Thursday, December 12, 2024
Homeರಾಜ್ಯಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಬಿಜೆಪಿ ಮುಖಂಡರ ಪ್ರತಿಭಟನೆ

ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಖಂಡಿಸಿ ಬಿಜೆಪಿ ಮುಖಂಡರ ಪ್ರತಿಭಟನೆ

BJP leaders protest against lathi charge on Panchamasali activists

ಬೆಳಗಾವಿ, ಡಿ.12– ಪಂಚಮಸಾಲಿ ಹೋರಾಟಗಾರರ ಮೇಲೆ ಲಾಠಿ ಚಾರ್ಜ್‌ ಮಾಡಿರುವ ಘಟನೆ ಖಂಡಿಸಿ ಬಿಜೆಪಿ ಮುಖಂಡರು ಬೆಳಗಾವಿಯ ವಿಧಾನಸೌಧದ ಬಳಿ ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಪ್ರತಿಪಕ್ಷಗಳ ನಾಯಕರಾದ ಆರ್‌.ಅಶೋಕ್‌, ಛಲವಾದಿ ನಾರಾಯಣಸ್ವಾಮಿ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ, ಮುಖಂಡರಾದ ಅಶ್ವತ್‌್ಥ ನಾರಾಯಣ್‌, ಸಿ.ಸಿ.ಪಾಟೀಲ್‌, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಸುನಿಲ್‌ಕುಮಾರ್‌, ಎಸ್‌‍.ಆರ್‌.ವಿಶ್ವನಾಥ್‌, ಶ್ರೀವತ್ಸ ಸೇರಿದಂತೆ ಅನೇಕ ಮುಖಂಡರು ಪ್ರತಿಭಟನೆ ನಡೆಸಿ ಸರ್ಕಾರದ ವಿರುದ್ಧ ಹರಿಹಾಯ್ದರು.

ಬಸವರಾಜ ಬೊಮಾಯಿ ಮಾತನಾಡಿ, ಸ್ವಾಮೀಜಿ ಅವರ ನೇತೃತ್ವದಲ್ಲಿ ಶಾಂತಿಯುತ ಹೋರಾಟ ನಡೆಯುತ್ತಿತ್ತು. ಈ ಸಂದರ್ಭದಲ್ಲಿ ಲಾಠಿಚಾರ್ಜ್‌ ಮಾಡಲಾಗಿದೆ. ನಾವು ಯಾವುದೇ ರೀತಿಯ ಮುತ್ತಿಗೆ ಪ್ರಯತ್ನ ಮಾಡಿಲ್ಲ. ಮನವಿ ನೀಡಲು ಬರುತ್ತಿದ್ದೆವು. ಆದರೆ, ಲಾಠಿಚಾರ್ಜ್‌ ಮಾಡಿ ಪ್ರತಿಭಟನೆ ಹತ್ತಿಕ್ಕುವ ಯತ್ನ ಮಾಡಿದ್ದಾರೆ. ಪಂಚಮಸಾಲಿಗೆ ಮೀಸಲಾತಿ ನೀಡದಂತೆ ಹಿಂದುಳಿದ ವರ್ಗಗಳ ಒಕ್ಕೂಟ ಸಿಎಂಗೆ ಮನವಿ ನೀಡುತ್ತಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಅದು ಒಕ್ಕೂಟ ಅಲ್ಲ, ಸಿಎಂ ಕೃಪಾಪೋಷಿತ ನಾಟಕ ಮಂಡಳಿ ಎಂದು ಹೇಳಿದರು.

ಆರ್‌.ಅಶೋಕ್‌ ಮಾತನಾಡಿ, ಸಿಎಂ ಸಿದ್ದರಾಮಯ್ಯ ಕುತಂತ್ರದಿಂದ ಪಂಚಮಸಾಲಿ ಸಮುದಾಯದವರ ಮೇಲೆ ಲಾಠಿಚಾರ್ಜ್‌ ಮಾಡಿದ್ದಾರೆ. ಒಂದು ವಾರದ ಹಿಂದೆಯೇ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಲಾಗಿದೆ. ಏಕಾಏಕಿ ಪ್ರತಿಭಟನಾ ನಿರತರ ಮೇಲೆ ದೌರ್ಜನ್ಯವೆಸಗಲಾಗಿದೆ. ಕಾಂಗ್ರೆಸ್‌‍ ಸರ್ಕಾರ ಸಮುದಾಯದವರನ್ನು ಕ್ಷಮೆ ಕೋರಬೇಕು ಮತ್ತು ಲಾಠಿ ಚಾರ್ಜ್‌ ಮಾಡಿದ ಅಧಿಕಾರಿಗಳನ್ನು ಅಮಾನತು ಮಾಡಬೇಕೆಂದು ಆಗ್ರಹಿಸಿದರು.

ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
ಛಲವಾದಿ ನಾರಾಯಣಸ್ವಾಮಿ ಮಾತನಾಡಿ, ಸೌಮ್ಯಯುತವಾಗಿ ನಡೆಯುತ್ತಿದ್ದ ಹೋರಾಟಕ್ಕೆ ಪ್ರಚೋದನೆ ಮಾಡಿದವರು ಯಾರು, ಗಾಯಾಳುಗಳನ್ನು ಕಿಡ್ನಾಪ್‌ ಮಾಡಲಾಗಿದೆ. ಅವರನ್ನು ಎಲ್ಲಿಟ್ಟಿದ್ದೀರ ಹೇಳಿ. ಇಲ್ಲದಿದ್ದರೆ ಹೋರಾಟ ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಹೋರಾಟಗಾರರ ವಿರುದ್ಧ ಹಿಂದುಳಿದ ವರ್ಗದವರನ್ನು ಎತ್ತಿಕಟ್ಟುವ ಕೆಲಸ ಮಾಡಲಾಗುತ್ತಿದೆ ಎಂದು ಆರೋಪಿಸಿದರು. ಈ ಕೂಡಲೇ ಹೋರಾಟಗಾರರ ವಿರುದ್ಧದ ಪ್ರಕರಣಗಳನ್ನು ವಾಪಸ್‌‍ ಪಡೆಯಬೇಕೆಂದು ಒತ್ತಾಯಿಸಿದರು.

RELATED ARTICLES

Latest News