Friday, January 23, 2026
Homeರಾಜ್ಯಗಣರಾಜ್ಯೋತ್ಸವ ಪರೇಡ್‌ನಲ್ಲಿ ಕಣ್ಮನ ಸೆಳೆಯಲಿದೆ ಕರುನಾಡಿನ "ಮಿಲೆಟ್‌ ಟು ಮೈಕ್ರೊಚಿಪ್‌" ಸ್ತಬ್ಧಚಿತ್ರ

ಗಣರಾಜ್ಯೋತ್ಸವ ಪರೇಡ್‌ನಲ್ಲಿ ಕಣ್ಮನ ಸೆಳೆಯಲಿದೆ ಕರುನಾಡಿನ “ಮಿಲೆಟ್‌ ಟು ಮೈಕ್ರೊಚಿಪ್‌” ಸ್ತಬ್ಧಚಿತ್ರ

Karnataka's "Millet to Microchip" Tableau at the Republic Day parade

ನವದೆಹಲಿ/ಬೆಂಗಳೂರು, ಜ.23- ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದ ಅಂಗವಾಗಿ ಕೆಂಪು ಕೋಟೆಯಲ್ಲಿ ಆಯೋಜಿಸುವ ಭಾರತ ಪರ್ವದಲ್ಲಿ ಕರ್ನಾಟಕವು ಈ ಪಯಣವನ್ನು ಸಂಕೇತಿಸುವಂತೆ ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ (ಮಿಲ್ಲೆಟ್‌ ಟು ಮೈಕ್ರೋಚಿಪ್‌) ಎನ್ನುವ ಸ್ತಬ್ಧಚಿತ್ರವನ್ನು ಪ್ರದರ್ಶಿಸುತ್ತಿದೆ.

ಭಾರತವನ್ನು ಆತನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಾದ್ಯಂತ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ನಮ ರಾಜ್ಯ ಮುಂಚೂಣಿಯಲ್ಲಿದೆ. ರಾಜ್ಯದ ಪರವಾಗಿ ಜ.26 ರಂದು ಗಣರಾಜ್ಯೋತ್ಸವದ ಪಥಸಂಚಲನ ಮತ್ತು ಭಾರತ ಪರ್ವದಲ್ಲಿ ಪಾಲ್ಗೊಳ್ಳುವ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ತನ್ನ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ ದೇಶದ ಗಮನ ಸೆಳೆಯುತ್ತಿದೆ. ವರ್ಷದಿಂದ ವರ್ಷಕ್ಕೆ ಹೊಸ ಮೈಲಿಗಲ್ಲುಗಳನ್ನು ಸ್ಥಾಪಿಸುತ್ತಲೇ ಸಾಗಿದೆ.

ಈ ಬಾರಿ ಕೃಷಿ, ಶಿಕ್ಷಣ, ವಿಜ್ಞಾನ, ಉನ್ನತ ತಂತ್ರಜ್ಞಾನ ಹಾಗೂ ಮೈಕ್ರೋಚಿಪ್‌ಗಳ ಉತ್ಪಾದನೆಯಲ್ಲಿ ಸಾಧಿಸಿರುವ ಸಮತೋಲನಯುತ ಪ್ರಗತಿಯನ್ನು ಸ್ತಬ್ಧಚಿತ್ರದಲ್ಲಿ ತೋರಿಸಲಾಗಿದೆ ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್‌ ಎಂ ನಿಂಬಾಳ್ಕರ್‌ ಅವರು ತಿಳಿಸಿದ್ದಾರೆ.

ಸಿರಿಧಾನ್ಯಗಳ ಉತ್ಪಾದನೆ ಮತ್ತು ಪೌಷ್ಟಿಕ ಆಹಾರದ ಬಳಕೆಯನ್ನು ಉತ್ತೇಜಿಸುವಲ್ಲಿ ಕರ್ನಾಟಕವು ದೇಶದ ಪ್ರಮುಖ ರಾಜ್ಯಗಳಲ್ಲಿ ಒಂದಾಗಿದೆ. ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಬೆಂಗಳೂರು ಜಾಗತಿಕವಾಗಿ ಗಮನ ಸೆಳೆದಿದೆ.
ಮೈಕ್ರೋಚಿಪ್‌, ಎಲೆಕ್ಟ್ರಾನಿಕ್‌್ಸ ಹಾಗೂ ಸೆಮಿಕಂಡಕ್ಟರ್‌ ವಲಯಗಳಲ್ಲಿನ ಆವಿಷ್ಕಾರಗಳು ಕರ್ನಾಟಕವನ್ನು ಶ್ರೇಷ್ಠ ತಂತ್ರಜ್ಞಾನ ಕೇಂದ್ರವಾಗಿಸಿದೆ. ಇವೆಲ್ಲವೂ ಈ ಬಾರಿ ಸ್ತಬ್ಧಚಿತ್ರದಲ್ಲಿ ಮೇಳೈಸಿವೆ.

ಸಂಶೋಧನೆ, ನವೀನತೆ ಮತ್ತು ಕೌಶಲ್ಯಾಭಿವೃದ್ಧಿಗೆ ನೀಡಲಾಗಿರುವ ವಿಶೇಷ ಆದ್ಯತೆಯ ಮೂಲಕ ಯುವಶಕ್ತಿಗೆ ಉದ್ಯಮಶೀಲ ಅವಕಾಶಗಳನ್ನು ಒದಗಿಸಿ, ಭವಿಷ್ಯದ ಆರ್ಥಿಕತೆಗೆ ಭದ್ರ ಬುನಾದಿಯನ್ನು ಕರ್ನಾಟಕ ನಿರ್ಮಿಸುತ್ತಿದೆ. ಹೂಡಿಕೆ ಸ್ನೇಹಿ ನೀತಿಗಳ ಮೂಲಕ ಉತ್ಪಾದನಾ ವಲಯದಲ್ಲಿ ಗರಿಷ್ಠ ಬೆಳವಣಿಗೆಯನ್ನು ಸಾಧಿಸಿರುವ ಕರ್ನಾಟಕವು ಕೈಗಾರಿಕಾ ಅಭಿವೃದ್ಧಿಯಲ್ಲಿಯೂ ಮುಂಚೂಣಿಯಲ್ಲಿದೆ. ಜೊತೆಗೆ, ಸಾರ್ಟ್‌ ಅಪ್‌ ಕ್ಯಾಪಿಟಲ್‌ ಆಫ್‌ ಇಂಡಿಯಾ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ.

ಗಣರಾಜ್ಯೋತ್ಸವದ ಸ್ತಬ್ಧಚಿತ್ರಕ್ಕಾಗಿ ಇಲಾಖೆಯು ಕಿತ್ತೂರು ರಾಣಿ ಚೆನ್ನಮ ಮತ್ತು ರಾಣಿ ಅಬ್ಬಕ್ಕದೇವಿ, ಕರ್ನಾಟಕ ಪುಷ್ಪ ವೈಭವ, ಹಲಗಲಿ ಬೇಡರು, ಸಿರಿಧಾನ್ಯದಿಂದ ಮೈಕ್ರೋಚಿಪ್‌ವರೆಗೆ ಎಂಬ ನಾಲ್ಕು ವಿಷಯಗಳನ್ನು ಆಯ್ಕೆ ಮಾಡಿ ಕಳುಹಿಸಿತ್ತು.
ಮೊದಲ ಸಭೆಯಲ್ಲಿಯೇ ಸಿರಿಧಾನ್ಯದಿಂದ ಮೈಕ್ರೋಚಿಪ್‌ ವರೆಗೆ ಎಂಬ ವಿಷಯವನ್ನು ಪರಿಣತರ ಸಮಿತಿಯು ಒಮತದಿಂದ ಅಂತಿಮಗೊಳಿಸಿತ್ತು. ಅದಕ್ಕನುಗುಣವಾಗಿ ಮಣ್ಣಿನಲ್ಲಿ ಸಿರಿಧಾನ್ಯಗಳನ್ನು ಬೆಳೆಸಿದ ದೇಶೀಯ ಜ್ಞಾನದಿಂದ ಮೈಕ್ರೋಚಿಪ್‌ಗಳನ್ನು ಉತ್ಪಾದಿಸುವ ಸೂಕ್ಷ್ಮತೆಯನ್ನು ಈ ಸ್ತಬ್ಧಚಿತ್ರ ಮನಮುಟ್ಟುವಂತೆ ಕಟ್ಟಿಕೊಡುತ್ತದೆ.

ವಿಷಯ ಆಯ್ಕೆಯ ಬಳಿಕ ಅದನ್ನು ವಿವಿಧ ಸ್ತರಗಳನ್ನು ನಿರೂಪಿಸಬೇಕಾಗಿತ್ತು. ಕರ್ನಾಟಕದ ಬಗೆಗಿನ ಅಭಿಮಾನ, ನಾಡಿನ ಹಿರಿಮೆ ಹಾಗೂ ಸಂಸ್ಕತಿಯ ಮಹತ್ವವನ್ನು ಎತ್ತಿಹಿಡಿಯುವ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರ ಪ್ರೋತ್ಸಾಹದ ನುಡಿಗಳೇ ಈ ಸವಾಲಿನ ಕೆಲಸಕ್ಕೆ ಮುನ್ನುಡಿ ಬರೆದವು.

ವಾರ್ತಾ ಮತ್ತು ಸಾರ್ವಜನಿಕ ಸಂರ್ಪಕ ಇಲಾಖೆಯ ಕಾರ್ಯದರ್ಶಿ ಬಿ.ಬಿ. ಕಾವೇರಿ ಅವರ ಸಲಹೆ – ಸೂಚನೆಗಳು ಸ್ತಬ್ಧಚಿತ್ರದ ಕೆಲಸವನ್ನು ಸುಗಮವಾಗಿಸಿತ್ತು ಎಂದು ವಾರ್ತಾ ಇಲಾಖೆಯ ಆಯುಕ್ತರು ಹೇಳಿದರು.ಪರಂಪರೆಯಿಂದ ಪ್ರಗತಿಯತ್ತ, ಮಣ್ಣಿನಿಂದ ಯಂತ್ರಗಳತ್ತ ಸಾಗುತ್ತಿರುವ ಕರ್ನಾಟಕದ ಆತ್ಮನಿರ್ಭರ ಪಯಣದ ಸಾರವಾಗಿದೆ.

ಪ್ರಶಸ್ತಿಗಳ ಸರಮಾಲೆ :
2022ರಲ್ಲಿ ಇಲಾಖೆಯು ಪ್ರದರ್ಶಿಸಿದ್ದ ಸಾಂಪ್ರದಾಯಿಕ ಕಸೂತಿ ತೊಟ್ಟಿಲುಗೆ ದ್ವಿತೀಯ ಪ್ರಶಸ್ತಿ, 2015ರಲ್ಲಿ ರಾಜ್ಯವು ಚನ್ನಪಟ್ಟಣದ ಗೊಂಬೆಗಳಿಗೆ ತೃತೀಯ, 2012ರಲ್ಲಿ ದಕ್ಷಿಣ ಕನ್ನಡ ಭೂತಾರಾಧನೆಗೆ ತೃತೀಯ, 2011ರಲ್ಲಿ ಬೀದರ್‌ ನ ಪಾರಂಪರಿಕ ಕಲೆಯಾದ ಬಿದರಿ ಸ್ತಬ್ಧಚಿತ್ರಕ್ಕೆ ದ್ವಿತೀಯ ಮತ್ತು 2008ರಲ್ಲಿ ಹೊಯ್ಸಳ ವಾಸ್ತುಶಿಲ್ಪ ಕ್ಕೆ ದ್ವಿತೀಯ ಪ್ರಶಸ್ತಿ ಸಂದಿತ್ತು.

2005ರಲ್ಲಿ ವೈರಾಗ್ಯಮೂರ್ತಿ ಬಾಹುಬಲಿಯ ಮಹಾಮಸ್ತಕಾಭಿಷೇಕದ ಸ್ತಬ್ಧಚಿತ್ರಕ್ಕೆ ಪ್ರಥಮ ಪ್ರಶಸ್ತಿ ದೊರೆತಿತ್ತು. 2008ರಲ್ಲಿ ಹೊಯ್ಸಳ ಕಲೆಯ ಸ್ತಬ್ಧಚಿತ್ರವು ದ್ವಿತೀಯ ಪ್ರಶಸ್ತಿಯ ಜೊತೆಗೆ ಅತ್ಯುತ್ತಮ ನಿರೂಪಣೆ ಮತ್ತು ಅತ್ಯುತ್ತಮ ಫ್ಯಾಬ್ರಿಕೇಷನ್‌ಗಾಗಿ ಪ್ರಶಸ್ತಿ ಲಭಿಸಿತ್ತು. ಒಂದೇ ಸ್ತಬ್ಧಚಿತ್ರಕ್ಕಾಗಿ ಮೂರು ಪ್ರಶಸ್ತಿಗಳನ್ನು ಪಡೆದಂತಹ ಅಪರೂಪದ ಸಾಧನೆಯನ್ನು ನಮ ರಾಜ್ಯವು ಮಾಡಿದೆ ಎನ್ನುವುದು ಹೆಮೆಯ ಸಂಗತಿ ಎಂದು ಆಯುಕ್ತರು ತಿಳಿಸಿದ್ದಾರೆ.

RELATED ARTICLES

Latest News