ನವದೆಹಲಿ,ಡಿ.25- ಹಲವಾರು ಉತ್ತಮ ಯೋಜನೆಗಳನ್ನು ಜಾರಿಗೊಳಿಸುತ್ತಿರುವ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ನಕಲಿ ಪ್ರಕರಣದಲ್ಲಿ ಬಂಧಿಸಲು ತಯಾರಿ ನಡೆಸಲಾಗುತ್ತಿದೆ ಎಂದು ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದಾರೆ.
ಮಹಿಳಾ ಸವಾನ್ ಮತ್ತು ಸಂಜೀವನಿ ಯೋಜನೆಯಂತಹ ಕಲ್ಯಾಣ ಉಪಕ್ರಮಗಳ ಸರ್ಕಾರದ ಘೋಷಣೆಯಿಂದ ಕೆಲವು ಜನರು ನಲುಗಿ ಹೋಗಿರುವುದರಿಂದ ದೆಹಲಿ ಮುಖ್ಯಮಂತ್ರಿ ಅತಿಶಿ ಅವರನ್ನು ಶೀಘ್ರದಲ್ಲೇ ನಕಲಿ ಪ್ರಕರಣದಲ್ಲಿ ಬಂಧಿಸಲಾಗುವುದು ಎಂದು ಕೇಜ್ರಿವಾಲ್ ಎಕ್‌್ಸ ಮಾಡಿದ್ದಾರೆ.
ಎಎಪಿಯ ಆಡಳಿತದ ಕಾರ್ಯಸೂಚಿಯನ್ನು ಹಳಿತಪ್ಪಿಸಲು ಎಎಪಿ ನಾಯಕರ ಮೇಲೆ ದಾಳಿ ನಡೆಸಲಾಗುತ್ತಿದೆ ಹಾಗೂ ಸರ್ಕಾರದ ಉತ್ತಮ ಕಾರ್ಯಗಳಿಗೆ ಅಡ್ಡಿಪಡಿಸುವ ಉದ್ದೇಶದಿಂದ ಇಂತಹ ಕ್ರಮ ಜರುಗಿಸಲಾಗುತ್ತಿದೆ ಎಂದು ಅವರು ದೂರಿದ್ದಾರೆ.
ಮಹಿಳಾ ಸವಾನ್ ಯೋಜನೆ ಮತ್ತು ಸಂಜೀವನಿ ಯೋಜನೆಯಿಂದ ಕೆಲವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಮುಂದಿನ ದಿನಗಳಲ್ಲಿ ಅತಿಶಿಯನ್ನು ಕಟ್ಟುಕಥೆಯಲ್ಲಿ ಬಂಧಿಸಲು ಯೋಜಿಸಿದ್ದಾರೆ. ಅದಕ್ಕೂ ಮೊದಲು ಹಿರಿಯ ಆಪ್ ನಾಯಕರ ಮೇಲೆ ದಾಳಿ ನಡೆಸಲಾಗುವುದು ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.