸ್ತು ಕ್ರಮಕ್ಕೆ ಸಿಎಂ ಸಿದ್ದರಾಮಯ್ಯ ಸೂಚನೆ
ಡಿಜಿಪಿ ರಾಮಚಂದ್ರ ರಾವ್ ಅವರ ವಿಡಿಯೋ ವೈರಲ್ ವಿಚಾರ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದ್ದು, ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ರಾಮಚಂದ್ರ ರಾವ್ ವಿಡಿಯೋ ವಿಷಯ ಕೇಳಿ ಸಿಟ್ಟಿಗೆದ್ದ ಸಿಎಂ, ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವುದಾಗಿ ತಿಳಿಸಿದ್ದಾರೆ.

ಡಿಜಿಪಿ ರಾಮಚಂದ್ರ ರಾವ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸ್ಪಷ್ಟ ಸೂಚನೆ ನೀಡಿದ್ದಾರೆ. “ಕಾನೂನಿನ ಮುಂದೆ ಯಾರೂ ದೊಡ್ಡವರಲ್ಲ” ಎಂದು ಸಿಎಂ ಸಿದ್ದರಾಮಯ್ಯ ಖಡಕ್‌ ಎಚ್ಚರಿಕೆ ನೀಡಿದ್ದಾರೆ.

ವಿಡಿಯೋ ಪ್ರಕರಣದಲ್ಲಿ ರಾಮಚಂದ್ರ ರಾವ್ ತಪ್ಪು ಮಾಡಿದ್ದಾರೆ ಎಂಬುದು ಸಾಬೀತಾದಲ್ಲಿ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸ್ಪಷ್ಟಪಡಿಸಿದ್ದಾರೆ . “ಕಾನೂನು ಪ್ರಕಾರ ತನಿಖೆ ನಡೆಯಲಿದೆ. ತಪ್ಪಿತಸ್ಥರಿಗೆ ಶಿಕ್ಷೆ ತಪ್ಪದೇ ಆಗಲಿದೆ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಬೆಳವಣಿಗೆಯಿಂದ ರಾಜ್ಯದ ಪೊಲೀಸ್ ಇಲಾಖೆಯಲ್ಲೂ ತೀವ್ರ ಚರ್ಚೆ ನಡೆಯುತ್ತಿದ್ದು, ಸರ್ಕಾರದ ಮುಂದಿನ ಕ್ರಮದತ್ತ ಎಲ್ಲರ ಗಮನ ಕೇಂದ್ರೀಕೃತವಾಗಿದೆ.

RELATED ARTICLES

Latest News