Sunday, January 5, 2025
Homeರಾಜ್ಯಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ಗೃಹಸಚಿವ ಪರಮೇಶ್ವರ್

ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಿಐಡಿ ತನಿಖೆಗೆ : ಗೃಹಸಚಿವ ಪರಮೇಶ್ವರ್

Contractor Sachin's suicide case to be investigated by CID

ಬೆಂಗಳೂರು,ಡಿ.30- ಬೀದರ್ನಲ್ಲಿ ಸಚಿನ್ ಅವರ ಆತಹತ್ಯೆ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿದುಕೊಳ್ಳುವ ಸಲುವಾಗಿ ಮುಖ್ಯಮಂತ್ರಿಯವರೊಂದಿಗೆ ಚರ್ಚಿಸಿ ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗಿದೆ.

ವಿರೋಧಪಕ್ಷಗಳು ಹೇಳುವಂತೆ ಎಲ್ಲಾ ಪ್ರಕರಣಗಳನ್ನು ಸಿಬಿಐಗೆ ನೀಡಲು ಸಾಧ್ಯವಿಲ್ಲ. ನಮ ತನಿಖಾ ಸಂಸ್ಥೆಯ ಸಾಮರ್ಥ್ಯ ಉತ್ತಮವಾಗಿದೆ. ಹಲವಾರು ಪ್ರಕರಣಗಳಲ್ಲಿ ಸಿಐಡಿ ವರದಿಗಳು ಬಂದಿದೆ. ಬಿಜೆಪಿಯವರು ಹೇಳಿದ್ದನ್ನೆಲ್ಲಾ ನಾವು ಕೇಳುವುದಿಲ್ಲ. ಸಕಾರಾತಕ ಟೀಕೆಗಳಿದ್ದರೆ ನಾವು ಸ್ವಾಗತ ಮಾಡುತ್ತೇವೆ. ಅನಗತ್ಯವಾಗಿ ಎಲ್ಲವನ್ನೂ ಟೀಕಿಸಿ, ರಾಜಕೀಯ ಮಾಡಿದರೆ ಅದನ್ನು ಪರಿಗಣಿಸುವುದಿಲ್ಲ ಎಂದರು.

ಸಚಿನ್ ಪ್ರಕರಣದಲ್ಲಿ ಪ್ರಾಥಮಿಕ ಮಾಹಿತಿಯನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ. ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮೇಲೆ ಬಿಜೆಪಿಯವರು ಆರೋಪ ಮಾಡಿದ್ದಾರೆ. ಸಚಿವರ ವಿರುದ್ಧ ಅನಗತ್ಯವಾಗಿ ಆರೋಪ ಮಾಡುವುದು ಯಾವುದೇ ಸರ್ಕಾರಕ್ಕೆ ಶೋಭೆ ತರುವುದಿಲ್ಲ. ಅನವಶ್ಯಕವಾಗಿ ಪ್ರಿಯಾಂಕ್ ಖರ್ಗೆಯವರ ಹೆಸರಿಗೆ ಮಸಿ ಬಳಿಯುವ ಪ್ರಯತ್ನಗಳನ್ನು ಮಾಡುತ್ತಿದ್ದಾರೆ. ಅದರ ಸತ್ಯಾಸತ್ಯತೆ ತಿಳಿಯಬೇಕು ಎಂದು ನಿನ್ನೆಯೇ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು ಹೇಳಿದರು.

ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುವ ಅಗತ್ಯವಿಲ್ಲ. ಬಿಜೆಪಿಯವರು ಅನಗತ್ಯವಾಗಿ ಅವರ ಹೆಸರನ್ನು ಪ್ರಸ್ತಾಪಿಸಿ ರಾಜೀನಾಮೆ ನೀಡುತ್ತಿದ್ದಾರೆ. ಹೆಸರಿಗೆ ಮಸಿ ಬಳಿಯುವ ಯತ್ನ ನಡೆಸುತ್ತಿದ್ದಾರೆ ಎಂದು ತಿರುಗೇಟು ನೀಡಿದರು.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಅಧಿವೇಶನದಲ್ಲಿ ಬಿಜೆಪಿಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ, ಸಚಿವೆ ಲಕ್ಷ್ಮೀಹೆಬ್ಬಾಳ್ಕರ್ ಅವರನ್ನು ಅವಹೇಳನ ಮಾಡಿದ ಪ್ರಕರಣವನ್ನು ಸಿಐಡಿಗೆ ವಹಿಸಲಾಗಿದ್ದು, ಪೊಲೀಸ್ ಅಧಿಕಾರಿಗಳು ಅವರ ಪಾಲಿನ ಕರ್ತವ್ಯವನ್ನು ಅವರು ಮಾಡುತ್ತಾರೆ. ತನಿಖೆ ಆರಂಭ ಮಾಡಿದ್ದಾರೆ. ಸತ್ಯಾಸತ್ಯತೆ ಹೊರಬರಲಿದೆ ಎಂದರು.

ವಿಧಾನಪರಿಷತ್ನ ಸಭಾಂಗಣದಲ್ಲಿ ನಡೆದ ಘಟನೆಯನ್ನು ಮಹಜರು ಮಾಡಲು ಸಭಾಧ್ಯಕ್ಷರು ಅವಕಾಶ ನೀಡದೇ ಇರುವುದೂ ಸೇರಿದಂತೆ ಯಾವುದೇ ವಿಚಾರಗಳಿಗೆ ನಾನು ಪ್ರತಿಕ್ರಿಯಿಸುವುದಿಲ್ಲ. ಮೊದಲು ಸತ್ಯಾಸತ್ಯತೆ ಹೊರಬರಲಿ ಎಂದರು.ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಹೈಕೋರ್ಟ್ ನೀಡಿರುವ ಮಧ್ಯಂತರ ಜಾಮೀನನ್ನು ರದ್ದುಗೊಳಿಸುವಂತೆ ಸುಪ್ರೀಂಕೋರ್ಟ್ಗೆ ಮೇಲನವಿ ಸಲ್ಲಿಸುವ ವಿಚಾರದಲ್ಲಿ ಕಾನೂನಿನ ಅನುಸಾರ ಪ್ರಕ್ರಿಯೆಗಳನ್ನು ಪಾಲನೆ ಮಾಡಲಾಗುತ್ತದೆ ಎಂದು ಹೇಳಿದರು.

RELATED ARTICLES

Latest News