Wednesday, December 25, 2024
Homeರಾಜ್ಯಸಿಬಿಎಸ್ಇ ಗಣಿತ, ವಿಜ್ಞಾನ ವಿಷಯ ಪಠ್ಯಕ್ರಮ ಯಥಾವತ್

ಸಿಬಿಎಸ್ಇ ಗಣಿತ, ವಿಜ್ಞಾನ ವಿಷಯ ಪಠ್ಯಕ್ರಮ ಯಥಾವತ್

CBSE Maths, Science Subject Syllabus as it is

ಬೆಳಗಾವಿ,ಡಿ.16-ಪ್ರಸ್ತುತ ರಾಜ್ಯ ಪಠ್ಯಕ್ರಮದ 6 ರಿಂದ 10ನೇ ತರಗತಿಗಳಿಗೆ ಗಣಿತ ಮತ್ತು ವಿಜ್ಞಾನ ವಿಷಯಗಳಲ್ಲಿ ಸಿಬಿಎಸ್ಇ ಪಠ್ಯಕ್ರಮವನ್ನು ಯಥಾವತ್ತಾಗಿ ಅಳವಡಿಸಿಕೊಳ್ಳಲಾಗಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಪರಿಷತ್ ಸದಸ್ಯ ಎಂ.ಎಲ್.ಅನಿಲಕುಮಾರ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಆರ್ಟಿಇ ಕಾಯ್ದೆಯ ಅನುಷ್ಠಾನದಿಂದ 1 ರಿಂದ 8ನೇ ತರಗತಿಯವರೆಗೆ ಪ್ರವೇಶ ಶುಲ್ಕವನ್ನು ಸರ್ಕಾರವೇ ನೀಡುತ್ತಿದ್ದು, 8ನೇ ತರಗತಿಯಿಂದ ದ್ವಿತೀಯ ಪಿ.ಯು.ಸಿ ವರೆಗೂ ಯೋಜನೆಯನ್ನು ವಿಸ್ತರಿಸು ವುದರಿಂದ ಗ್ರಾಮೀಣ ಮತ್ತು ನಗರ ಪ್ರದೇಶದಲ್ಲಿರುವ ಬಡ ಮಕ್ಕಳಿಗೆ ಅನುಕೂಲ ವಾಗಲಿದೆ ಎಂದರು.

ಸರ್ಕಾರವು ಈ ಯೋಜನೆಯನ್ನು ವಿಸ್ತರಿಸುವ ಬಗ್ಗೆ ಚಿಂತಿಸಿದೆಯೇ; ಇಲ್ಲದಿದ್ದಲ್ಲಿ ಯಾವ ಕಾಲಮಿತಿ ಯೊಳಗೆ ಯೋಜನೆಯನ್ನು ವಿಸ್ತರಿಸ ಲಾಗುವುದು ಎನ್ನುವ ಅನಿಲ್ ಕುಮಾರ ಅವರ ಪ್ರಶ್ನೆಗೆ ಉತ್ತರಿಸಿರುವ ಸಚಿವರು, ಈ ಯೋಜನೆಯನ್ನು ವಿಸ್ತರಿಸುವ ಪ್ರಸ್ತಾವನೆಯು ಇರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

RELATED ARTICLES

Latest News