Saturday, May 2, 2026
Homeರಾಜ್ಯರಾಮಚಂದ್ರರಾವ್‌ಗೂ ವಿವಾದಗಳಿಗೂ ಬಿಡಿಸಲಾಗದ ನಂಟು

ರಾಮಚಂದ್ರರಾವ್‌ಗೂ ವಿವಾದಗಳಿಗೂ ಬಿಡಿಸಲಾಗದ ನಂಟು

Ramachandra Rao and controversies are inseparable

ಬೆಂಗಳೂರು,ಜ.20- ಕಚೇರಿಯಲ್ಲೇ ಮಹಿಳೆಯ ಜೊತೆ ಅಶ್ಲೀಲವಾಗಿ ವರ್ತಿಸಿದ ಆರೋಪದ ಮೇಲೆ ಸೇವೆಯಿಂದ ಅಮಾನತುಗೊಂಡಿರುವ ನಾಗರಿಕ ಹಕ್ಕುಗಳ ಜಾರಿ ನಿದೇರ್ಶನಾಲಯದ ಡಿಜಿಪಿ ಡಾ.ಕೆ ರಾಮಚಂದ್ರರಾವ್‌ ಅವರಿಗೂ ವಿವಾದಕ್ಕೂ ಬಿಡಿಸಲಾಗದ ನಂಟಿದೆ.
ಈ ಹಿಂದೆ ಕರ್ತವ್ಯ ನಿರ್ವಹಿಸಿದ ಅನೇಕ ಕಡೆ ಅವರು ಒಂದಿಲ್ಲೊಂದು ವಿವಾದಗಳಿಂದಲೇ ಸುದ್ದಿಯಾಗಿದ್ದರು. ತೀರಾ ಇತ್ತೀಚಿಗೆ ತಮ ಮಲಮಗಳು ಹಾಗೂ ಚಿತ್ರನಟಿ ರಮ್ಯರಾವ್‌ ಅವರ ಚಿನ್ನ ಕಳ್ಳ ಸಾಗಣಿಕೆ ಪ್ರಕರಣದಲ್ಲೂ ಅವರ ಹೆಸರು ತಳಕು ಹಾಕಿಕೊಂಡಿತ್ತು.

ದುಬೈನಿಂದ 14.2 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆ ರಾಮಚಂದ್ರ ರಾವ್‌ ಮಲಮಗಳು ನಟಿ ರನ್ಯಾ ರಾವ್‌ ಅವರನ್ನು ಬಂಧಿಸಿದಾಗ ರಾವ್‌ ಬಗ್ಗೆಯೂ ಆರೋಪಗಳು ಕೇಳಿಬಂದಿದ್ದವು. ಬಳಿಕ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ವಿಚಾರಣೆ ಮುಗಿದ ನಂತರ ಮತ್ತೆ ಅವರು ಕೆಲಸಕ್ಕೆ ಹಾಜರಾದರು. ಮಲಮಗಳ ಚಟುವಟಿಕೆಗಳಿಂದ ದೂರವಿದ್ದು, ಆಕೆ ಜತೆ ಇತ್ತೀಚಿನ ದಿನಗಳಲ್ಲಿ ಯಾವುದೇ ಸಂಪರ್ಕವಿಲ್ಲ ಎಂದು ಹೇಳಿದ್ದರು.

ಮೈಸೂರಿನ ಇಲವಾಲದಲ್ಲಿ 2014ರಲ್ಲಿ ನಡೆದಿದ್ದ ದರೋಡೆ ಪ್ರಕರಣದಲ್ಲಿ ಹಣವನ್ನು ದುರ್ಬಳಕೆ ಮಾಡಿದ್ದ ಆರೋಪ ರಾಮಚಂದ್ರ ರಾವ್‌ ವಿರುದ್ಧ ಕೇಳಿಬಂದಿತ್ತು. ಬಸ್ಸಿನಲ್ಲಿ ಸಾಗಿಸುತ್ತಿದ್ದ 2 ಕೋಟಿ ರೂಪಾಯಿಗೂ ಹೆಚ್ಚಿನ ಹಣ ದರೋಡೆಯಾಗಿತ್ತು. ಆಗ ರಾಮಚಂದ್ರ ರಾವ್‌ ದಕ್ಷಿಣ ವಲಯದ ಐಜಿಪಿ ಆಗಿದ್ದರು. ದರೋಡೆ ಮಾಡಿದ್ದವರಿಂದ ವಶಕ್ಕೆ ಪಡೆಯಲಾಗಿದ್ದ ಹಣ ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇದೇ ಪ್ರಕರಣದಲ್ಲಿ ರಾಮಚಂದ್ರ ರಾವ್‌ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಸಿಐಡಿ ತನಿಖೆಯಲ್ಲಿ ಆರೋಪ ಸಾಬೀತಾಗಿರಲಿಲ್ಲ. ಹೀಗಾಗಿ ಪ್ರಕರಣ ನ್ಯಾಯಾಲಯದಲ್ಲಿ ವಜಾಗೊಂಡಿತ್ತು.

2017 ರ ನವೆಂಬರ್‌ 30 ರಂದು ಭೀಮಾತೀರದ ನಟೋರಿಯಸ್‌‍ ಹಂತಕ ಧರ್ಮರಾಜ ಚಡಚಣ ಸಂಶಯಾಸ್ಪದ ಪೊಲೀಸ್‌‍ ಎನ್‌ಕೌಂಟರ್‌ ಮತ್ತು ಗಂಗಾಧರ ಚಡಚಣ ಸಂಶಯಾಸ್ಪದ ಕೊಲೆ ಪ್ರಕರಣಗಳಲ್ಲಿ ರಾಮಚಂದ್ರ ರಾವ್‌ ಹೆಸರು ಕೇಳಿಬಂದಿತ್ತು. ನಂತರ ಸಿಐಡಿ ತನಿಖೆ ನಡೆದು ರಾಮಚಂದ್ರ ರಾವ್‌ ಪಾತ್ರ ಇಲ್ಲ ಎಂಬುದು ಸಾಬೀತಾಗಿತ್ತು
ಡಾ. ಕೆ ರಾಮಚಂದ್ರ ರಾವ್‌ 1993 ರ ಬ್ಯಾಚ್‌ನ ಐಪಿಎಸ್‌‍ ಅಧಿಕಾರಿ. ಮೂಲತಃ ಆಂಧ್ರ ಪ್ರದೇಶದ ಗುಂಟೂರಿನವರು. ಕರ್ನಾಟಕ ಕೇಡರ್‌ ಅಧಿಕಾರಿ ಆಗಿದ್ದರಿಂದ ವೃತ್ತಿಪರ ಜೀವನದ ಬಹುಪಾಲು ಕರ್ನಾಟಕದ ವಿವಿಧ ಭಾಗಗಳಲ್ಲಿ (ದಾವಣಗೆರೆ, ಮೈಸೂರು, ಹುಬ್ಬಳ್ಳಿ-ಧಾರವಾಡ ಮತ್ತು ಬೆಂಗಳೂರು) ಸೇವೆ ಸಲ್ಲಿಸಿದ್ದಾರೆ.

2023 ರ ಸೆಪ್ಟೆಂಬರ್‌ನಲ್ಲಿ ಡಿಜಿಪಿ ಹುದ್ದೆಗೆ ಬಡ್ತಿ ಪಡೆದಿದ್ದರು. ಇದೀಗ ರಾಸಲೀಲೆ ಪ್ರಕರಣದಲ್ಲಿ ಅಮಾನತಾಗುವ ಸಂದರ್ಭ ಅವರು ಕರ್ನಾಟಕದ ನಾಗರಿಕ ಹಕ್ಕುಗಳ ಜಾರಿ ವಿಭಾಗದ ಪೊಲೀಸ್‌‍ ಮಹಾನಿರ್ದೇಶಕ (ಡಿಜಿಪಿ) ಹುದ್ದೆಯಲ್ಲಿದ್ದರು.

RELATED ARTICLES

Latest News