Thursday, April 16, 2026
Homeರಾಜ್ಯಕಾವೇರಲಿದೆ ಅಧಿವೇಶನ : ಸರ್ಕಾರದ ವಿರುದ್ಧ ಪ್ರಹಾರಕ್ಕೆ ಪ್ರತಿಪಕ್ಷಗಳು ಸಜ್ಜು

ಕಾವೇರಲಿದೆ ಅಧಿವೇಶನ : ಸರ್ಕಾರದ ವಿರುದ್ಧ ಪ್ರಹಾರಕ್ಕೆ ಪ್ರತಿಪಕ್ಷಗಳು ಸಜ್ಜು

Session to be heated: Opposition parties ready to attack government

ಬೆಂಗಳೂರು, ಜ.20- ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆಯ ನಡುವೆಯೇ ರಾಜ್ಯ ವಿಧಾನಮಂಡಲದ ಉಭಯ ಸದನಗಳ ಜಂಟಿ ಅಧಿವೇಶನ ಜ.22ರಿಂದ 7 ದಿನಗಳ ಕಾಲ ವಿಧಾನ ಸೌಧದಲ್ಲಿ ಆರಂಭವಾಗಲಿದೆ. ಈ ವರ್ಷದ ಮೊದಲ ಅಧಿವೇಶನ ಇದಾಗಿದ್ದು, ಆಡಳಿತ ಮತ್ತು ಪ್ರತಿಪಕ್ಷಗಳ ನಡುವಿನ ವಾಕ್ಸಮರಕ್ಕೆ ವೇದಿಕೆಯಾಗಲಿದೆ.

ಅಬ್ಕಾರಿ ಇಲಾಖೆಯಲ್ಲಿ ಕೇಳಬಂದಿರುವ ಲಂಕ್ಕೆ ಬೇಡಿಕೆ ಇಟ್ಟ ಆರೋಪ, ಬಳ್ಳಾರಿ, ಶಿಡ್ಲಘಟ್ಟದಲ್ಲಿ ನಡೆದ ಫ್ಲೆಕ್‌್ಸ ಸಂಘರ್ಷ, ಕೆಂದ್ರ ಸರ್ಕಾರವು ಮಹಾತಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ವಿಬಿ-ಜಿ.ರಾಮ್‌ ಐ ಯೋಜನೆಯಾಗಿ ಬದಲಾಯಿಸಿರುವುದು ಸೇರಿದಂತೆ ಹಲವು ವಿಚಾರಗಳಲ್ಲಿ ಆಡಳಿತಾರೂಢ ಕಾಂಗ್ರೆಸ್‌‍ ಹಾಗೂ ಪ್ರತಿಪಕ್ಷಗಳಾದ ಬಿಜೆಪಿ, ಜೆಡಿಎಸ್‌‍ ನಡುವೆ ಕಾವೇರಿದ ಚರ್ಚೆಗಳಾಗುವ ಸಾಧ್ಯತೆಗಳಿವೆ.

ಜ.22ರಂದು ಬೆಳಿಗ್ಗೆ 11ಗಂಟೆಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರು ವಿಧಾನಸಭೆ ಸಭಾಂಗಣದಲ್ಲಿ ವಿಧಾನಸಭೆ ಹಾಗೂ ವಿಧಾನ ಪರಿಷತ್‌ ಸದಸ್ಯರನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಸೇರಿದಂತೆ ಇದುವರೆಗಿನ ಸಾಧನೆಯ ಬಣ್ಣನೆ ಹಾಗೂ ಸರ್ಕಾರದ ಮುನ್ನೋಟದ ಯೋಜನೆ, ಕಾರ್ಯಕ್ರಮಗಳನ್ನು ರಾಜ್ಯಪಾಲರು ಭಾಷಣದಲ್ಲಿ ಪ್ರಸ್ತಾಪಿಸುವ ನಿರೀಕ್ಷೆ ಇದೆ.

ಅಧಿವೇಶನಕ್ಕೆ ಉಭಯ ಸದನಗಳ ಸಚಿವಾಯಲಗಳು ಸಜ್ಜಾಗುತ್ತಿದ್ದರೆ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಪ್ರತಿಪಕ್ಷಗಳು ಸಜ್ಜಾಗಿವೆ. ಪ್ರತಿಪಕ್ಷಗಳ ವಾಗ್ದಾಳಿ ಎದುರಿಸಲು ಆಡಳಿತಾರೂಢ ಕಾಂಗ್ರೆಸ್‌‍ ಕೂಡ ಸಿದ್ಧತೆ ನಡೆಸಿದೆ.

ಜ.23ರಿಂದ ಜ.31ರವರೆಗೆ ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕಲಾಪಗಳು ಜರುಗಲಿವೆ. ಜ.23ರಂದು ಇತ್ತೀಚೆಗೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ, ಪ್ರಶ್ನೋತ್ತರ ಸೇರಿದಂತೆ ಅಧಿಕೃತ ಕಾರ್ಯಕಲಾಪಗಳು ನಡೆಯಲಿವೆ. ರಾಜ್ಯಪಾಲರ ಭಾಷಣದ ಮೇಲಿನ ವಂದನಾ ನಿರ್ಣಯದ ಪ್ರಸ್ತಾವನೆ, ಚರ್ಚೆ, ಅನುಮೋದನೆಯ ಕಲಾಪಗಳು ಜರುಗಲಿವೆ.

ಪ್ರಮುಖವಾಗಿ ಕಾಂಗ್ರೆಸ್‌‍ ಈಗಾಗಲೇ ತೀವ್ರವಾಗಿ ವಿರೋಧ ಮಾಡುತ್ತಿರುವ ವಿಬಿ-ಜಿ.ರಾಮ್‌ ಜಿ.ಯೋಜನೆಯ ಬಗ್ಗೆ ವಿಶೇಷ ಚರ್ಚೆ ನಡೆಸಲು ತಯಾರಿ ನಡೆಸಿದೆ. ಇದರ ಬಗ್ಗೆ ಆಡಳಿತ- ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆಗಳಾಗುವ ಸಂಭವವಿದೆ. ಸದನದ ಹೊರಗೆ ಈ ಕಾಯ್ದೆಯನ್ನು ಕಾಂಗ್ರೆಸ್‌‍ ವಿರೋಧಿಸುತ್ತಿದ್ದು, ಮಹಾತ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆ ಮರು ಜಾರಿಗೆ ಆಗ್ರಹಿಸಿ ಹೋರಾಟ ನಡೆಸುತ್ತಿದೆ. ಅದೇ ರೀತಿ ಜೆಡಿಎಸ್‌‍ ಮತ್ತು ಬಿಜೆಪಿ ಪಕ್ಷಗಳು ಕಾಯ್ದೆಯನ್ನು ಬಲವಾಗಿ ಸಮರ್ಥಿಸಿಕೊಳ್ಳುತ್ತಿವೆ.

ಈ ಕಾಯ್ದೆಯ ವಿಶೇಷ ಚರ್ಚೆ ಸಂದರ್ಭದಲ್ಲಿ ಉಭಯ ಸದನಗಳಲ್ಲಿ ಆಡಳಿತ ಮತ್ತು ಪ್ರತಿ ಪಕ್ಷಗಳ ಸದಸ್ಯರು ತಮ ಪಕ್ಷದ ನಿಲುವಿಗೆ ಬದ್ಧರಾಗಿ ಮಾತನಾಡುವ ಸಾಧ್ಯತೆಯಿರುವುದರಿಂದ ಆರೋಪ -ಪ್ರತ್ಯಾರೋಪಗಳ ಸುರಿಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ.
ಸಿಎಲ್‌-7 ಲೈಸನ್‌್ಸ ನೀಡಲು ಅಬ್ಕಾರಿ ಇಲಾಖೆಯಲ್ಲಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದ ಆಡಿಯೋ ಬಹಿರಂಗವಾಗಿದ್ದು, ಈ ವಿಚಾರ ಸದನದಲ್ಲಿ ಪ್ರಸ್ತಾಪವಾಗಿ ಕಾಂಗ್ರೆಸ್‌‍-ಬಿಜೆಪಿ ನಡುವೆ ಕಾವೇರಿದ ಚರ್ಚೆಗೆ ಅವಕಾಶ ಕಲ್ಪಿಸುವ ಸಾಧ್ಯತೆಗಳಿವೆ.

ಇತ್ತೀಚೆಗೆ ನಡೆದ ಫ್ಲೆಕ್‌್ಸ ಸಂಘರ್ಷದಲ್ಲಿ ಬಳ್ಳಾರಿಯಲ್ಲಿ ಕಾಂಗ್ರೆಸ್‌‍ ಕಾರ್ಯಕರ್ತರೊಬ್ಬರು ಮೃತಪಟ್ಟಿರುವ ಘಟನೆಯ ವಿಚಾರದ ಬಗ್ಗೆ ಕಾಂಗ್ರೆಸ್‌‍ ಮತ್ತು ಬಿಜೆಪಿ ನಡುವೆ ನಡೆಯುತ್ತಿರುವ ವಾಕ್ಸಮರ, ಹೋರಾಟವು ಅಧಿವೇಶನದಲ್ಲೂ ಪ್ರತಿಧ್ವನಿಸುವ ಸಾಧ್ಯತೆಗಳಿವೆ. ಶಿಢ್ಲಘಟ್ಟ ನಗರಸಭೆ ಪೌರಾಯುಕ್ತೆಗೆ ಕಾಂಗ್ರೆಸ್‌‍ ಮುಖಂಡ ನಿಂದಿಸಿರುವ ವಿಚಾರ ಸೇರಿದಂತೆ ಕಾನೂನು ಮತ್ತು ಸುವ್ಯವಸ್ಥೆಯ ವಿಚಾರ ಗಂಭೀರ ಚರ್ಚೆಗೆ ಎಡೆ ಮಾಡಿಕೊಡಲಿದೆ.

ಗ್ಯಾರಂಟಿ ಯೋಜನೆಗಳು ಸಕಾಲಕ್ಕೆ ಫಲಾನುಭವಿಗಳಿಗೆ ತಲುಪದಿರುವ ವಿಚಾರ, ನೆರೆ ಹಾವಳಿ ಸೇರಿದಂತೆ ಹಲವು ರೀತಿಯ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂಬ ಪ್ರತಿಪಕ್ಷಗಳ ಆರೋಪವೂ ಪ್ರತಿಧ್ವನಿಸಲಿದೆ. ಅಭಿವೃದ್ಧಿ ಕಾರ್ಯಗಳಿಗೆ ಅನುದಾನದ ಕೊರತೆ ಸೇರಿದಂತೆ ರಾಜ್ಯದ ಜ್ವಲಂತ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲುವ ಸಾಧ್ಯತೆಗಳಿವೆ.

ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ವಿಚಾರ ಮುನ್ನೆಲೆಗೆ ಬಂದಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಮತ್ತು ಅವರ ಆಪ್ತರು ಮುಖ್ಯಮಂತ್ರಿ ಸ್ಥಾನಕ್ಕಾಗಿ ಪ್ರಯತ್ನ ಮಾಡುತ್ತಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಆಪ್ತ ಬಣ ಮುಖ್ಯಮಂತ್ರಿ ಸ್ಥಾನ ಉಳಿಸಿಕೊಳ್ಳಲು ಯತ್ನಿಸುತ್ತಿರುವ ವಿಚಾರ, ಇದರಿಂದ ಆಡಳಿತ ಮೇಲೆ ಉಂಟಾಗಿರುವ ಪರಿಣಾಮದ ವಿಚಾರವೂ ಸದನದಲ್ಲಿ ಪ್ರಸ್ತಾಪವಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಒಟ್ಟಾರೆ ಜಂಟಿ ಅಧಿವೇಶನಲ್ಲಿ ನರೇಗಾ ಬದಲಾವಣೆ, ಕಾನೂನು ಮತ್ತು ಸುವವ್ಯವಸ್ಥೆ ವಿಚಾರಗಳೇ ಪ್ರಮುಖವಾಗಿ ಚರ್ಚೆಗೆ ಒಳಗಾಗುವ ಸಾಧ್ಯತೆಗಳಿವೆ.

RELATED ARTICLES

Latest News