Thursday, April 16, 2026
Homeಇದೀಗ ಬಂದ ಸುದ್ದಿಜೈಲಿಂದ ಹೊರ ಬಂದ ನಂತರವೂ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಮತ್ತೆ ಅಂದರ್

ಜೈಲಿಂದ ಹೊರ ಬಂದ ನಂತರವೂ ಡ್ರಗ್ಸ್ ಮಾರುತ್ತಿದ್ದ ವಿದೇಶಿ ಪ್ರಜೆ ಮತ್ತೆ ಅಂದರ್

Foreign national Arrested who was involved in drug trafficking even after being released from jail

ಬೆಂಗಳೂರು,ಜ.20- ಜೈಲಿನಿಂದ ಬಿಡುಗಡೆಯಾದ ನಂತರವೂ ಮಾದಕ ವಸ್ತು ಮಾರಾಟದಲ್ಲಿ ಭಾಗಿಯಾಗಿದ್ದ ವಿದೇಶಿ ಪ್ರಜೆಯನ್ನು ಸಿಸಿಬಿ ಪೊಲೀಸರು ಬಂಧಿಸಿ 5.15 ಕೋಟಿ ಮೌಲ್ಯದ ಎಂಡಿಎಂಎ ಹಾಗೂ 300 ಎಕ್ಸ್ ಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದಾರೆ.

ಸಿಸಿಬಿ ಕೇಂದ್ರ ಅಪರಾಧ ದಳದ ಆಂಟಿ ನಾರ್ಕೋಟಿಕ್‌್ಸ ವಿಂಗ್‌ ತಂಡವು ಕಾರ್ಯಾ ಚರಣೆ
ನಡೆಸಿ ಮಾರತ್ತಹಳ್ಳಿ ಪೊಲೀಸ್‌‍ ಠಾಣೆ ವ್ಯಾಪ್ತಿಯ ಮುನೇ ಕೊಳಲು ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸವಿದ್ದ ವಿದೇಶಿ ಪ್ರಜೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ತನ್ನ ವಾಸದ ಮನೆಯಲ್ಲೇ ಮಾದಕ ವಸ್ತುಗಳನ್ನು ಸಂಗ್ರಹಿಸಿಕೊಂಡು ಮಾರಾಟ ಮಾಡುತ್ತಿದ್ದುದು ಗೊತ್ತಾಗಿದೆ.

ಆತನ ಮನೆಯಲ್ಲಿದ್ದ 2 ಕೆಜಿ 500 ಗ್ರಾಂ ಎಂಡಿಎಂಎ, 300 ಎಕ್‌್ಸಟೆಸಿ ಮಾತ್ರೆಗಳನ್ನು ವಶಪಡಿಸಿಕೊಂಡಿದ್ದು, ಅವುಗಳ ಮೌಲ್ಯ ಸುಮಾರು 5.15 ಕೋಟಿ ರೂ.ಗಳೆಂದು ಅಂದಾಜಿಸಲಾಗಿದೆ.

ಆರೋಪಿಯನ್ನು ಸುದೀರ್ಘ ವಿಚಾರಣೆ ನಡೆಸಿದಾಗ ಈ ಹಿಂದೆ ಹೆಣ್ಣೂರು, ಕಾಡುಗೋಡಿ ಪೊಲೀಸ್‌‍ ಠಾಣೆಗಳಲ್ಲಿ ಮಾದಕ ವಸ್ತು ಮಾರಾಟಕ್ಕೆ ಸಂಬಂಧಿಸಿದಂತೆ ಎರಡು ಅಪರಾಧ ಪ್ರಕರಣಗಳು ದಾಖಲಾಗಿರುವುದು ತಿಳಿದು ಬಂದಿದೆ.

ಈತ ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾದ ಬಳಿಕ ಪುನಃ ತನ್ನ ಅಕ್ರಮ ಚಟುವಟಿಕೆಗಳನ್ನು ಮುಂದುವರೆಸಿದ್ದ. ಹಾಗಾಗಿ ಸಿಸಿಬಿ ಎಎನ್‌ಡಬ್ಲ್ಯೂ ಅಧಿಕಾರಿಗಳು ಈತನ ಚಲನವಲನದ ಮೇಲೆ ನಿಗಾ ವಹಿಸಿದ್ದರು.

ಆ ಸಂದರ್ಭದಲ್ಲಿ ವಿದೇಶಿ ಪ್ರಜೆ ಮತ್ತೆ ಮಾದಕ ವಸ್ತು ಮಾರಾಟದಲ್ಲಿ ತೊಡಗಿದ್ದಾಗ ಖಚಿತ ಮಾಹಿತಿ ಮೇರೆಗೆ ಬಂಧಿಸಿದ್ದಾರೆ. ಮಾದಕ ವಸ್ತುಗಳ ಮೂಲ ಪತ್ತೆ, ಹಿಂದಿನ ಹಾಗೂ ಮುಂದಿನ ಸಂಪರ್ಕಕೊಂಡಿಗಳನ್ನು ಗುರುತಿಸಿರುವುದು, ಈ ಜಾಲದಲ್ಲಿ ಭಾಗಿಯಾಗಿರುವ ಇತರೆ ಆರೋಪಿಗಳ ಪತ್ತೆ ಹಚ್ಚುವ ಕುರಿತು ಹೆಚ್ಚಿನ ತನಿಖೆ ಮುಂದುವರೆದಿದೆ.

ಮಾದಕ ವಸ್ತು ಸಾಗಾಣೆ ಮತ್ತು ಮಾರಾಟದ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಲ್ಲಿ ಹಾಗೂ ನಾಗರಿಕ ಸುರಕ್ಷತೆ ಮತ್ತು ಕಲ್ಯಾಣವನ್ನು ಕಾಪಾಡುವಲ್ಲಿ ನಗರ ಪೊಲೀಸ್‌‍ ಇಲಾಖೆ ತನ್ನ ದೃಢ ಬದ್ಧತೆಯನ್ನು ಪುನರುಚ್ಚರಿಸಿದೆ. ಈ ಪ್ರಕರಣವನ್ನು ಯಶಸ್ವಿಯಾಗಿ ಬಗೆಹರಿಸಿದ ತಂಡದ ಕಾರ್ಯಕ್ಷಮತೆಯನ್ನು ನಗರ ಪೊಲೀಸ್‌‍ ಆಯುಕ್ತರಾದ ಸೀಮಂತ್‌ಕುಮಾರ್‌ ಸಿಂಗ್‌ ಅವರು ಶ್ಲಾಘಿಸಿದ್ದಾರೆ.

RELATED ARTICLES

Latest News