Friday, January 23, 2026
Homeರಾಜ್ಯಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧ ತೆರವುಗೊಳಿಸಿದ ಹೈಕೋರ್ಟ್‌

ಬೆಂಗಳೂರಲ್ಲಿ ಬೈಕ್‌ ಟ್ಯಾಕ್ಸಿ ನಿಷೇಧ ತೆರವುಗೊಳಿಸಿದ ಹೈಕೋರ್ಟ್‌

Relief For Commuters In Bengaluru As Karnataka High Court Lifts Ban On Bike Taxis

ಬೆಂಗಳೂರು, ಜ.23-ನಗರದಲ್ಲಿ ಬೈಕ್‌ ಟ್ಯಾಕ್ಸಿ ಸೇವೆಗೆ ವಿಧಿಸಿದ್ದ ನಿಷೇಧವನ್ನು ಹೈಕೋರ್ಟ್‌ ರದ್ದುಗೊಳಿಸಿದೆ. ಈ ತೀರ್ಪು ನಗರದಲ್ಲಿ ಮತ್ತೆ ಬೈಕ್‌ ಟ್ಯಾಕ್ಸಿ ಸೇವೆ ಅರಂಭಿಸಲು ಗ್ರೀನ್‌ ಸಿಗ್ನಲ್‌ ದೊರಕಿಸಿಕೊಟ್ಟಂತಾಗಿದೆ.

ರಾಜ್ಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಹಾಗೂ ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದ ವಿಭಾಗೀಯ ಪೀಠ ಇಂದು ಈ ಮಹತ್ವದ ಆದೇಶ ಹೊರಡಿಸಿದೆ.
ಈ ಹಿಂದೆ ನಗರದಲ್ಲಿ ಬೈಕ್‌ ಟ್ಯಾಕ್ಸಿ ಸೇವೆ ನಿಷೇಧಿಸಿದ್ದ ಹೈಕೋರ್ಟ್‌ ಏಕಸದಸ್ಯ ಪೀಠದ ಆದೇಶವನ್ನು ದ್ವಿಸದಸ್ಯ ಪೀಠ ತೆರವುಗೊಳಿಸಿದೆ.

ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ ಇಂದು ಬೈಕ್‌ ಟ್ಯಾಕ್ಸಿ ಓಡಾಟಕ್ಕೆ ಸಮ್ಮತಿ ನೀಡಿದೆ.ರಾಜ್ಯ ಸರ್ಕಾರ ಬೈಕ್‌ ಟ್ಯಾಕ್ಸಿಗಳಿಗೆ ಹೇರಿದ್ದ ನಿಷೇಧ ಬಗ್ಗೆ ಒಲಾ, ಉಬರ್‌, ರ್ಯಾಪಿಡೋ ಸೇರಿದಂತೆ ಹಲವು ಅಗ್ರಿಗೇಟರ್‌ಗಳಿಂದ ಹೈಕೋರ್ಟ್‌ ಗೆ ಅರ್ಜಿ ಸಲ್ಲಿಕೆ ಮಾಡಿದ್ದವು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌ ವಿಭಾಗೀಯ ಪೀಠ ಬೈಕ್‌ ಟ್ಯಾಕ್ಸಿ ಮೇಲಿನ ನಿಷೇಧ ತೆರವುಗೊಳಿಸಿದೆ.

RELATED ARTICLES

Latest News