ಕೊಳ್ಳೆಗಾಲ,ಡಿ.8- ನಾನು ಈಗ ರಾಜಕೀಯ ಕೊನೆಗಾಲದಲ್ಲಿದ್ದೇನೆ. ಜನರು ತೋರಿದ ಪ್ರೀತಿ ಮತ್ತು ಅಭಿಮಾನದಿಂದ ರಾಜಕೀಯದಲ್ಲಿ ಇರಲು ಸಾಧ್ಯವಾಯಿತು. ಜನರ ಪ್ರೀತಿ ಮತ್ತು ಅಭಿಮಾನ ಗಳಿಸದಿದ್ದರೆ ಯಾವ ಕಾರಣಕ್ಕೂ ರಾಜಕೀಯದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಇದೇ ವೇಳೆ ಸತ್ತೇಗಾಲ ಗ್ರಾಮದಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾಗಿರುವ ಶಾಲೆಯಲ್ಲಿ ಸುಸಜ್ಜಿತ ಪ್ರಯೋಗಾಲಯ, ಗ್ರಂಥಾಲಯ ನಿರ್ಮಿಸಿರುವ ಲಕ್ಷ್ಮಮ ಸೋಸಯ್ಯನ ಸಿದ್ದಯ್ಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟಿಸಿದರು.
ಈ ವೇಳೆ ಅಭಿಮಾನಿಯೊಬ್ಬ ನೀವು ಮೂರನೇ ಬಾರಿಗೆ ಮುಖ್ಯಮಂತ್ರಿಯಾಗುತ್ತೀರಾ ಎಂದು ಹೇಳಿದ ಮಾತಿಗೆ, ರಾಜಕೀಯದ ಕೊನೆಗಲಿದ್ದೇನೆ ಮುಂದೆ ಅದರ ಬಗ್ಗೆ ನೋಡೋಣ ಎಂದು ಸಿದ್ದರಾಮಯ್ಯ ಪ್ರತಿಕ್ರಿಯಿಸಿದರು.
ಮೊದಲು ಚಾಮರಾಜನಗರ ಮೈಸೂರು ಜಿಲ್ಲೆಯಲ್ಲಿ ಬಿ ರಾಚಯ್ಯ ರವರು ಬದುಕಿದ್ದಾಗ ಚಾಮರಾಜನಗರ ವನ್ನು ಹೊಸ ಜಿಲ್ಲೆಯಾಗಿ ಘೋಷಣೆ ಮಾಡಲಾಯಿತು. ಜೆಎಚ್ ಪಟೇಲ್ ಅವರು ಸಿಎಂ ಆಗಿದ್ದ ವೇಳೆ ನಾನು ಉಪ ಮುಖ್ಯಮಂತ್ರಿಯಾಗಿದ್ದೆ ಎಂದು ಸರಿಸಿದರು.
ನಾವು ವಿದ್ಯಾರ್ಥಿಗಳಿಗಿದ್ದಾಗ ಬರಿಗಾಲಿನಲ್ಲಿ ಶಾಲೆಗೆ ತೆರಳುತ್ತಿದ್ದೆವು ಹಿಂದೆ ನಾನು ಮುಖ್ಯಮಂತ್ರಿ ಆಗಿದ್ದ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಯು ಸಾಕ್ಷರ ಸಂವತ್ಸರ ಮಾಡಿಕೊಳ್ಳಬೇಕೆಂದು ಕಾರ್ಯಕ್ರಮವನ್ನು ಜಾರಿ ಮಾಡಿದೆ ಈಗ ಹಾಲು ರಾಗಿ ಮಾಲ್‌್ಟ ಮೊಟ್ಟೆ ಚಿಕ್ಕಿ ಬಾಳೆಹಣ್ಣು ಸಮವಸ್ತ್ರ ಪುಸ್ತಕ ಕೊಡುತ್ತಿದ್ದೇವೆ. ಮಕ್ಕಳು ಓದಬೇಕು ವಿದ್ಯೆಯಿಂದ ವಂಚಿತರಾಗಬಾರದು ಎಂದರು.
ಜಾತಿ ವ್ಯವಸ್ಥೆಯ ಪರಿಣಾಮವಾಗಿ ಕೆಲವರಲ್ಲಿ ಈಗಲೂ ಗುಲಾಮಗಿರಿಯ ಮನಸ್ಥಿತಿ ಇದೆ ಅದನ್ನು ಕಿತ್ತೊಗೆಯಲು ಗುಣಮಟ್ಟದ ವೈಜ್ಞಾನಿಕ ವೈಚಾರಿ ಕಥೆಯ ಶಿಕ್ಷಣ ಬೇಕು. ಸಮಾಜದಲ್ಲಿ ಬದಲಾವಣೆ ತರಲು ಮುಖ್ಯವಾಹನಿಗೆ ಬರಲು ಶಿಕ್ಷಣದ ಮಾತ್ರ ಸಾಧ್ಯ ಶಿಕ್ಷಣ ಇಲ್ಲದೆ ಹೋದರೆ ಸ್ವಾಭಿಮಾನಿಗಳಾಗಿ ಇರಲು ಸಾಧ್ಯವಾಗುವುದಿಲ್ಲ ಗುಲಾಮಗಿರಿ ಮನಸ್ಥಿತಿಯನ್ನು ಕಿತ್ತೊಗೆಯಬೇಕು ಇದು ವೈಜ್ಞಾನಿಕ ಶಿಕ್ಷಣದಿಂದ ಸಾಧ್ಯ ಎಂದರು.
ಶಿಕ್ಷಣ ಪ್ರಬಲವಾದ ಅಸ್ತ, ಶಿಕ್ಷಣದಿಂದ ವಂಚಿತರಾದವರು ಸ್ವಾಭಿಮಾನದಿಂದ, ಗೌರವದಿಂದ ಬದುಕುವುದು ಕಷ್ಟ್ಟವಾಗುತ್ತದೆ. ಅದಕ್ಕಾಗಿ ಎಲ್ಲರೂ ವಿದ್ಯಾವಂತ ರಾಗಲೇಬೇಕು ಎಂದು ಸಿಎಂ ಕರೆ ನೀಡಿದರು.
ಮರಿಸ್ವಾಮಿಯವರು ಈ ಊರಿನಲ್ಲಿ ಹುಟ್ಟಿ ಐಪಿಎಸ್ ಅಧಿಕಾರಿಯಾಗಿ, ಪೊಲೀಸ್ ಮಹಾನಿರ್ದೇಶಕರಾಗಿ ಈ ಊರಿಗೆ ಹಾಗೂ ಈ ಶಾಲೆಗೆ ಕೀರ್ತಿಯನ್ನು ತಂದಿದ್ದಾರೆ. ಈ ಊರಿನ ಜನ ಹೆಮೆ ಪಡುವಂತೆ ಸರ್ಕಾರಿ ಅಧಿಕಾರಿಯಾಗಿ ಕೆಲಸ ಮಾಡಿದ್ದಾರೆ. ಅವರು ಸತ್ತೇಗಾಲ ಗ್ರಾಮದ ಗ್ರಾಮಭಿವೃದ್ಧಿ ಸಂಘದ ಅಧ್ಯಕ್ಷರಾಗಿ ಈ ಶಾಲೆಯ ನಿರ್ಮಾಣಕ್ಕೆ ಆಸಕ್ತಿ ತಳೆದು ಇತರರ ಸಹಾಯವನ್ನು ಪಡೆದು ಶಾಲೆಯನ್ನು ನಿರ್ಮಾಣ ಮಾಡಿದ್ದಾರೆ ಎಂದು ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದರು.
ನಾವು ವಿದ್ಯಾರ್ಥಿಗಳಾಗಿದ್ದಾಗ ಬರಿಗಾಲಿನಲ್ಲಿ ಶಾಲೆಗೆ ತರಳುತ್ತಿದ್ದೆವು. ಹಿಂದೆ ನಾನು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಪ್ರತಿ ವಿದ್ಯಾರ್ಥಿಯೂ ಶೂ, ಸಾಕ್‌್ಸ ಹಾಗೂ ಸಮವಸ್ತ ಹಾಕಿಕೊಳ್ಳಬೇಕೆಂದು ಶೂಭಾಗ್ಯ ಕಾರ್ಯಕ್ರಮವನ್ನು ಜಾರಿ ಮಾಡಿದ್ದೆ. ಈಗ ಹಾಲು, ರಾಗಿ ಮಾಲ್‌್ಟ, ಮೊಟ್ಟೆ, ಚಿಕ್ಕಿ, ಬಾಳೆಹಣ್ಣು, ಸಮವಸ್ತ, ಪುಸ್ತಕವನ್ನು ಕೊಡುತ್ತಿದ್ದೇವೆ. ಹಾಗಾಗಿ ಮಕ್ಕಳು ಎಲ್ಲಾ ಸೌಲಭ್ಯ ಪಡೆದು ಚೆನ್ನಾಗಿ ಓದಬೇಕು, ವಿದ್ಯೆಯಿಂದ ವಂಚಿತರಾಗಬಾರದು ಎಂದು ಸಿಎಂ ಸಲಹೆ ನೀಡಿದರು.
ನಮ ಬಜೆಟ್ 3 ಲಕ್ಷದ 71 ಸಾವಿರ ಕೋಟಿ. ಅದರಲ್ಲಿ 1.20 ಲಕ್ಷ ಕೋಟಿ ರೂ.ಗಳನ್ನು ಅಭಿವೃದ್ಧಿಗಾಗಿ ಮೀಸಲಿಡಲಾಗಿದೆ. ಸತ್ತೇಗಾಲದಲ್ಲಿ 14 ಮತಗಟ್ಟೆಗಳಿದ್ದು ಪಟ್ಟಣ ಪಂಚಾಯಿತಿ ಮಾಡಲು ಮನವಿ ಸಲ್ಲಿಸಿದ್ದಾರೆ. ಅದನ್ನು ಈಡೇರಿಸುತ್ತೇನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದರು.
ಧನಗೆರೆ ಜಾಗೀರ್‌ದಾರ್ ಅಣೆಕಟ್ಟೆಗೆ ನೀರು ಒದಗಿಸುವ ಜೊತೆಗೆ ಬೇಸಿಗೆ ಬೆಳೆಗೆ ನೀರು ಕೊಡಬೇಕೆಂದು ಮನವಿ ಮಾಡಿದ್ದಾರೆ. ಈ ಬಗ್ಗೆ ಪರಿಶೀಲಿಸಿ ನೀರಿದ್ದರೆ ಮಾಡಿಕೊಡುತ್ತೇವೆ ಎಂದು ತಿಳಿಸಿದರು.
ಎಂಎಸ್‌ಐಎಲ್ ಅಧ್ಯಕ್ಷ ಪುಟ್ಟರಂಗಶೆಟ್ಟಿ, ಶಾಸಕರಾದ ಕೃಷ್ನಮೂರ್ತಿ, ಗಣೇಶ್ ಪ್ರಸಾದ್, ಮಾಜಿ ಶಾಸಕರಾದ ನರೇಂದ್ರ, ಚಾಮರಾಜನಗರ ಜಿಲ್ಲಾ ಉಸ್ತುವರಿ ಸಚಿವ ಕೆ.ವೆಂಕಟೇಶ್, ಸಚಿವರಾದ ಡಾ:ಹೆಚ್.ಸಿ ಮಹದೇವಪ್ಪ, ಮಧು ಬಂಗಾರಪ್ಪ. ಶಾಸಕ ಎಂ.ಆರ್.ಮಂಜುನಾಥ್, ನಂಜುಂಡಸ್ವಾಮಿ, ಮಾಜಿ ಸಚಿವ ಲಿಂಗಯ್ಯ, ಕಾಡಾ ಅಧ್ಯಕ್ಷ ಮರಿಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.