Thursday, December 26, 2024
Homeರಾಷ್ಟ್ರೀಯ | Nationalವಾಜಪೇಯಿ ಜನ್ಮದಿನ : ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ನಮನ

ವಾಜಪೇಯಿ ಜನ್ಮದಿನ : ರಾಷ್ಟ್ರಪತಿ ಮುರ್ಮು, ಪ್ರಧಾನಿ ಮೋದಿ ಸೇರಿದಂತೆ ಗಣ್ಯರ ನಮನ

PM Modi pens article on Atal Bihari Vajpayee on 100th birth anniversary

ನವದೆಹಲಿ, ಡಿ 25 (ಪಿಟಿಐ) ದಿವಂಗತ ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತಿತರ ಗಣ್ಯರು ನಮನ ಸಲ್ಲಿಸಿದ್ದಾರೆ.

ವಾಜಪೇಯಿ ಅವರ ಜನಶತಮಾನೋತ್ಸವದ ಪ್ರಯುಕ್ತ ಅಟಲ್‌ ಸಾರಕದಲ್ಲಿ ನಡೆದ ಪ್ರಾರ್ಥನಾ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮತ್ತು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಗಣ್ಯರು ಪಾಲ್ಗೊಂಡಿದ್ದರು.

ಬಿಜೆಪಿಯ ಮಿತ್ರಪಕ್ಷಗಳಾದ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್‌ ಚಂದ್ರಬಾಬು ನಾಯ್ಡು ಮತ್ತು ಕೇಂದ್ರ ಸಚಿವರಾದ ಜೆಡಿಯುನ ಲಲನ್‌ ಸಿಂಗ್‌ ಮತ್ತು ಎಚ್‌ಎಎಂ(ಎಸ್‌‍)ನ ಜಿತಮ್‌ ರಾಮ್‌ ಮಾಂಝಿ ಸೇರಿದಂತೆ ಅಮಿತ್‌ ಶಾ ಮತ್ತು ಜೆಪಿ ನಡ್ಡಾ ಸೇರಿದಂತೆ ಕೇಂದ್ರ ಸಚಿವರು ಬಿಜೆಪಿ ಧೀಮಂತನಿಗೆ ನಮನ ಸಲ್ಲಿಸಿದರು.

ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಮತ್ತು ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಜೊತೆಗೆ ವಾಜಪೇಯಿ ಅವರ ದತ್ತು ಕುಟುಂಬದ ಸದಸ್ಯರು ಉಪಸ್ಥಿತರಿದ್ದರು.ವಾಜಪೇಯಿ ಅವರು ಸಾಂವಿಧಾನಿಕ ಮೌಲ್ಯಗಳನ್ನು ಹೇಗೆ ಕಾಪಾಡಿದರು ಮತ್ತು ದೇಶಕ್ಕೆ ಹೊಸ ದಿಕ್ಕು ಮತ್ತು ಆವೇಗವನ್ನು ಹೇಗೆ ನೀಡಿದರು ಎಂಬುದರ ಪರಿಣಾಮ ಶಾಶ್ವತವಾಗಿ ಉಳಿಯುತ್ತದೆ ಎಂದು ಮೋದಿ ಎಕ್‌್ಸನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಶುಭಾಶಯ ಕೋರಿದ ಹೆಚ್‌ಡಿಡಿ, ಹೆಚ್‌ಡಿಕೆ :
ಅಜಾತಶತ್ರು, ಕವಿ ಹೃದಯದ ಮೇರು ನಾಯಕ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಜನದಿನದ ಶುಭಾಶಯಗಳನ್ನು ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ ಅವರು ಕೋರಿದ್ದಾರೆ. ವಾಜಪೇಯಿಯವರ ಜನ ಶತಮಾನೋತ್ಸವ ವರ್ಷವಾಗಿದ್ದು, ಪ್ರಧಾನಮಂತ್ರಿಯಾಗಿ ಮತ್ತು ರಾಜಕೀಯ ಪಟುವಾಗಿ ನಮ ರಾಷ್ಟ್ರದ ಪ್ರಗತಿ ಮತ್ತು ಸ್ಥಿರತೆಗೆ ವಾಜಪೇಯಿ ಅವರ ಕೊಡುಗೆ ಅಪಾರವಾಗಿದೆ ಎಂದು ಗೌಡರು ಎಕ್ಸ್ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ನಾನು ಅವರೊಂದಿಗಿನ ನೆನಪುಗಳು ಸರಣೀಯವಾಗಿವೆ. ನಾವು ರಾಜಕೀಯ ವಿರೋಧಿಗಳಾಗಿದ್ದರೂ ಉತ್ತಮ ಸ್ನೇಹಿತರಾಗಿದ್ದೆವು ಎಂದು ಅವರು ಹೇಳಿದ್ದಾರೆ.
ಭಾರತೀಯ ರಾಜಕಾರಣದ ಅಜಾತಶತ್ರು, ಕವಿ ಹೃದಯದ ಮೇರು ನಾಯಕ, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಅವರಿಗೆ ಜನದಿನದ ಶ್ರದ್ಧಾಪೂರ್ವಕ ಗೌರವ ನಮನಗಳನ್ನು ಹೆಚ್‌.ಡಿ.ಕುಮಾರಸ್ವಾಮಿ ಸಲ್ಲಿಸಿದ್ದಾರೆ.

ಭಾರತದ ಅಭಿವೃದ್ಧಿ ಮತ್ತು ಶಾಂತಿ ಸ್ಥಾಪನೆಗೆ ಅಪಾರ ಕೊಡುಗೆ ನೀಡಿದ ವಾಜಪೇಯಿ ಅವರ ಜನ ಶತಾಬ್ದಿಯನ್ನು ಇಂದು ಆಚರಿಸಲಾಗುತ್ತಿದೆ. ಅವರ ಜನದಿನವನ್ನು 2014ರಲ್ಲಿಯೇ ಪ್ರಧಾನಿ ನರೇಂದ್ರಮೋದಿ ಅವರು ಸುಶಾಸನ ದಿವಸವೆಂದು ಘೋಷಣೆ ಮಾಡಿದ್ದಾರೆ ಎಂದು ಪೋಸ್ಟ್‌ ಮಾಡಿದ್ದಾರೆ.

RELATED ARTICLES

Latest News