Friday, December 27, 2024
Homeರಾಜ್ಯಲೋಕಾಯುಕ್ತಕ್ಕೆ ತನಿಖಾ ವರದಿ ಸಲ್ಲಿಸಿದ ಇಡಿ, ದುರುದ್ದೇಶ ಕ್ರಮ ಎಂದ ಸಿಎಂ

ಲೋಕಾಯುಕ್ತಕ್ಕೆ ತನಿಖಾ ವರದಿ ಸಲ್ಲಿಸಿದ ಇಡಿ, ದುರುದ್ದೇಶ ಕ್ರಮ ಎಂದ ಸಿಎಂ

CM says ED's investigation report to Lokayukta a malicious act

ಮಂಡ್ಯ(ಕೆ.ಆರ್.ಪೇಟೆ),ಡಿ.4- ಹೈಕೋರ್ಟ್ನಲ್ಲಿ ಮುಡಾ ಪ್ರಕರಣದ ಅರ್ಜಿ ವಿಚಾರಣೆಗೆ ಬರುವ ಹಿಂದಿನ ದಿನ ಇ.ಡಿ.ಯವರು ಲೋಕಾಯುಕ್ತಕ್ಕೆ ಪತ್ರ ಬರೆದಿರುವುದು ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ದುರುದ್ದೇಶದಿಂದ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇ.ಡಿ. ಯವರು ಮುಡಾ ಪ್ರಕರಣದ ತನಿಖೆ ನಡೆಸುತ್ತಿದ್ದಾರೆ. ಅವರು ತನಿಖೆ ನಡೆಸುತ್ತಿರುವುದೇ ಸರಿಯಿಲ್ಲ. ಆಗಲಿ, ತನಿಖೆ ನಡೆಸಿದ ಮೇಲೆ ತನಿಖಾ ವರದಿಯನ್ನು ಲೋಕಾಯುಕ್ತಕ್ಕೆ ನೀಡಬಹುದಿತ್ತು.

ಅದನ್ನು ಬಿಟ್ಟು , ಲೋಕಾಯುಕ್ತಕ್ಕೆ ಪತ್ರ ಬರೆಯುವುದು ಮತ್ತು ಮಾಧ್ಯಮಗಳಿಗೆ ಸೋರಿಕೆ ಮಾಡುವುದರ ಹಿಂದೆ ರಾಜಕೀಯ ದುರುದ್ದೇಶ ಇದೆ ಎಂದರು.ಈ ವಿಚಾರಕ್ಕೆ ಸಂಬಂಧಪಟ್ಟಂತೆ ನಾಳೆ ನಮ ಅರ್ಜಿ ಹೈಕೋರ್ಟ್ನಲ್ಲಿ ವಿಚಾರಣೆಗೆ ಬರುತ್ತಿದೆ. ಇದಕ್ಕೆ ಒಂದು ದಿನ ಮೊದಲು ಮಾಧ್ಯಮಗಳಲ್ಲಿ ಪ್ರಚಾರ ಮಾಡಿರುವುದರ ಹಿಂದೆ ನ್ಯಾಯಾಲಯದ ಮೇಲೆ ಪ್ರಭಾವ ಬೀರುವ ಮತ್ತು ನ್ಯಾಯಾಲಯವನ್ನು ಪೂರ್ವಾಗ್ರಹದ ನಿಲುವಿಗೆ ತರುವ ದುರುದ್ದೇಶದ ರಾಜಕೀಯ ನಡೆಯಾಗಿದೆ ಎಂದು ತಿಳಿಸಿದರು.

ಡಿ.24 ರ ಒಳಗೆ ತನಿಖೆಯ ವರದಿ ನೀಡುವಂತೆ ನ್ಯಾಯಾಲಯ ಲೋಕಾಯುಕ್ತಕ್ಕೆ ಸೂಚನೆ ನೀಡಿದೆ. ಬೇಕಿದ್ದರೆ ಇ.ಡಿ. ಯವರು ಲೋಕಾಯುಕ್ತಕ್ಕೆ ವರದಿ ನೋಡಲು ಅವಕಾಶವಿತ್ತು. ಅದನ್ನು ಬಿಟ್ಟು ಈ ರೀತಿ ಮಾಡಿರುವುದರ ಹಿಂದಿನ ಉದ್ದೇಶ ರಾಜ್ಯದ ಜನರಿಗೆ ಅರ್ಥವಾಗುತ್ತದೆ ಎಂದರು.

ನಾನು ಹೇಳಿದ್ನಾ? :
ಮಂತ್ರಿ ಮಂಡಲ ಪುನಾರಚನೆ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಮಂತ್ರಿಮಂಡಲ ಪುನಾರಚನೆ ಮಾಡ್ತೀವಿ ಅಂತ ನಾನು ಹೇಳಿದ್ನಾ? ನೀವೇ ನಿಮ ಪಾಡಿಗೆ ನೀವು ಕಲ್ಪಿಸಿಕೊಂಡು ಸುದ್ದಿ ಮಾಡಿದ್ರಿ. ಈಗ ನನ್ನ ಬಳಿ ಉತ್ತರ ಕೇಳಿದರೆ ಹೇಗೆ? ಈ ಬಗ್ಗೆ ಹೈ ಕಮಾಂಡ್ ಕೂಡ ಸೂಚನೆ ಕೊಟ್ಟಿಲ್ಲ ಎಂದರು.

ನಾಳೆ ಹಾಸನದಲ್ಲಿ ನಡೆಯುತ್ತಿರುವ ಸಮಾವೇಶದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿ ಕಾಂಗ್ರೆಸ್ ಪಕ್ಷದಿಂದ ಸಮಾವೇಶ ನಡೆಯುತ್ತಿದೆ ಎಂದರು.ಇದೇ ವೇಳೆಯಲ್ಲಿ ಸಹಕಾರ ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ಮತ್ತು ಶಾಸಕರುಗಳು ಉಪಸ್ಥಿತರಿದ್ದರು.

RELATED ARTICLES

Latest News