ಬೆಳಗಾವಿ,ಡಿ.9- ಸಿದ್ದರಾಮಯ್ಯರ ನೇತೃತ್ವದ ಕಾಂಗ್ರೆಸ್ ಸರಕಾರಕ್ಕೆ ಉತ್ತರ ಕರ್ನಾಟಕದ ಬಗ್ಗೆ ಕಿಂಚಿತ್ತೂ ಕಾಳಜಿ ಇಲ್ಲ. ಅಭಿವೃದ್ಧಿ ಶೂನ್ಯ ಸರಕಾರ ರಾಜ್ಯದಲ್ಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ತಿಳಿಸಿದ್ದಾರೆ.
ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವಿಪಕ್ಷ ನಾಯಕರ ಜೊತೆ ಈ ಕುರಿತಂತೆ ಚರ್ಚಿಸಿದ್ದೇವೆ. ಒಂದು ಕಡೆ ಸರಕಾರದ ಹಗರಣಗಳು, ಮತ್ತೊಂದು ಕಡೆ ಅಭಿವೃದ್ಧಿಯೇ ಇಲ್ಲದ ಸ್ಥಿತಿ ಇದೆ. ಆಡಳಿತ ಪಕ್ಷದ ಶಾಸಕರೇ ಈ ಶಾಸಕರ ವಿರುದ್ಧ ತಿರುಗಿ ಬಿದ್ದಿದ್ದಾರೆ ಎಂದು ತಿಳಿಸಿದರು.
ಮೇಲಿನ ವಿಚಾರಗಳ ಜೊತೆ ಉತ್ತರ ಕರ್ನಾಟಕದ ಅಭಿವೃದ್ಧಿಯೇ ಇಲ್ಲದ ಕುರಿತು ಇಂದಿನ ಅಧಿವೇಶನದಲ್ಲಿ ಚರ್ಚೆಗೆ ಅವಕಾಶ ಮಾಡಿಕೊಡುತ್ತೇವೆ ಎಂದು ಪ್ರಕಟಿಸಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಚರ್ಚೆಗೂ ಅವಕಾಶ ಇಲ್ಲವಾಗಿದೆ ಎಂದು ಅವರು ಇದೇ ವೇಳೆ ಆಕ್ಷೇಪಿಸಿದರು.