ಧಾರವಾಡ: ಟಿಟಿ ವಾಹನ ಮತ್ತು ಕ್ಯಾಂಟರ್ ಲಾರಿ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿ ಹೊಡೆದು ಮೂವರು ಸಾವಿಗೀಡಾಗಿರುವ ಅವಘಡ ಅಳ್ನಾವರ ತಾಲ್ಲೂಕಿನ ಅಡಬಗಟ್ಟಿ ಸಮೀಪ ಇಂದು ಮುಂಜಾನೆ ಸಂಭವಿಸಿದೆ.
ಲಾರಿಯಲ್ಲಿದ್ದ ಸವದತ್ತಿ ತಾಲ್ಲೂಕಿನ ಶಿರಸಂಗಿಯ ಹನುಮಂತ ಮಲ್ಲಾಡ್ (36), ಮಹಾಂತೇಶ ಚವಾಣ (37) ಹಾಗೂ ಮಹಾದೇವಪ್ಪ ಹುಲ್ಲಳ್ಳಿ (39) ಮೃತ ದುರ್ದೃವಿಗಳು.ಮುಂಜಾನೆ 3 ಗಂಟೆ ಸಮಯದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೋಲೀಸರು ತಿಳಿಸಿದ್ದಾರೆ.ಶಿರಸಂಗಿಯಿಂದ ಗೋವಾ ಕಡೆಗೆ ಕ್ಯಾಂಟರ್ ಸಾಗುತ್ತಿದ್ದ, ಗೋವಾದಿಂದ ಟಿಟಿ ಚಿತ್ರದುರ್ಗಕ್ಕೆ ಸಂಚರಿಸುತ್ತಿತ್ತು .
ರಸ್ತೆ ತಿರುವಿನಲ್ಲಿ ಮೊದಲು ಕ್ಯಾಂಟರ್ ವಾಹನ ಪಲ್ಟಿಯಾಗಿ ನಂತರ ಟಿಟಿ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಇದರಿಂದ ಕ್ಯಾಂಟರ್‌ನಲ್ಲಿದ್ದ ಮೂವರು ಸಾವನ್ನಪ್ಪಿ , ಚಾಲಕ ಗಾಯಗೊಂಡಿದ್ದಾನೆ.
ಅಪಘಾರ ಎಭಸಕ್ಕೆ ಎರಡೂ ವಾಹನಗಳು ನಜ್ಜುಗುಜ್ಜಾಗಿದೆ ,ಘಟನೆಯಲ್ಲಿ ಟಿಟಿ ವಾಹನದಲ್ಲಿದ್ದ 6 ಮಂದಿ ಗಾಯಗೊಂಡಿದ್ದು ಅವರನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಅಳ್ಳಾವರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ಶಿವಮೊಗ್ಗ ನಗರದ ಸರ್ಕ್‌ಯೂಟ್ ಹೌಸ್ ಸರ್ಕಲ್‌ನಲಿ ತಡರಾತ್ರಿ ಬಸ್ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತ ಇಬ್ಬರು ಯುವಕರ ಮೃತಪಟ್ಟಿದ್ದಾರೆ. ಬೈಕ್‌ನಲ್ಲಿದ್ದ ಒಬ್ಬ ಯುವಕ ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬನನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಸಾವಿಗೀಡಾಗಿದ್ದಾರೆ. ಪೂರ್ವ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.