Monday, November 25, 2024
Homeರಾಷ್ಟ್ರೀಯ | Nationalಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ಸರ್ದಾರ್ ಪಟೇಲ್‌ಗೆ ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ನಮನ

ನವದೆಹಲಿ, ಅ.31- ದೇಶದ ಪ್ರಥಮ ಗೃಹ ಸಚಿವ ಹಾಗೂ ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ 148ನೇ ಜನ್ಮದಿನದ ಹಿನ್ನೆಲೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಸೇರಿ ಅನೇಕ ಗಣ್ಯರು ವಲ್ಲಭಭಾಯಿ ಪಟೇಲ್‍ಗೆ ಗೌರವ ಸೂಚಿಸಿದ್ದಾರೆ.

ನವದೆಹಲಿಯ ಪಟೇಲ್ ಚೌಕ್‍ನಲ್ಲಿರುವ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಪ್ರತಿಮೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉಪ ರಾಷ್ಟ್ರಪತಿ ಜಗದೀಪ್ ಧನ್ಖರ್, ದೆಹಲಿ ಎಲ್ಜಿ ವಿಕೆ ಸಕ್ಸೇನಾ ಮತ್ತು ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಅವರು ಪುಷ್ಪ ನಮನ ಸಲ್ಲಿಸಿದರು.

ಪಟೇಲ್ ಅವರದ್ದು ಅದಮ್ಯ ಮನೋಭಾವ, ದೂರದೃಷ್ಟಿಯ ರಾಜಕಾರಣಿ ಮತ್ತು ಅವರು ನಮ್ಮ ದೇಶದ ಭವಿಷ್ಯವನ್ನು ರೂಪಿಸಿದ ಅಸಾಧಾರಣ ಸಮರ್ಪಣೆಯನ್ನು ನಾವು ನೆನಪಿಸಿಕೊಳ್ಳುತ್ತೇವೆ. ರಾಷ್ಟ್ರೀಯ ಏಕತೆಗೆ ಅವರ ಕೊಡುಗೆ, ಬದ್ಧತೆ ನಮಗೆ ಮಾರ್ಗದರ್ಶನ ನೀಡುತ್ತಲೇ ಬಂದಿದೆ, ಅವರ ಸೇವೆಗೆ ನಾವು ಸದಾ ಋಣಿಯಾಗಿರುತ್ತೇವೆ ಎಂದು ಪ್ರಧಾನಿ ನರೇಂದ್ರ ಮೋದಿ ಪೋಸ್ಟ್ ಮಾಡಿದ್ದಾರೆ.

ಉಕ್ಕಿನ ಮನುಷ್ಯನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿದ ಬಳಿಕ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ಸರ್ದಾರ್ ಪಟೇಲ್ ಜಯಂತಿ ಸಂದರ್ಭದಲ್ಲಿ ದೇಶದ ಜನತೆಗೆ ಏಕತಾ ದಿನದ ಶುಭಾಶಯಗಳನ್ನು ಹೇಳುತ್ತೇನೆ. 2014 ರಿಂದ ಇಡೀ ದೇಶವು ಈ ದಿನವನ್ನು ಏಕತಾ ದಿನವಾಗಿ ಆಚರಿಸುತ್ತದೆ. ಸ್ವಾತಂತ್ರ್ಯದ ನಂತರ ಬ್ರಿಟಿಷರು ಭಾರತ ತೊರೆದರು ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಸಮಯಲ್ಲಿ ಪಟೇಲ್ ಅವರು ಕೆಲವೇ ದಿನಗಳಲ್ಲಿ ರಾಜರ ಆಡಳಿತದಲ್ಲಿದ್ದ 550ಕ್ಕೂ ಹೆಚ್ಚು ರಾಜ್ಯಗಳನ್ನು ಒಗ್ಗೂಡಿಸಿ ಭಾರತದ ಭೂಪಟವನ್ನು ಸಿದ್ಧಪಡಿಸುವ ಕೆಲಸ ಮಾಡಿದ್ದರು ಎಂದು ಹೇಳಿದರು.

ಭಾರತದ ಏಕತೆಗೆ ಪಟೇಲ್ ಕೊಡುಗೆ ಅವಿಸ್ಮರಣೀಯ : ಅಮಿತ್ ಶಾ

ರಾಷ್ಟ್ರೀಯ ಏಕತಾ ದಿನವನ್ನು ಪ್ರತಿವರ್ಷ ಅ.31ರಂದು ಆಚರಿಸಲಾಗುತ್ತದೆ. ದೇಶದ ಉಕ್ಕಿನ ಮನುಷ್ಯ ಎಂದೇ ಜನಪ್ರಿಯರಾದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮದಿನವನ್ನು ಏಕತಾ ದಿನವನ್ನಾಗಿ ಆಚರಿಸುವುದಕ್ಕೆ ಕೇಂದ್ರ ಸರ್ಕಾರ 2014ರಲ್ಲಿ ಜಾರಿಗೆ ತಂದಿತು. ಈ ವರ್ಷ ಅವರ 145ನೇ ಜಯಂತಿ.

ಭಾರತದ ಸ್ವಾತಂತ್ರ್ಯ ಚಳವಳಿ ಮತ್ತು ಭಾರತದ ಏಕೀಕರಣಕ್ಕೆ ಸರ್ದಾರ್ ವಲ್ಲಭಬಾಯಿ ಪಟೇಲರು ಸಾಕಷ್ಟು ಶ್ರಮಿಸಿದ್ದರು. ಸ್ವತಂತ್ರ ಭಾರತದಲ್ಲಿ ಪಟೇಲರು ಈ ದೇಶ ಕಂಡ ಮೊದಲ ಉಪ ಪ್ರಧಾನಿ ಮತ್ತು ಮೊದಲ ಗೃಹ ಸಚಿವ. ದೇಶದ ಐಕ್ಯತೆ ಮತ್ತು ಸಮಗ್ರತೆಗಾಗಿ ಪಟೇಲರು ಕಂಡಿದ್ದ ಕನಸು ಮತ್ತು ಅದಕ್ಕಾಗಿ ಅವರು ಪಟ್ಟ ಶ್ರಮವನ್ನು ಗುರುತಿಸಿ ಕೇಂದ್ರ ಸರ್ಕಾರ ಅವರ ಜನ್ಮದಿನದಂದು ರಾಷ್ಟ್ರೀಯ ಏಕತಾ ದಿವಸ ಎಂದು ಜಾರಿಗೆ ತಂದಿದೆ.

ರಾಷ್ಟ್ರೀಯ ಏಕತೆ ದಿನ ಆಚರಣೆ ಏಕೆ…?
ಭಾರತ ವೈವಿಧ್ಯತೆ ಹೊಂದಿರುವ ದೇಶ, ಇಲ್ಲಿನ ಧರ್ಮ, ಸಂಸ್ಕøತಿ, ಸಂಪ್ರದಾಯ, ಭಾಷೆಗಳು ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನವಾಗಿದೆ. ವಿವಿಧತೆಯಲ್ಲಿ ಏಕತೆ, ಒಗ್ಗಟ್ಟು ಕಾಪಾಡಿಕೊಂಡು ಹೋಗುವುದು ದೇಶದ ಅಭಿವೃದ್ಧಿಗೆ ಮುಖ್ಯವಾಗಿದೆ. ಹೀಗೆ ಸದಾರ್ರ ಪಟೇಲರು ಏಕತೆಗೆ ಯಾವ ರೀತಿ ಕೊಡುಗೆ ನೀಡಿದ್ದರು ಎಂಬ ಬಗ್ಗೆ ಇಂದಿನ ಜನಾಂಗದವರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ದಿನವನ್ನು ಆಚರಿಸುತ್ತಿದೆ.

2018ರಲ್ಲಿ ಪ್ರಧಾನಿ ನರೇಂದ್ರ ಮೋದಿ ಗುಜರಾತ್‍ನ ಕೆವಾಡಿಯಾದಲ್ಲಿ ನರ್ಮದಾ ನದಿ ತೀರದಲ್ಲಿ ಸರ್ದಾರ ಅಣೆಕಟ್ಟಿನ ಎದುರಿಗೆ ಸರ್ದಾರ್ ವಲ್ಲಭಬಾಯಿ ಪಟೇಲರ ವಿಶ್ವದ ಅತಿ ಎತ್ತರದ ಪ್ರತಿಮೆ(597 ಅಡಿ)ಯನ್ನು ಉದ್ಘಾಟಿಸಿದ್ದರು.

ಸದೃಢ ಭಾರತ ನಿರ್ಮಾಣದಲ್ಲಿ ಇಂದಿರಾಗಾಂಧಿ ಪಾತ್ರ ಸ್ಮರಣಿಯ : ಖರ್ಗೆ

ಈ ಪ್ರತಿಮೆಯು 180 ಕಿ.ಮೀ ವೇಗದ ಗಾಳಿ ಹಾಗೂ 6.5 ತೀವ್ರತೆಯ ಭೂಕಂಪವನ್ನು ತಡೆದುಕೊಳ್ಳುವ ಸಾಮಥ್ರ್ಯವನ್ನು ಹೊಂದಿದೆ. 2010ರಲ್ಲಿ ಗುಜರಾತ್ ಮುಖ್ಯಮಂತ್ರಿ ಆಗಿದ್ದ ನರೇಂದ್ರ ಮೋದಿ ಈ ಯೋಜನೆಯ ಘೋಷಣೆ ಮಾಡಿದ್ದರು.

RELATED ARTICLES

Latest News