Sunday, December 22, 2024
Homeರಾಜ್ಯಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ : ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

ಕೇಂದ್ರ ಸಚಿವ ಕುಮಾರಸ್ವಾಮಿ ಹುಟ್ಟುಹಬ್ಬ : ಪ್ರಧಾನಿ ಸೇರಿದಂತೆ ಗಣ್ಯರಿಂದ ಶುಭಾಶಯ

Kumaraswamy celebrates birthday with visually impaired children, PM Modi extends wishes

ಬೆಂಗಳೂರು, ಡಿ.16- ಪ್ರಧಾನಿ ನರೇಂದ್ರ ಮೋದಿ, ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಕೇಂದ್ರ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ಗಣ್ಯರು ಜೆಡಿಎಸ್‌‍ ರಾಜ್ಯಾಧ್ಯಕ್ಷ ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟಿದ ಹಬ್ಬದ ಶುಭಾಶಯಗಳನ್ನು ಕೋರಿದ್ದಾರೆ.

ದೇವೇಗೌಡರು ಎಕ್ಸ್ ನಲ್ಲಿ ನನ್ನ ಪುತ್ರ ಕುಮಾರಸ್ವಾಮಿ ಅವರಿಗೆ ಜನದಿನದ ಪ್ರೀತಿಪೂರ್ವಕ ಶುಭಾಶಯಗಳು. ಭಗವಂತ ನಿಮಗೆ ಇನ್ನೂ ಹೆಚ್ಚಿನ ಆಯುರಾರೋಗ್ಯ ಕರುಣಿಸಿ ಇನ್ನಷ್ಟು ದೀರ್ಘ ಕಾಲ ಜನಸೇವೆ ಮಾಡುವ ಶಕ್ತಿ, ಚೈತನ್ಯ ನೀಡಲಿ ಎಂದು ಹಾರೈಸುತ್ತೇನೆ ಎಂದು ಪೋಸ್ಟ್‌ ಮಾಡಿದ್ದಾರೆ.

ಕೇಂದ್ರ ಸಚಿವರಾದ ಹೆಚ್‌.ಡಿ.ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕುಮಾರಸ್ವಾಮಿ ಅವರು ಬಹಳ ಅನುಭವ ಇರುವ ಸಾರ್ವಜನಿಕ ವ್ಯಕಿ ಮತ್ತು ಯಾವಾಗಲೂ ಸಕ್ರಿಯವಾಗಿದ್ದು ಸಮಾಜಕ್ಕೆ ಸೇವೆ ಸಲ್ಲಿಸುತ್ತಿದ್ದಾರೆ. ಸ್ವಾವಲಂಬಿಯಾಗಲು ಪ್ರಮುಖವಾದ ಉಕ್ಕು ಮತ್ತು ಭಾರೀ ಕೈಗಾರಿಕೆಗಳ ಕ್ಷೇತ್ರಗಳನ್ನು ಅಭಿವೃದ್ಧಿಪಡಿಸುವಲ್ಲಿ ಅವರು ಪ್ರಮುಖ ಕೊಡುಗೆಗಳನ್ನು ನೀಡುತ್ತಿದ್ದಾರೆ. ಆರೋಗ್ಯಕರ ಜೀವನವನ್ನು ನಡೆಸಲಿ ಎಂದು ಹಾರೈಸಿದ್ದಾರೆ.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು, ಸಂಪುಟದ ಸಹೋದ್ಯೋಗಿ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಕುಮಾರಸ್ವಾಮಿ ಜನರ ಸೇವೆಗಾಗಿ ನಿಮ ಸಮರ್ಪಣೆ ಮತ್ತು ನಮ ಸಾಂಪ್ರದಾಯಿಕ ಮೌಲ್ಯಗಳ ಬದ್ಧತೆಯು ಅಭಿವೃದ್ಧಿ ಮತ್ತು ಪರಂಪರೆಯನ್ನು ಒಟ್ಟಿಗೆ ಮುನ್ನಡೆಸುವ ಮೋದಿ ಜಿಯವರ ದೃಷ್ಟಿಯನ್ನು ಎತ್ತಿ ಹಿಡಿಯುವಲ್ಲಿ ಪ್ರಮುಖವಾಗಿದೆ. ನಿಮ ಆರೋಗ್ಯ ಮತ್ತು ದೀರ್ಘಾಯುಷ್ಯವಂತರಾಗಿ ಎಂದು ಹಾರೈಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮಾಯಿ ಅವರು, ಕುಮಾರಸ್ವಾಮಿ ಅವರಿಗೆ ಹುಟ್ಟು ಹಬ್ಬದ ಹಾರ್ದಿಕ ಶುಭಾಶಯಗಳನ್ನು ಕೋರಿದ್ದಾರೆ. ಭಗವಂತನ ಕೃಪಾಶೀರ್ವಾದ ತಮ ಮೇಲೆ ಸದಾ ಇರಲಿ ಹಾಗೂ ಸಾರ್ವಜನಿಕ ಜೀವನದಲ್ಲಿ ಇನ್ನಷ್ಟು ಸೇವೆ ಸಲ್ಲಿಸಲು ಹೆಚ್ಚಿನ ಆಯುರಾರೋಗ್ಯ ದೊರಕಲಿ ಎಂದು ಹಾರೈಸಿದ್ದಾರೆ.ಹೀಗೆ ಸಚಿವರು, ಮಾಜಿ ಸಚಿವರು, ಸಂಸದರು, ಮಾಜಿ ಸಂಸದರು, ಶಾಸಕರು, ಜೆಡಿಎಸ್‌‍ ಮುಖಂಡರು, ಕಾರ್ಯಕರ್ತರು ಕುಮಾರಸ್ವಾಮಿ ಅವರಿಗೆ ಜನ ದಿನದ ಶುಭಾಶಯಗಳನ್ನು ಕೋರಿದ್ದಾರೆ.

RELATED ARTICLES

Latest News