Tuesday, January 14, 2025
Homeರಾಜ್ಯಗದಗದ ಅತ್ತೆ-ಸೊಸೆ ವಿಪಕ್ಷಗಳಿಗೆ ಉತ್ತರ ಕೊಟ್ಟಿದ್ದಾರೆ : ಲಕ್ಷೀ ಹೆಬ್ಬಾಳ್ಕರ್‌

ಗದಗದ ಅತ್ತೆ-ಸೊಸೆ ವಿಪಕ್ಷಗಳಿಗೆ ಉತ್ತರ ಕೊಟ್ಟಿದ್ದಾರೆ : ಲಕ್ಷೀ ಹೆಬ್ಬಾಳ್ಕರ್‌

Gadag's mother-in-law and daughter-in-law have given an answer to the opposition parties: Lakshmi Hebbalkar

ಬೆಳಗಾವಿ,ಡಿ.15- ಗೃಹಲಕ್ಷೀ ಯೋಜನೆ ಹಣ ನೀಡುವ ಮೂಲಕ ಸರ್ಕಾರ ಅತ್ತೆ-ಸೊಸೆ ನಡುವೆ ಜಗಳ ತಂದಿಡುವ ಕೆಲಸ ಮಾಡುತ್ತಿದೆ ಎಂದು ಆರೋಪಿಸುತ್ತಿದ್ದ ವಿಪಕ್ಷಗಳಿಗೆ ಗದಗದ ಅತ್ತೆ-ಸೊಸೆ ಗೃಹಲಕ್ಷೀ ಯೋಜನೆಯ ಹಣವನ್ನು ಕೂಡಿಟ್ಟು ಬೋರ್‌ವೆಲ್‌ ಕೊರೆಸಿ ಉತ್ತರ ನೀಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷೀ ಹೆಬ್ಬಾಳ್ಕರ್‌ ಹೇಳಿದ್ದಾರೆ.

ಇಂದು ಗೃಹ ಕಚೇರಿಯಲ್ಲಿ ಮಾತನಾಡಿದ ಅವರು, ಗದಗದ ಅತ್ತೆ, ಸೊಸೆ ಎಲ್ಲರಿಗೂ ಮಾದರಿ ಆಗಿದ್ದಾರೆ ಎಂದರು.ಗದಗ ಜಿಲ್ಲೆಯ ಗಜೇಂದ್ರಗಡದ ಅತ್ತೆ, ಸೊಸೆ ಕಾರ್ಯ ನೋಡಿ ತುಂಬಾ ಖುಷಿ ಆಯಿತು. ಗೃಹಲಕ್ಷೀ ಯೋಜನೆಯ ಹಣ ಅತ್ತೆಗೊ, ಸೊಸೆಗೊ ಎಂದು ಹೇಳುವ ಮೂಲಕ ವಿರೋಧ ಪಕ್ಷದವರು ಜಗಳ ಹಚ್ಚುವ ಕೆಲಸ ಮಾಡುತ್ತಿದ್ದರು. ಈಗ ಅತ್ತೆ, ಸೊಸೆ ಇಬ್ಬರೂ ಕೂಡಿಟ್ಟ ಹಣದಿಂದ ಬೊರವೆಲ್‌ ಕೊರೆಸಿ, ಮಾದರಿಯಾಗಿದ್ದಾರೆ ಎಂದರು.

ಬೋರ್‌ವೆಲ್‌ನಿಂದ ನೀರು ಹರಿಸಿ, ವ್ಯವಸಾಯ ಮಾಡುತ್ತಿದ್ದಾರೆ. ಗದಗದ ಅತ್ತೆ, ಸೊಸೆ ನಿಜವಾಗಿಯೂ ಆದರ್ಶವಾದಿಗಳು ಆಗಿದ್ದಾರೆ. ಮಹಿಳೆಯರ ಆರ್ಥಿಕ ಸಬಲೀಕರಣ ಮಾಡುವ ಸಲುವಾಗಿ ಎರಡು ಸಾವಿರ ಹಣ ಕೊಡಲಾಗುತ್ತಿದೆ. ಈ ರೀತಿಯ ಹಣವನ್ನು ಕೂಡಿಟ್ಟು ಒಳ್ಳೆಯ ಕೆಲಸ ಮಾಡುತ್ತಿದ್ದಾರೆ ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.

ಐತಿಹಾಸಿಕ ಗಾಂಧಿ ಭಾರತ ಕಾರ್ಯಕ್ರಮ :
ಇದೇ 26, 27 ರಂದು ಬೆಳಗಾವಿಯಲ್ಲಿ ನಡೆಯಲಿರುವ ಎಐಸಿಸಿ ಅಧಿವೇಶನ ಐತಿಹಾಸಿಕ ಕಾರ್ಯಕ್ರಮವಾಗಲಿದೆ. ಆಗ ಮಹಾತಗಾಂಧಿ ಅವರ ಸಾರಥ್ಯದಲ್ಲಿ ನಡೆದ ಏಕೈಕ ಅಧಿವೇಶನ ಬೆಳಗಾವಿಯಲ್ಲಿ ನಡೆದಿತ್ತು. ಆ ಅಧಿವೇಶನ 100 ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಇದೀಗ ಎರಡು ದಿನಗಳ ಕಾಲ ಅದ್ದೂರಿ ಕಾರ್ಯಕ್ರಮ ನಡೆಯಲಿದೆ ಎಂದು ಸಚಿವೆ ಲಕ್ಷೀ ಹೆಬ್ಬಾಳ್ಕರ್‌ ಹೇಳಿದರು.

RELATED ARTICLES

Latest News