ಬೆಂಗಳೂರು,ಡಿ.13– ಸಾಫ್ಟ್ ವೇರ್ ಎಂಜಿನಿಯರ್ ಅತುಲ್ ಸುಭಾಷ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಆರೋಪಿಗಳ ಬಂಧನದ ಕಾರ್ಯ ಪ್ರಗತಿಯಲ್ಲಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರತ್ತಹಳ್ಳಿ ಪೊಲೀಸ್ ಠಾಣೆಗೆ ಅತುಲ್ ಆತಹತ್ಯೆ ಬಗ್ಗೆ ಅವರ ಸಹೋದರ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಬಂಧಿಸಲು 2 ತಂಡಗಳನ್ನು ರಚಿಸಲಾಗಿದೆ ಎಂದರು.
ಮಾರತ್ತಹಳ್ಳಿ ಠಾಣೆ ಇನ್‌ಸ್ಪೆಕ್ಟರ್ ನೇತೃತ್ವದಲ್ಲಿ ಪ್ರಕರಣದ ತನಿಖೆ ನಡೆಯುತ್ತಿದೆ. ನಾವು ಈ ಪ್ರಕರಣಕ್ಕೆ ಬೇಕಾಗಿರುವ ಪೂರಕ ಸಾಕ್ಷ್ಯಾಧಾರಗಳನ್ನು ಸಂಗ್ರಹಿಸುತ್ತಿದ್ದೇವೆ, ಮೃತರಿಗೆ ನ್ಯಾಯ ಕೊಡಿಸುವುದು ನಮ ಕರ್ತವ್ಯ. ಆ ನಿಟ್ಟಿನಲ್ಲಿ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು.
ಈ ಪ್ರಕರಣದಲ್ಲಿ ಇದುವರೆಗೂ ನಾವು ಯಾರನ್ನೂ ಬಂಧಿಸಿಲ್ಲ. ಆರೋಪಿಗಳ ಬಂಧನಕ್ಕೆ ಬೇರೆ ರಾಜ್ಯದ ಪೊಲೀಸರ ಸಹಕಾರ ಕೇಳಿದ್ದೇವೆ. ಆದಷ್ಟು ಬೇಗ ಅವರುಗಳನ್ನು ಬಂಧಿಸಿ ಅತುಲ್ ಹಾಗೂ ಆತನ ಕುಟುಂಬಕ್ಕೆ ನ್ಯಾಯ ಒದಗಿಸಿ ಕೊಡುವುದಾಗಿ ಆಯುಕ್ತರು ಹೇಳಿದರು.
ಉತ್ತರ ಪ್ರದೇಶಕ್ಕೆ ತಂಡ:
ಅತುಲ್ ಅವರ ಪತ್ನಿ ಹಾಗೂ ಆಕೆಯ ಕುಟುಂಬದವರು ಮೂಲತಃ ಉತ್ತರ ಪ್ರದೇಶದವರು, ಹಾಗಾಗಿ ಅವರುಗಳ ಬಂಧನಕ್ಕೆ ನಮ ಪೊಲೀಸ್ ತಂಡವೊಂದು ಉತ್ತರ ಪ್ರದೇಶಕ್ಕೆ ಹೋಗಿ ಹುಡುಕಾಟ ನಡೆಸಲಾಗುತ್ತಿದೆ.
ಅತುಲ್ ಅವರ ಪತ್ನಿ ನಿಖಿತಾ ಮನೆಗೆ ಪೊಲೀಸರು ಹೋದಾಗ ಮನೆಗೆ ಬೀಗ ಹಾಕಿಕೊಂಡು ತಲೆಮರೆಸಿಕೊಂಡಿರುವುದು ಗೊತ್ತಾಗಿದೆ. ಹಾಗಾಗಿ ಪೊಲೀಸರು ಅಲ್ಲೇ ಬೀಡು ಬಿಟ್ಟು ಸ್ಥಳೀಯ ಪೊಲೀಸರ ನೆರವಿನೊಂದಿಗೆ ಆರೋಪಿಗಳ ಪತ್ತೆ ಹಾಗೂ ಬಂಧನ ಕಾರ್ಯ ಮುಂದುವರೆದಿದ್ದು, ಸ್ಥಳೀಯರಿಂದಲೂ ಹಲವು ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ.
ಈ ನಡುವೆ ಬಂಧನ ಭೀತಿಯಿಂದ ತಪ್ಪಿಸಿಕೊಳ್ಳಲು ಅತುಲ್ ಅವರ ಅತ್ತೆ ಉತ್ತರಪ್ರದೇಶದ ಚೌನಾಪುರದ ತಮ ನಿವಾಸದಿಂದ ರಾತ್ರೋರಾತ್ರಿ ಬೈಕ್‌ನಲ್ಲಿ ಪರಾರಿಯಾಗುವ ವಿಡಿಯೋ ವೈರಲ್ ಆಗಿದ್ದು, ಆ ರಸ್ತೆಯಲ್ಲಿರುವ ಸಿಸಿ ಕ್ಯಾಮರ್‌ಗಳನ್ನು ಪೊಲೀಸರು ಪರಿಶೀಲಿಸುತ್ತಿದ್ದಾರೆ.
ನ್ಯಾಯಕ್ಕಾಗಿ ಪ್ರತಿಭಟನೆ:
ಸಾಫ್‌್ಟವೇರ್ ಎಂಜಿನಿಯರ್ ಅತುಲ್ ಸುಭಾಷ್ ಅವರ ಆತಹತ್ಯೆಗೆ ದೇಶಾದ್ಯಾಂತ ಖಂಡನೆ ವ್ಯಕ್ತವಾಗಿದ್ದು, ನಗರದಲ್ಲಿ ಸೇವ್ ಇಂಡಿಯಾ ಫ್ಯಾಮಿಲಿ ಫೌಂಡೇಶನ್ ನೇತೃತ್ವದಲ್ಲಿ ನ್ಯಾಯಕ್ಕಾಗಿ ಆಗ್ರಹಿಸಿ ನೂರಾರು ಐಟಿ-ಬಿಟಿ ಉದ್ಯೋಗಿಗಳು, ಸರ್ಕಾರೇತರು ಸಂಸ್ಥೆಗಳ ಸದಸ್ಯರು ನಿನ್ನೆ ಪ್ರತಿಭಟನೆ ನಡೆಸಿದರು.