Wednesday, January 8, 2025
Homeರಾಜ್ಯಕೆಆರ್‌ಎಸ್‌‍ ರಸ್ತೆಗೆ ಸಿದ್ದರಾಮಯ್ಯನವರ ಹೆಸರು ನಾಮಕರಣ ಕುರಿತು ಹೇಳಿಕೆ ಬದಲಿಸಿದ ಪ್ರತಾಪ್‌ ಸಿಂಹ

ಕೆಆರ್‌ಎಸ್‌‍ ರಸ್ತೆಗೆ ಸಿದ್ದರಾಮಯ್ಯನವರ ಹೆಸರು ನಾಮಕರಣ ಕುರಿತು ಹೇಳಿಕೆ ಬದಲಿಸಿದ ಪ್ರತಾಪ್‌ ಸಿಂಹ

Pratap Simha changes his statement on naming KRS road after Siddaramaiah

ಮೈಸೂರು,ಡಿ.30- ಕೆಆರ್‌ಎಸ್‌‍ ರಸ್ತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹೆಸರು ನಾಮಕರಣ ಮಾಡುವ ವಿಚಾರದಲ್ಲಿ ಮಾಜಿ ಸಂಸದ ಪ್ರತಾಪ್‌ ಸಿಂಹ ತಮ್ಮ ಹೇಳಿಕೆಯನ್ನು ಬದಲಿಸಿದ್ದಾರೆ. ದಾಖಲೆಗಳಲ್ಲಿ ಮಹಾರಾಜರ ಕಾಲದಲ್ಲೇ ಪ್ರಿನ್ಸಸ್‌‍ ರಸ್ತೆ ಎಂದು ಹೆಸರಿದ್ದರೆ ಬದಲಾವಣೆ ಮಾಡುವುದು ಬೇಡ ಎಂದು ಹೇಳಿದರು.

ಸುದ್ದಿಗಾರರೊಂದಿಗೆ ಅವರು ಮಾತನಾಡಿದ ಅವರು, ಕೆಆರ್‌ಎಸ್‌‍ ರಸ್ತೆಗೆ ಪ್ರಿನ್ಸಸ್‌‍ ಎಂದು ಮಹಾರಾಜರ ಕಾಲದಲ್ಲೇ ಹೆಸರಿತ್ತು ಎನ್ನುವುದಾದರೇ ಬದಲಾವಣೆ ಮಾಡುವುದು ಬೇಡ. ಈ ವಿಚಾರದಲ್ಲಿ ನನ್ನ ತಕರಾರಿಲ್ಲ ಎಂದು ತಿಳಿಸಿದರು .ಹೆಸರು ಬದಲಾವಣೆ ಮಾಡುವುದು ಬೇಡ ಎಂದು ಸ್ಥಳೀಯ ಶಾಸಕ ಹರೀಶ್‌ ಗೌಡ ಅವರಿಗೆ ನಾನೇ ಮನವಿ ಮಾಡುತ್ತೇನೆ ಎಂದರು.

ಕೆಆರ್‌ಎಸ್‌‍ ರಸ್ತೆಗೆ ಅಧಿಕೃತ ಹೆಸರಿಲ್ಲ, ಖಾಲಿ ಇದೆ ಎನ್ನುವ ಕಾರಣಕ್ಕೆ ಸಿದ್ದರಾಮಯ್ಯ ಹೆಸರನ್ನು ಇಡಬಹುದು ಎಂದು ಹೇಳಿದ್ದೆ. ನೋಟಿಫಿಕೇಷನ್‌ ವಾಪಸ್‌‍ ತೆಗೆದುಕೊಳ್ಳಿ. ತಕರಾರು ಸಲ್ಲಿಸುವವರು ದಾಖಲೆಯನ್ನು ಒದಗಿಸಿ ಎಂದ ಅವರು, ಮೈಸೂರಿಗೆ ಮಹಾರಾಜರ ಕೊಡುಗೆ ಬಹಳಷ್ಟಿದೆ. ಜನಪ್ರತಿನಿಧಿಗಳ ಕೊಡುಗೆ ಕೂಡ ಇದೆ.

ಇಟ್ಟಿರುವ ಹೆಸರನ್ನು ಬದಲಾಯಿಸುವ ದಾಷ್ಟ್ಯ ನಮಗೆ ಬೇಡ ಎಂದು ಹೇಳಿದರು. ಹೊಸ ಬಡಾವಣೆ ಮಾಡಿ ಅಲ್ಲಿಗೆ ಸಿದ್ದರಾಮಯ್ಯ ಅವರ ಹೆಸರಿಟ್ಟರೆ ಅರ್ಥ ಪೂರ್ಣವಾಗುತ್ತದೆ ಎಂದು ಅವರು ತಿಳಿಸಿದರು.

RELATED ARTICLES

Latest News