ಬೆಂಗಳೂರು,ಡಿ.17- ನಗರ ಪೊಲೀಸರು ವಿಶೇಷ ಕಾರ್ಯಾಚರಣೆ ಕೈಗೊಂಡು ಒಟ್ಟು 11ಮಂದಿಯನ್ನು ಬಂಧಿಸಿ 1.21 ಕೋಟಿ ಬೆಲೆಬಾಳುವ 190ಕೆ.ಜಿ. ಗಾಂಜಾವನ್ನು ವಶಪಡಿಸಿಕೊಂಡಿದ್ದಾರೆ.
ಯಲಹಂಕ :
ಆಂಧ್ರಪ್ರದೇಶದಿಂದ ಕಡಿಮ ಬೆಲೆಗೆ ಮಾದಕ ವಸ್ತು ಗಾಂಜಾವನ್ನು ಖರೀದಿಸಿಕೊಂಡು ಬಂದು ನಗರದಲ್ಲಿ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಯಲಹಂಕ ಠಾಣೆ ಪೊಲೀಸರು ಬಂಧಿಸಿ 74.53 ಲಕ್ಷರೂ. ಮೌಲ್ಯದ 93ಕೆ.ಜಿ.ಗಾಂಜಾ, ಟ್ರಕ್, ಕಾರು ಮತ್ತು ನಾಲ್ಕು ಮೊಬೈಲ್ಗಳನ್ನು ವಶಪಡಿಸಿಕೊಂಡಿದ್ದಾರೆ.
ನಿಟ್ಟೇ ಮೀಣಾಕ್ಷಿ ಕಾಲೇಜು ಕಡೆಗೆ ಹೋಗುವ ರಸ್ತೆಯ ಪಕ್ಕದಲ್ಲಿ ಟ್ರಕ್ನ್ನು ನಿಲ್ಲಿಸಿಕೊಂಡು ಗಾಂಜಾ ಮಾರಾಟ ಮಾಡಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಇನ್ಸ್ಪೆಕ್ಟರ್ ಕೃಷ್ಣಮೂರ್ತಿ ಮತ್ತು ಸಿಬ್ಬಂದಿ ತಂಡ ಸ್ಥಳದ ಮೇಲೆ ದಾಳಿ ಮಾಡಿ ನಾಲ್ವರನ್ನು ಬಂಧಿಸಿ ಮಾಲನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.
ಅಶೋಕ್ ನಗರ:
ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ನಾಲ್ವರನ್ನು ಅಶೋಕನಗರ ಠಾಣೆ ಪೊಲೀಸರು ಬಂಧಿಸಿ 30.68 ಲಕ್ಷರೂ. ಮೌಲ್ಯದ 76 ಕೆ.ಜಿ 700 ಗ್ರಾಂ ಗಾಂಜಾ, 1 ಬೊಲೇರೋ ಪಿಕ್ಅಫ್ ವಾಹನ, 3 ಮೊಬೈಲ್ ಫೋನ್ ವಶಪಡಿಸಿಕೊಂಡಿದ್ದಾರೆ. ಬನ್ನೇರುಘಟ್ಟದಿಂದ ಹೊಸೂರು ಕಡೆಗೆ ಹೋಗುವ ರಸ್ತೆಯಲ್ಲಿರುವ ಕ್ರಿಶ್ಚಿಯನ್ ಸಶಾನದ ಮುಂಭಾಗವಿರುವ ಸಾರ್ವಜನಿಕ ರಸ್ತೆಯಲ್ಲಿ ಮೂವರು ಅಪರಿಚಿತ ವ್ಯಕ್ತಿಗಳು ಬೊಲೇರೋ ಪಿಕ್ಅಪ್ ವಾಹನಲ್ಲಿ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿರುವ ಮಾಹಿತಿಲಭಿಸಿದೆ. ಈ ಮಾಹಿತಿಯನ್ನು ಆಧರಿಸಿ, ಎನ್.ಡಿ.ಪಿ.ಎಸ್ ಕಾಯ್ದೆಯಡಿ ಪ್ರಕರಣವನ್ನು ದಾಖಲಿಸಿ, ಮೂವರನ್ನು ಮಾಲು ಸಮೇತ ಬಂಧಿಸುವಲ್ಲಿ ಇನ್ಸ್ಪೆಕ್ಟ್ರ್ ರವಿ ಮತ್ತು ಸಿಬ್ಬಂದಿ ತಂಡ ಯಶಸ್ವಿಯಾಗಿದೆ.
ಬಾಣಸವಾಡಿ:
ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಖರೀದಿಸಲು ಯತ್ನಿಸಿದ ಮೂವರನ್ನು ಬಾಣಸವಾಡಿ ಠಾಣೆ ಪೊಲೀಸರು ಬಂಧಿಸಿ 15 ಲಕ್ಷ ಮೌಲ್ಯದ 15 ಕೆ.ಜಿ 120 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ. ಕನಕದಾಸ ಲೇಔಟ್ ಕೆ.ಹೆಚ್.ಬಿ ಕ್ವಾಟ್ರಸ್, ಆರ್.ಎಸ್ ಪಾಳ್ಯದ ಮನೆಯೊಂದರಲ್ಲಿ ಇಬ್ಬರು ವ್ಯಕ್ತಿಗಳು ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುವ ಸಲುವಾಗಿ ಇಟ್ಟುಕೊಂಡಿದ್ದು, ಅದನ್ನು ಖರೀದಿಸಲು ವ್ಯಕ್ತಿ ಯೊಬ್ಬ ಹೋಗುತ್ತಿರುವ ಮಾಹಿತಿ ಆಧರಿಸಿ ಪೊಲೀಸರು ಸ್ಥಳಕ್ಕೆ ಧಾವಿಸಿ, ಮೂವರನ್ನು ಮಾಲು ಸಮೇತ ವಶಕ್ಕೆ ಪಡೆದಿದ್ದಾರೆ. ಆಂದ್ರ ಪ್ರದೇಶದ ರಾಜಾಮಂಡ್ರಿಯಿಂದ ಕಡಿಮೆ ಬೆಲೆಗೆ ಗಾಂಜಾವನ್ನು ಖರೀದಿ ಮಾಡಿಕೊಂಡು ಬಂದು, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದಾಗಿ ವಿಚಾರಣ ವೇಳೆ ತಿಳಿಸಿ ದ್ದಾರೆ.ಇನ್ಸ್ ಪೆಕ್ಟರ್ ಅರುಣ್ ಸಾಳುಂಕೆ ಮತ್ತು ಸಿಬ್ಬಂದಿ ತಂಡ ಈ ಕಾರ್ಯಾಚರಣೆ ಕೈಗೊಂಡಿತ್ತು.
ಅಮೃತಹಳ್ಳಿ :
ಚಿರಂಜೀವಿ ಲೇಔಟ್ನ ವಿಕ್ಟೋರಿಯ ಚರ್ಚ್ ಬಳಿ ಇರುವ ಖಾಲಿ ಜಾಗದಲ್ಲಿ ನಿಷೇದಿತ ಮಾದಕ ವಸ್ತು ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಬಂಧಿಸಿ 1.5 ಲಕ್ಷ ಮೌಲ್ಯದ 5 ಕೆ.ಜಿ 170 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.
ಬಿಹಾರ ಮತ್ತು ಒಡಿಸ್ಸಾ ರಾಜ್ಯದಿಂದ ಕಡಿಮೆ ಬೆಲೆಗೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಖರೀದಿಮಾಡಿಕೊಂಡು ಬಂದು, ಹೆಚ್ಚಿನ ಬೆಲೆಗೆ ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದುದ್ದು ವಿಚಾರಣೆ ವೇಳೆ ತಿಳಿದು ಬಂದಿದೆ. ಅಮೃತಹಳ್ಳಿ ಪೊಲೀಸ್ ಠಾಣೆಯ ಇನ್ಸಪೆಕ್ಟರ್ ಅಂಬರೀಶ್ಮತ್ತು ಸಿಬ್ಬಂದಿಗಳ ತಂಡ ಪ್ರಕರಣವನ್ನು ಬೇಧಿಸುವಲ್ಲಿ ಯಶಸ್ವಿಯಾಗಿರುತ್ತಾರೆ.