Thursday, December 26, 2024
Homeಜಿಲ್ಲಾ ಸುದ್ದಿಗಳು | District Newsಮೈಸೂರು | Mysuruಮೈಸೂರಿನ ಕೆಆರ್‌ಎಸ್‌‍ ರಸ್ತೆಗೆ ಸಿದ್ದರಾಮಯ್ಯನವರ ಹೆಸರು ನಾಮಕರಣಕ್ಕೆ ವಿರೋಧ

ಮೈಸೂರಿನ ಕೆಆರ್‌ಎಸ್‌‍ ರಸ್ತೆಗೆ ಸಿದ್ದರಾಮಯ್ಯನವರ ಹೆಸರು ನಾಮಕರಣಕ್ಕೆ ವಿರೋಧ

Proposal to name road in Mysuru after Siddaramaiah triggers debate

ಮೈಸೂರು, ಡಿ.25 (ಪಿಟಿಐ)– ನಗರದ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಮೈಸೂರು ನಗರ ಪಾಲಿಕೆಯ ಪ್ರಸ್ತಾವನೆಗೆ ತೀವ್ರ ಆಕ್ಷೇಪ ವ್ಯಕ್ತವಾಗಿದೆ. ಕೆಆರ್‌ಎಸ್‌‍ ರಸ್ತೆಯ ಲಕ್ಷೀ ವೆಂಕಟರಮಣಸ್ವಾಮಿ ದೇವಸ್ಥಾನದಿಂದ ಹೊರವರ್ತುಲ ರಸ್ತೆ ಜಂಕ್ಷನ್‌ವರೆಗಿನ ರಸ್ತೆಯನ್ನು ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ನಾಮಕರಣ ಮಾಡಲು ಪ್ರಸ್ತಾವನೆಯಲ್ಲಿ ಕೋರಲಾಗಿದೆ.

ಚಾಮರಾಜ ಕಾಂಗ್ರೆಸ್‌‍ ಶಾಸಕ ಹರೀಶ್‌ ಗೌಡ ಅವರ ಸಲಹೆಯನ್ನು ಆಧರಿಸಿ, ಮೈಸೂರು ಮಹಾನಗರ ಪಾಲಿಕೆ (ಎಂಸಿಸಿ) ನವೆಂಬರ್‌ 22 ರಂದು ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಂಡಿದೆ.

ಕೌನ್ಸಿಲ್‌ ಸಭೆಯಲ್ಲಿ ಮಂಡನೆಯಾಗುವ ಮೊದಲು ಮೈಸೂರು ಜಿಲ್ಲಾಧಿಕಾರಿ ಮುಂದೆ ವಿಷಯ ಮಂಡಿಸಲಾಯಿತು. ನಂತರ ಎಂಸಿಸಿ ಡಿಸೆಂಬರ್‌ 13 ರಂದು 30 ದಿನಗಳಲ್ಲಿ ಪ್ರಸ್ತಾವನೆಯ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯಗಳನ್ನು ಆಹ್ವಾನಿಸುವ ಪತ್ರಿಕೆಯ ಸೂಚನೆಯನ್ನು ನೀಡಿತು ಎಂದು ಮೂಲಗಳು ತಿಳಿಸಿವೆ.

ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸುತ್ತಿರುವ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು. ಹೀಗಾಗಿ ಅಲ್ಲಿನ ಕೆಆರ್‌ಎಸ್‌‍ ರಸ್ತೆಗೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ನಾಮಕರಣ ಮಾಡಿರುವ ಕ್ರಮ ಖಂಡನೀಯ ಎಂದು ಜೆಡಿಎಸ್‌‍ ಹೇಳಿದೆ.

ಮುಡಾ ಹಗರಣದಲ್ಲಿ ಭಾಗಿಯಾಗಿರುವ ಭ್ರಷ್ಟೞ ಮುಖ್ಯಮಂತ್ರಿಯ ಹೆಸರನ್ನು ರಸ್ತೆಗೆ ಹೆಸರಿಸಿರುವುದು ಐತಿಹಾಸಿಕ ಮೈಸೂರಿಗೆ ಮಾತ್ರವಲ್ಲದೆ ಇಡೀ ರಾಜ್ಯಕ್ಕೆ ಮಾಡಿದ ದ್ರೋಹ ಮತ್ತು ಅವಮಾನೞ ಎಂದು ಜೆಡಿಎಸ್‌‍ ಆರೋಪಿಸಿದೆ.

ಮುಡಾ ಪ್ರಕರಣದಲ್ಲಿ ಆರೋಪಿಯಾಗಿರುವ ಸಿದ್ದರಾಮಯ್ಯನವರ ಹೆಸರಿಡಲು ಅಧಿಕಾರ ಇಲ್ಲದಿದ್ದರೂ ಅವರ ಹೆಸರನ್ನು ರಸ್ತೆಗೆ ಹೆಸರಿಸಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಪ್ರಸ್ತಾವನೆಗೆ ಹಲವಾರು ನಾಗರಿಕರು ತಮ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಪ್ರಸ್ತಾವನೆಯನ್ನು ಕೈಬಿಡದಿದ್ದಲ್ಲಿ ಅದರ ವಿರುದ್ಧ ಕಾನೂನಾತಕವಾಗಿ ಹೋರಾಟ ನಡೆಸುತ್ತೇವೆ, ನಾವು ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸುತ್ತೇವೆ ಮತ್ತು ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಸ್ನೇಹಮಯಿ ಕೃಷ್ಣ ತಿಳಿಸಿದ್ದಾರೆ.

ಮೈಸೂರು ನಗರಾಭಿವದ್ಧಿ ಪ್ರಾಧಿಕಾರದಿಂದ (ಮುಡಾ) ಸಿದ್ದರಾಮಯ್ಯ ಪತ್ನಿ ಪಾರ್ವತಿ ಬಿಎಂ ಅವರಿಗೆ 14 ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪವಿದೆ. ಸೆಪ್ಟೆಂಬರ್‌ 27 ರಂದು ಮೈಸೂರಿನ ಲೋಕಾಯುಕ್ತ ಪೊಲೀಸರು ಎಫ್‌ಐಆರ್‌ನಲ್ಲಿ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಸಿದ್ದರಾಮಯ್ಯ, ಅವರ ಪತ್ನಿ, ಸೋದರ ಮಾವ ಮಲ್ಲಿಕಾರ್ಜುನ ಸ್ವಾಮಿ ಮತ್ತು ದೇವರಾಜು ಅವರ ಹೆಸರುಗಳನ್ನು ಉಲ್ಲೇಖಿಸಲಾಗಿದೆ.

RELATED ARTICLES

Latest News