ಜೈಪುರ, ಡಿ.12 – ಇಲ್ಲಿನ ದೌಸಾದಲ್ಲಿ 160 ಅಡಿ ಆಳದ ಬೋರ್‌ವೆಲ್‌ಗೆ ಬಿದ್ದಿದ್ದ 5 ವರ್ಷದ ಬಾಲಕನನ್ನು ಮೇಲೆತ್ತಿದರು ಆತ ಕೊನೆಯುಸಿರೆಳೆದಿದ್ದಾನೆ.
ಸುಮಾರು 55 ಗಂಟೆಗೂ ಹೆಚ್ಚು ಕಾಲ ನಡೆದ ರಕ್ಷಣಾ ಕಾರ್ಯಾಚರಣೆಯ ನಂತರ ಕಳೆದ ರಾತ್ರಿ ಆರ್ಯನ್ ಎಂಬ ಐದು ವರ್ಷದ ಬಾಲಕನನ್ನು ಬೋರ್‌ವೆಲ್ ಕೊಳವೆಯಿಂದ ಹೊರತೆಗೆಯಲಾಯಿತು ಆದರೆ ಆತ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಕ್ಷಣ ಅಲ್ಲಿದ್ದ ಆಂಬ್ಯುಲೆನ್ಸ್ ನಲ್ಲಿ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ ವೈದ್ಯರು ಆತ ಈಗಾಗಲೆ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಳೆದ ಸೋಮವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಕಾಲಿಖಾಡ್ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಆರ್ಯನ್ ಜಮೀನಿನಲ್ಲಿ ಆಟವಾಡುತ್ತಿದ್ದಾಗ ಆಕಸಿಕವಾಗಿ ತಾಯಿಯ ಎದುರಿನ ಬೋರ್‌ವೆಲ್‌ಗೆ ಬಿದ್ದಿದ್ದಾನೆ.
ನಂತರ ವಿಷಯ ತಿಳಿದು ಗ್ರಾಮಸ್ಥರು ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದರು ಒಂದು ಗಂಟೆಯ ನಂತರ ರಕ್ಷಣಾ ಕಾರ್ಯಾಚರಣೆ ಆರಂಭವಾಯಿತು. ರಕ್ಷಣಾ ತಂಡ ಅಲ್ಲಿಗೆ ತಲುಪಿದ ತಕ್ಷಣ ಪೈಪ್ ಮೂಲಕ ಆಮ್ಲಜನಕ ಪೂರೈಕೆ ಆರಂಭಿಸಿ ಅವರ ಚಲನವಲನವನ್ನು ಸೆರೆಹಿಡಿಯಲು ಕ್ಯಾಮರಾ ಇರಿಸಲಾಗಿತ್ತು.
ಮಗುವನ್ನು ತಲುಪಲು ಸಮಾನಾಂತರ ಹೊಂಡವನ್ನು ಅಗೆಯಲಾಯಿತು. ಕಾರ್ಯಾಚರಣೆಯಲ್ಲಿ ಅಸಂಖ್ಯಾತ ಸವಾಲುಗಳಿವೆ ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಸಿಬ್ಬಂದಿ ಹೇಳಿದರು ಈ ಪ್ರದೇಶದಲ್ಲಿ ನೀರಿನ ಮಟ್ಟ ಸುಮಾರು 160 ಅಡಿಗಳಷ್ಟಿತ್ತು, ಮಗುವಿನ ಯಾವುದೇ ಚಲನವಲನವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯುವುದು ಕಷ್ಟಕರವಾಗಿತ್ತು ಮತ್ತು ಸಿಬ್ಬಂದಿಗೆ ಸುರಕ್ಷತೆಯ ಕಾಳಜಿಯೂ ಇತ್ತು.ಆದರೂ ಚಲಬಿಡದೆ ನಡೆಸಿದ ಹೋರಾಟ ಮಗು ಜೀವ ಉಳಿಸುವಲ್ಲಿ ವಿಫಲವಾಗಿದೆ.